ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾದಲ್ಲಿ ಸೈಟ್‌ಗಳ ಹಂಚಿಕೆಯ ಪರಿಹಾರಾರ್ಥ ರಾಜಕೀಯ ಪ್ರಭಾವದಿಂದಾಗಿ ಐಷಾರಾಮಿ ಬಡಾವಣೆಯಲ್ಲಿ ಬದಲಿ ಸೈಟ್ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಪಡೆದಿದ್ದಾರೆ ಹಾಗೂ ತಪ್ಪು ಮಾಹಿತಿ, ಪ್ರಭಾವ ಆಧರಿಸಿ ಕಾನೂನು ಬಾಹಿರ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತನ್ನ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಉಲ್ಲೇಖಿಸಿದೆ ಬಿಜೆಪಿ ತಿಳಿಸಿದೆ.
ಮುಡಾ ದಾಖಲೆಯನ್ನು ವೈಟ್ನರ್‌ಹಾಕಿ ತಿರುಚಿದ್ದ ಸಿದ್ದರಾಮಯ್ಯ ಅವರ ಬ್ರಹ್ಮಾಂಡ ಭ್ರಷ್ಟಾಚಾರದ ಆಳ ಮತ್ತು ಅಗಲ ಜಾರಿ ನಿರ್ದೇಶನಾಲಯ ತನಿಖೆಯಿಂದ ಈಗ ಬಯಲಾಗಿದೆ ಬಿಜೆಪಿ ಆರೋಪಿಸಿದೆ.
ಸಿದ್ದರಾಮಯ್ಯನವರೇ ಜೈಲಿಗೆ ಹೋಗುವ ಮುನ್ನ ರಾಜೀನಾಮೆ ಕೊಟ್ಟು ಸಿಎಂ ಸ್ಥಾನದ ಘನತೆಯನ್ನು ಕಾಪಾಡಿ ಎಂದು ಬಿಜೆಪಿ ತಾಕೀತು ಮಾಡಿದೆ.


