Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಯೋಜನೆಗೆ ಅನುದಾನ ಕೊಡಿಸಲಿ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ನೀರಾವರಿ ಯೋಜನೆಗಳು, ಅನುದಾನಗಳ ಬಗ್ಗೆ ಬಿಜೆಪಿ ಸಂಸದರು ಬಾಯಿ ಬಿಡಬೇಕು! ಎಂದು ಜಲಸಂಪನ್ಮೂಲ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಾಕೀತು ಮಾಡಿದರು.
ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.


ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಕೇಳುವ ವಿಚಾರದಲ್ಲಿ ರಾಜ್ಯದ ಬಿಜೆಪಿ ಸಂಸದರು ಮೌನ ವಹಿಸಿದ್ದಾರೆ. ನಾನು ಪ್ರಧಾನಿ, ಹಣಕಾಸು ಸಚಿವರು, ಮತ್ತು ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಭದ್ರಾ ಅಣೆಕಟ್ಟು ಐದು ಜಿಲ್ಲೆಗಳಿಗೆ ಜೀವನಾಡಿಯಾಗಿದ್ದು, ರೈತರ ಜೀವನ ಹಸನು ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಏಕೆಂದರೆ ಸಂಬಳವಿಲ್ಲದೆ, ನಿವೃತ್ತಿ ಹೊಂದದೆ, ಪಿಂಚಣಿ ಪಡೆಯದೇ ಸದಾ ದುಡಿಯುವ ಕಾಯಕಯೋಗಿ ರೈತ. ಕಾಂಗ್ರೆಸ್ ಸರ್ಕಾರದ ಮೇಲೆ ಜನರಿಗೆ ನಂಬಿಕೆಯಿದೆ.‌ ಈ ನಂಬಿಕೆಯನ್ನು ‌ನಾವು ಉಳಿಸಿಕೊಂಡಿದ್ದೇವೆ.

ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಅನುದಾನ, ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಅನುಮತಿ ಸೇರಿದಂತೆ ಕರ್ನಾಟಕದ ಪರವಾಗಿ ಬಿಜೆಪಿ ಸಂಸದರು ಕೇಂದ್ರದಲ್ಲಿ ಧ್ವನಿ ಎತ್ತಬೇಕು. ನಾವು ನಮ್ಮ ಹಕ್ಕಿನ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ