Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆ.13ರನ್ನು ಮಹಿಳಾ ನೌಕರರ ದಿನಾಚರಣೆ ಘೋಷಿಸಲಿ- ರಾಜ್ಯಾಧ್ಯಕ್ಷೆ ರೋಶಿನಿಗೌಡ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಬೀದರ್‌ನಿಂದ ಚಾಮರಾಜನಗರದವರೆಗೆ ಪ್ರವಾಸ ಕೈಗೊಂಡು ರಾಜ್ಯ ಸರ್ಕಾರಿ ಮಹಿಳಾ ನೌಕರರನ್ನು ಸಂಘಟಿಸಲಾಗುವುದೆಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶಿನಿಗೌಡ ತಿಳಿಸಿದರು.


ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರವಾಸದ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಗುವುದು. ಮಹಿಳೆಯರಿಗೆ ವೈದ್ಯಕೀಯ ತಪಾಸಣೆ, ಕಾನೂನು ಅರಿವು ಕುರಿತು ಕಾರ್ಯಾಗಾರ ನಡೆಸುವ ಮೂಲಕ ಜಾಗೃತಿ ಮೂಡಿಸಲಾಗುವುದು.

ಮಹಿಳಾ ನೌಕರರ ಮೇಲೆ ಹಲ್ಲೆ, ಕಿರುಕುಳ, ದೌರ್ಜನ್ಯ ನಡೆಸುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದೆಂದರು.

ಸಂಘಟನೆ ಹುಟ್ಟಿಕೊಂಡು ಎರಡುವರೆ ವರ್ಷಗಳಾಗಿದೆ. ರಾಜ್ಯದ ೨೦ ಜಿಲ್ಲೆಗಳಲ್ಲಿ ಸಂಘಟನೆಯಿದೆ. ಉಳಿದ ಜಿಲ್ಲೆಗಳಲ್ಲಿಯೂ ಸರ್ಕಾರಿ ಮಹಿಳಾ ನೌಕರರನ್ನು ಸಂಘಟಿಸಿ ಸ್ವಾಭಿಮಾನ, ರಕ್ಷಣೆ, ಬದ್ದತೆ, ಹೇಗೆ ಹಕ್ಕು ಪ್ರತಿಪಾದಿಸಬೇಕೆನ್ನುವುದರ ಕುರಿತು ಅರಿವು ಮೂಡಿಸಲಾಗುವುದು. ಆರೋಗ್ಯ ಸಂಜೀವಿನಿ ಯೋಜನೆ

ಪುನರ್ ಪರಿಶೀಲಿಸುವುದು ಸೇರಿದಂತೆ ಎನ್.ಪಿ.ಎಸ್. ರದ್ದುಪಡಿಸಿ ಓ.ಪಿ.ಎಸ್. ಯೋಜನೆ ಜಾರಿಗೆ ತರುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದರು.

ಮುಂದಿನ ಅಧಿವೇಶನದಲ್ಲಿ ಋತುಚಕ್ರ ರಜೆ ಕಾಯಿದೆ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ. ಸೆ.೧೩ ರನ್ನು ಮಹಿಳಾ ನೌಕರರ ದಿನಾಚರಣೆಯೆಂದು ಘೋಷಿಸುವಂತೆ ಸರ್ಕಾರವನ್ನು ಕೇಳಿದ್ದೇವೆ. ಶಿಶುಪಾಲನಾ ಕೇಂದ್ರ ಸ್ಥಾಪನೆಗೂ ನಮ್ಮ ಬೇಡಿಕೆಯಿದೆ ಎಂದು ರೋಶಿನಿಗೌಡ ಹೇಳಿದರು.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎಂ.ಸುಶ್ಮರಾಣಿ, ರಾಜ್ಯ ಖಜಾಂಚಿ ಡಾ.ವೀಣಾ ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿಗಳಾದ ಮಂಜುಳ, ಲಲಿತಮ್ಮ, ಎಂ.ಆಶಾರಾಣಿ, ಡಾ.ವಿಜಯಲಕ್ಷ್ಮಿ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷೆ ಕರಿಯಮ್ಮ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ