Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೆಕ್ಕೆಜೋಳ ಆಮದು ಮೇಲೆ ಕೇಂದ್ರ ಸರ್ಕಾರ ತಕ್ಷಣ ನಿಯಂತ್ರಣ ಹೇರಲಿ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೆಕ್ಕೆಜೋಳ ಬೆಳೆಗಾರರ ಅಹವಾಲುಗಳು, ದಿಢೀರ್ ಬೆಲೆ ಇಳಿಕೆ ಹಾಗೂ ಖರೀದಿ ಕೇಂದ್ರ ತೆರೆಯುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯ ಮುಖ್ಯಾಂಶಗಳು:


ಸಭೆಯಲ್ಲಿ ಪ್ರಸ್ತಾಪವಾದ ಪ್ರಮುಖ ವಿಷಯಗಳು:
ಒಂದು ಕಡೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಾಗಿದೆ. ಈ ಬಗ್ಗೆ ಮಾಹಿತಿ ಇದ್ದೂ ಕೂಡ ಕೇಂದ್ರ ಸರ್ಕಾರ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಆಮದು ಮಾಡಿಕೊಂಡಿದೆ. ಇದರಿಂದಾಗಿ ರಾಜ್ಯದ ಮತ್ತು ದೇಶದ ಮೆಕ್ಕೆಜೋಳ ಬೆಳೆದ ರೈತರಿಗೆ ವಿಪರೀತ ಹೊರೆ ಆಗಿದೆ.


ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನಿಗದಿ ಮಾಡಿರುವ ಕೋಟಾ ಪ್ರಮಾಣವೂ ಅತ್ಯಂತ ಕಡಿಮೆ ಇದೆ. ಇದರಿಂದಾಗಿ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸುವ ಪ್ರಮಾಣವೂ ಕಡಿಮೆ ಆಗಿದೆ.


ನಿಯಮ ಪಾಲಿಸದ ಏಜೆನ್ಸಿಗಳಿಂದ ಸಮಸ್ಯೆ: ಕೇಂದ್ರದ ನೋಡಲ್ ಏಜೆನ್ಸಿಗಳಾದ ನಾಫೆಡ್/ಎನ್‌ಸಿಸಿಎಫ್ ಮೂಲಕ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆ ಜೋಳ ಸಂಗ್ರಹಣೆ ಮತ್ತು ಎಥೆನಾಲ್ ಉತ್ಪಾದನೆಗೆ ಬಳಕೆಗಾಗಿ ಈಗಾಗಲೇ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದರೆ ಸಂಬಂಧಪಟ್ಟ ನೋಡಲ್ ಏಜೆನ್ಸಿಗಳು ಮಾರ್ಗಸೂಚಿಯಂತೆ ಇನ್ನೂ ಖರೀದಿ ಪ್ರಕ್ರಿಯೆಯನ್ನೇ ಆರಂಭಿಸಿಲ್ಲ. ಇದು ಸಮಸ್ಯೆ ಬಿಗಡಾಯಿಸಲು ಮುಖ್ಯ ಕಾರಣ.


ಡಿಸ್ಟಿಲರಿಗಳು ಮೆಕ್ಕೆಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಇದರಿಂದಾಗಿ ಈಗ ಖರೀದಿಗೆ ಮುಂದೆ ಬರುತ್ತಿಲ್ಲ. ಇದು ಸ್ಪಷ್ಟ ನಿಯಮ ಉಲ್ಲಂಘನೆಯಾಗಿದ್ದು ಡಿಸ್ಟಿಲರಿಗಳು ನಿಯಮಾನುಸಾರ ಮೆಕ್ಕೆ ಖರೀದಿಗೆ ಮುಂದೆ ಬರಬೇಕಿದೆ.


ರಾಜ್ಯ ಸರ್ಕಾರ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಸಲಹೆಗಳು:
ಮೆಕ್ಕೆ ಜೋಳ ಆಮದು ಮೇಲೆ ಕೇಂದ್ರ ಸರ್ಕಾರ ತಕ್ಷಣ ನಿಯಂತ್ರಣ ಹೇರುವ ಮೂಲಕ ಬೆಲೆಯಲ್ಲಿ ಸ್ಥಿರತೆ ಸಾಧಿಸಲು ಸಾಧ್ಯವಿದೆ. ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದು.


ಸದ್ಯಕ್ಕೆ 8ಲಕ್ಷ ಟನ್ ಮೆಕ್ಕೆಜೋಳವನ್ನು ತಕ್ಷಣ ಖರೀದಿಸಲು ಸದರಿ ಏಜೆನ್ಸಿಗಳು ಕ್ರಮ ಕೈಗೊಳ್ಳಲು ಒತ್ತಾಯಿಸಲಾಯಿತು.

ಖರೀದಿ ಕೇಂದ್ರಗಳನ್ನು ನಾಫೆಡ್/ಎನ್‌ಸಿಸಿಎಫ್ ಇನ್ನೂ ಆರಂಭಿಸದಿರುವುದರಿಂದ ತೊಂದರೆಯಾಗಿದ್ದು, ಮಾರುಕಟ್ಟೆಯಲ್ಲಿ ಧಾರಣೆಯನ್ನು ಸ್ಥಿರಗೊಳಿಸಲು ತಕ್ಷಣ ಖರೀದಿ ಪ್ರಾರಂಭಿಸುವಂತೆ ಒತ್ತಾಯಿಸುವುದು.
ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು:
ಬೆಲೆ ಕುಸಿತದಿಂದ ಸಂಕಷ್ಜ ಎದುರಿಸುತ್ತಿರುವ ರಾಜ್ಯದ ಮೆಕ್ಕೆಜೋಳ ರೈತರ ನೆರವಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ.

70ಲಕ್ಷ ಮೆ. ಟನ್ ಮೆಕ್ಕೆ ಜೋಳವನ್ನು ಆಮದು ಮಾಡಿಕೊಳ್ಳಲಾಗಿದೆ. ನಮ್ಮ ದೇಶದಲ್ಲಿಯೇ ಉತ್ಪಾದನೆ ಹೆಚ್ಚಾಗಿರುವುದರಿಂದ ಆಮದು ಮೇಲೆ ನಿರ್ಬಂಧ ವಿಧಿಸಲು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ.
ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆ ಜೋಳವನ್ನು ತಕ್ಷಣ ಖರೀದಿಸುವಂತೆ ರಾಜ್ಯದ ಪ್ರಮುಖ ಡಿಸ್ಟಿಲರಿಗಳೊಂದಿಗೆ ಸಭೆ ನಡೆಸಿ, ಸೂಚನೆ ನೀಡಲಾಗುವುದು.


ಕುಕ್ಕುಟೋದ್ಯಮಕ್ಕೆ ಮೆಕ್ಕೆಜೋಳದ ಬೇಡಿಕೆಯಿದ್ದು, ಅವರೊಂದಿಗೆ ಸಹ ಮಾತುಕತೆ ನಡೆಸಲಾಗುವುದು.
ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಸಭೆ ನಡೆಸಿ, ಪರಿಹಾರ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಿದರು.

ಸಚಿವರಾದ ಎಚ್.ಕೆ.ಪಾಟೀಲ್, ಕೆ.ಎಚ್.ಮುನಿಯಪ್ಪ, ಶಿವಾನಂದ ಪಾಟೀಲ, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ