Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನೂನು ಪದವೀಧರರ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ ಕಾನೂನು ತರಬೇತಿ ಭತ್ಯೆಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.


ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನ.
ನಿಬಂಧನೆಗಳು:
ಅಭ್ಯರ್ಥಿಯು ಬಳ್ಳಾರಿ ಜಿಲ್ಲೆಯವರಾಗಿರಬೇಕು. ಪ್ರವರ್ಗ-1, ಪ್ರವರ್ಗ-2(), ಪ್ರವರ್ಗ-3() ಮತ್ತು ಪ್ರವರ್ಗ-3(ಬಿ)ಗೆ ಸೇರಿದವರಾಗಿರಬೇಕು. ಶೇಕಡವಾರು ಪ್ರವರ್ಗ-1 ರಲ್ಲಿ 2 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಉಳಿದ ವರ್ಗಗಳಲ್ಲಿ ನಿಯಮಾನುಸಾರ 8 ಅಭ್ಯರ್ಥಿಗಳು ಸೇರಿ ಒಟ್ಟು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿರಬೇಕು.

ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ 4 ಸಾವಿರ ರೂ.ಗಳ ತರಬೇತಿ ಭತ್ಯೆ ನೀಡಲಾಗುವುದು.


ಕಾನೂನು ತರಬೇತಿಗೆ ಬಳ್ಳಾರಿ ಜಿಲ್ಲೆಯಿಂದ 10 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವರ್ಗ-1 ರಲ್ಲಿ ಶೇ.15 ರಷ್ಟು 2 ಅಭ್ಯರ್ಥಿಗಳು, ಪ್ರವರ್ಗ-2() ಶೇ.53 ರಷ್ಟು 5 ಅಭ್ಯರ್ಥಿಗಳು, ಪ್ರವರ್ಗ-3() ಶೇ.15ರಷ್ಟು 1 ಅಭ್ಯರ್ಥಿ, ಪ್ರವರ್ಗ-3(ಬಿ) ಶೇ.17 ರಷ್ಟು 2 ಅಭ್ಯರ್ಥಿಗಳು ಸೇರಿ ಒಟ್ಟು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.


ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ (ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಕ್ಕೆ) ಇರುತ್ತದೆ. ತರಬೇತಿಯ ಅವಧಿಯ ಮಧ್ಯಭಾಗದಲ್ಲಿ ಅಭ್ಯರ್ಥಿಯು ತರಬೇತಿಗೆ ಗೈರು ಹಾಜರಾದಲ್ಲಿ ಪಡೆಯಲಾಗಿರುವ ತರಬೇತಿ ಭತ್ಯೆಯ ಹಣವನ್ನು ಬಡ್ಡಿಯೊಂದಿಗೆ ಪಾವತಿಸಬೇಕಾಗುವುದು.


ವಾರ್ಷಿಕ ಆದಾಯ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ, ಪ್ರವರ್ಗ-2, 3ಎ ಮತ್ತು 3ಬಿ ರೂ.2.50 ಲಕ್ಷಗಳ ವಾರ್ಷಿಕ ಆದಾಯದ ಮಿತಿಯನ್ನು ನಿಗದಿಪಡಿಸಲಾಗಿದೆ.


ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಸಮಿತಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ಸರ್ಕಾರಿ ವಕೀಲರು ಅಥವಾ ಕನಿಷ್ಟ 15 ವರ್ಷಗಳ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು.
ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


ಬೇಕಾದ ದಾಖಲೆ:
ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಮತ್ತು ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸುವುದು.
ಹೆಚ್ಚಿನ ವಿವರಗಳಿಗಾಗಿ  www.ballari.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-275751 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ