Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮುಖ್ಯ ಚುನಾವಣಾಧಿಕಾರಿ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
, ಅವರು ತಮ್ಮ ಹುದ್ದೆಗೆ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ಸುಪ್ರೀಂ ಕೋರ್ಟ್‌ಗೆ ಹಮ್ಮಿಕೊಂಡಿದ್ದ ಮೆರವಣಿಗೆಗೂ ಮುನ್ನ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, "ಜ್ಞಾನೇಶ್ ಕುಮಾರ್ ಅವರೇ ನೀವು ತಪ್ಪು ಮಾಡಿದ್ದೀರಿ. ಆ ತಪ್ಪಿನ ಹಿಂದಿನ ಸೂತ್ರಧಾರ ನೀವಲ್ಲ, ನೀವು ಒತ್ತಡದಲ್ಲಿದ್ದೀರಿ ಎಂಬುದೂ ನಮಗೆ ಗೊತ್ತು. ಎಲ್ಲ ತಪ್ಪುಗಳನ್ನು ಒಪ್ಪಿಕೊಂಡು ನಿಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಮಾಫಿ ಸಾಕ್ಷಿಯಾಗಿ" ಎಂದು ಒತ್ತಾಯಿಸಿದರು.

Advertisement

ಸಂವಿಧಾನದ ಆಶಯಗಳು ಗೆಲ್ಲುವವರೆಗೆ ಮತ್ತು ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೆ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ ರಾಹುಲ್ ಗಾಂಧಿ, ವಿರೋಧ ಪಕ್ಷಗಳ ಮೆರವಣಿಗೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಿಯೋಜಿಸಲಾದ ಭಾರಿ ಭದ್ರತೆಯ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

"ಕೇವಲ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ದೆಹಲಿಯನ್ನು ದಿಗ್ಬಂಧನಕ್ಕೆ ಒಳಪಡಿಸಿದೆ. ರಸ್ತೆಗಳಲ್ಲಿ 30 ಸಾವಿರ ಭದ್ರತಾ ಸಿಬ್ಬಂದಿ ಏಕೆ ಇದ್ದಾರೆ? ಭಾರತದ ರಾಜಧಾನಿ ಏಕೆ ಜೈಲಿನಂತಾಗಿದೆ?" ಎಂದು ಪ್ರಶ್ನಿಸಿದ ಅವರು, ರಾಷ್ಟ್ರ ರಾಜಧಾನಿಯಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಮುಕ್ತವಾಗಿ ಓಡಾಡಲು ಹಾಗೂ ಪ್ರತಿಭಟಿಸುತ್ತಿರುವ ಯುವಕರ ಮೇಲೆ ಹಲ್ಲೆ ನಡೆಸಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿದರು.

ಮುಂದುವರಿದು ಮಾತನಾಡಿದ ಅವರು, "ಸಿಇಸಿ ಅವರನ್ನು ರಕ್ಷಿಸುವ ಮೂಲಕ ಸರ್ಕಾರವು ದೊಡ್ಡ ತಪ್ಪು ಮಾಡುತ್ತಿದೆ. ಇದು ಜನರು ಹಾಗೂ ಮೋದಿ, ಶಾ ಮತ್ತು ಜ್ಞಾನೇಶ್ ನಡುವಿನ ಹೋರಾಟವಾಗಿದೆ. ಎಲ್ಲಾ ವಿರೋಧ ಪಕ್ಷಗಳು ಒಂದು ಕಡೆಯಿದ್ದರೆ, ಭಾರತವನ್ನು ತಮ್ಮ ವಶಕ್ಕೆ ತೆಗೆದುಕೊಂಡಿರುವ ನರೇಂದ್ರ ಮೋದಿ, ಅಮಿತ್ ಶಾ, ಅಜಿತ್ ದೋವಲ್ ಮತ್ತು ಜ್ಞಾನೇಶ್ ಕುಮಾರ್ ಇನ್ನೊಂದು ಕಡೆಯಲ್ಲಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ಸ್ಫೋಟಕ ಹೇಳಿಕೆ ನೀಡಿರುವ ರಾಹುಲ್ ಗಾಂಧಿ, "ಕೇಂದ್ರ ಸರ್ಕಾರದಲ್ಲಿನ 200ಕ್ಕೂ ಅಧಿಕ ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ), ಸಿಬಿಐ ಮತ್ತು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಎಲ್ಲಾ ಬೆಳವಣಿಗೆಗಳ ಬಗ್ಗೆ ನಮಗೆ ನಿರಂತರವಾಗಿ ಮಾಹಿತಿ ರವಾನಿಸುತ್ತಿದ್ದಾರೆ" ಎಂದು ತಿಳಿಸಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಬಿಡುಗಡೆಲಿಂಗನಹಳ್ಳಿ ಗ್ರಾಮದಲ್ಲಿ ವೀರಗಲ್ಲು, ಮಾಸ್ತಿ ಗಲ್ಲು ಪತ್ತೆಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ:ಕೃಷ್ಣಪ್ಪ ಖ್ಯಾತ ನಟ ರಂಗಾಯಣ ರಘು ಭೇಟಿ: 'ಪ್ರೇಮದ ಊರಲ್ಲಿ' ಸಿನಿಮಾ ವೀಕ್ಷಿಸುವಂತೆ ಆತ್ಮೀಯ ಮನವಿಸೊಂಡೆಕೆರೆ ಗ್ರಾಮದ ಬಸಣ್ಣ ನಿಧನಹಿರಿಯ ಪತ್ರಕರ್ತ ಬಂಡಿಗಡಿ ನಂಜುಂಡಪ್ಪ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪಶ್ರೀರಂಗಪಟ್ಟಣದಿಂದ ಮೈಸೂರಿಗೆ ಬಂದ ದಸರಾ ವೈಭವ:…ಮಳೆಯಿಲ್ಲದೆ ಒಣಗಿದ ಜೋಳದ ಹೊಲ ವೀಕ್ಷಿಸಿದ ನಿಖಿಲ್ ಕುಮಾರಸ್ವಾಮಿ; ​HMT ಕಾರ್ಖಾನೆಯ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ರಣತಂತ್ರ: ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಮಾಲೋಚನಾ ಸಭೆ