Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಉದ್ಘಾಟಿಸಿ ಮಾತನಾಡಿದ ಅವರು,

ಭಾರತ ಸಂವಿಧಾನವಿಶ್ವದಲ್ಲಿಯೇ ಅತ್ಯಂತ ಬೃಹತ್ ಸಂವಿಧಾನವಾಗಿದೆ. ಬೃಹತ್ ಸಂವಿಧಾನವಿದ್ದರೂ ನಾವು ಹೊಸ ಹೊಸ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ದಿನ ನಿತ್ಯದ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಬೇಕಾದ ಕಾನೂನುಗಳನ್ನು ಸಂವಿಧಾನದಲ್ಲಿ ನಾವು ನೋಡಲು ಸಾಧ್ಯವಾಗುವುದಿಲ್ಲ.

ಆದರೆ ಯಾವುದೇ ಕಾನೂನು ಜಾರಿಗೆ ತರಬೇಕಾದರೆ ಸಂವಿಧಾನದ ಆಶಯಕ್ಕೆ ಅನುಗುಣವಾಗಿಯೇ ಕಾನೂನು ಜಾರಿಗೆ ತರಬೇಕಾಗುತ್ತದೆ. ವಿಶ್ವದಲ್ಲಿಯೇ ಹೆಚ್ಚಿನ ಜನಸಂಖ್ಯೆ ಹೊಂದಿರುವ ದೇಶದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಸರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.

ಜನಸಾಮಾನ್ಯರಿಗೆ ಕಾನೂನು ನೆರವು ನೀಡುವುದು ಮಾತ್ರವಲ್ಲದೇ ಲೋಕ ಅದಲಾತ್, ಮಧ್ಯಸ್ಥಿಕೆ,  ರಾಜಿ ಸಂಧಾನ ಪ್ರಕರಣಗಳನ್ನು ಇತ್ಯರ್ಥಕ್ಕೆ ಕ್ರಮವಹಿಸುವ ಮೂಲಕ  ಜನರಿಗೆ ಶೀಘ್ರವಾಗಿ ನ್ಯಾಯವನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಮಾತನಾಡಿ, ಪ್ರತಿ ವರ್ಷ ನವೆಂಬರ್ 09ರಂದು ಕಾನೂನು ಸೇವೆಗಳ ದಿನಾಚರಣೆ ಆಚರಿಸಲಾಗುತ್ತಿದೆ. ಯಾವೊಬ್ಬ ಭಾರತೀಯ ನಾಗರೀಕನು ಕೂಡ ಆರ್ಥಿಕ ದಿವಾಳಿತನದಿಂದ, ನ್ಯಾಯ ಪಡೆಯುವಲ್ಲಿ ವಂಚಿತನಾಗಬಾರದು ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ.

ಅದರಂತೆ  ಪ್ರತಿಯೊಬ್ಬ ನಾಗರೀಕನಿಗೂ ಕೂಡ ಉಚಿತ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ 1987ರಲ್ಲಿಯೇ ಕಾನೂನು ಸೇವಗಳ ಪ್ರಾಧಿಕಾರ ಕಾಯ್ದೆಯನ್ನು ಜಾರಿಗೊಳಿಸಿದೆ ಎಂದು ತಿಳಿಸಿದ ಅವರು,  ಪ್ರತಿಯೊಬ್ಬರು ಕಾನೂನಿನ ಮಾಹಿತಿ ಹೊಂದಿರಬೇಕು ಎಂದರು.

ಪ್ರಧಾನ ಕಾನೂನು ಅಭಿರಕ್ಷಕ ಎಸ್. ವಿಜಯ್ ಕುಮಾರ್ ಕಾನೂನು ಸೇವೆಗಳ ಪ್ರಾಧಿಕಾರ-1987 ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಹೆಚ್.ಗುಡ್ಡದೇಶ್ವರಪ್ಪ, ವಕೀಲರ ಸಂಘದ ಕಾರ್ಯದರ್ಶಿ ಅರ್.ಗಂಗಾಧರ್, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ