ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೋಳಿ ಫಾರಂ ಮೇಲೆ ನಡು ರಾತ್ರಿಯಲ್ಲಿ ಚಿರತೆ ದಾಳಿ ಮಾಡಿರುವ ಘಟನೆ ಸೋಮಶೆಟ್ಟಿ ಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ.ಸೋಮಶೆಟ್ಟಿ ಹಳ್ಳಿ ಗ್ರಾಮದ ಕೆಂಪೇಗೌಡ ಎಂಬವರಿಗೆ ಸೇರಿದ ಕೋಳಿ ಫಾರಂ ಇದಾಗಿದ್ದು, ಫಾರಂ ನಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಮರಿಗಳನ್ನು ಕೆಂಪೇಗೌಡ ಸಾಕಾಣಿಕೆ ಮಾಡುತ್ತಿದ್ದರು.
ಕಳೆದ ಎರಡು ದಿನದ ಹಿಂದೆ ತಡರಾತ್ರಿ ಚಿರತೆ ಹಾಗೂ ಅದರ ಮರಿಗಳು ಕೋಳಿ ಫಾರಂಗೆ ನುಗ್ಗಿ 950 ಕ್ಕೂ ಹೆಚ್ಚು ಕೋಳಿ ಮರಿಗಳನ್ನು ಕೊಂದಿವೆ.ಇದರಿಂದ ರೈತ ಕೆಂಪೇಗೌಡರಿಗೆ ಒಂದೂವರೆ ಲಕ್ಷ ಮೌಲ್ಯದ ಕೋಳಿಗಳ ಸಾವಿನಿಂದ ಸಾಕಷ್ಟು ನಷ್ಟ ಉಂಟಾಗಿದೆ.
ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿರತೆ ಕೋಳೂರು ಗ್ರಾಮದ ಮೀಸಲು ಅರಣ್ಯ ಪ್ರದೇಶದಿಂದ ಬಂದಿರುವ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವನ್ಯಮೃಗಗಳ ಹಾವಳಿಯಿಂದ ಜಾನುವಾರುಗಳನ್ನು ಕಳೆದುಕೊಳ್ಳುತ್ತಿರುವ ರೈತರಿಗೆ ಚಿರತೆ ದಾಳಿಯಿಂದ ಮತ್ತಷ್ಟು ಆತಂಕ ಶುರುವಾಗಿದೆ.
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.