Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಲಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗುತ್ತಿಗೆದಾರ ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ಪಡೆದು
, ದುರ್ಘಟನೆಯ ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಕ್ಕಾಗಿ ಸಿಬಿಐ ತನಿಖೆಗೆ ಸಚಿನ್ ಕುಟುಂಬವೂ ಒತ್ತಾಯಿಸಿದೆ ಎಂದು ಅವರು ಹೇಳಿದರು.
ಇದೇ ಸರ್ಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. ಒಂದು ಕ್ಷಣವೂ ತಡ ಮಾಡದೇ
, ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಮೇಧಾವಿ ಪ್ರಿಯಾಂಕ್ ಖರ್ಗೆಯವರಿಗೆ ಮರೆವು ಜಾಸ್ತಿ. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಮರೆಯಬಾರದು. ಮಡಿಕೇರಿಯಲ್ಲಿ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಆ ಪ್ರಕರಣದಲ್ಲಿ ಅಂದಿನ ಗೃಹ ಸಚಿವ ಜಾರ್ಜ್ ಅವರು ಕೂಡ ರಾಜೀನಾಮೆ ಕೊಟ್ಟು, ಸಿಬಿಐ ತನಿಖೆ ಆಗಿ ಕ್ಲೀನ್ ಚಿಟ್ ಬಂದಿತ್ತು ಎಂದು ಹೇಳಿದರು.

ಭದ್ರತೆ: ಸಚಿನ್ ಅವರ ಕುಟುಂಬಕ್ಕೆ ತಕ್ಷಣದಿಂದ ರಾಜ್ಯ ಸರ್ಕಾರ ಭದ್ರತೆ ನೀಡಬೇಕು. ಕುಟುಂಬಕ್ಕೆ 1 ಕೋಟಿ ರೂ‌.ಗಳ ಪರಿಹಾರ ನೀಡಬೇಕು. ಮೃತರ ಕುಟುಂಬದಲ್ಲಿ ವಿದ್ಯಾವಂತರಿದ್ದು ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಆಗ್ರಹಿಸಿದರು.

 ಹಿಂದೂ ಸಮಾಜದ ಸಿದ್ಧಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ಅವರ ಕೊಲೆಗೆ ಸಂಚು ರೂಪಿಸಿದ್ದಾಗಿ ಡೆತ್ ನೋಟ್ ತಿಳಿಸಿದೆ. ಸಿದ್ಧಲಿಂಗ ಸ್ವಾಮೀಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಕಿಲ್ಲರ್​ಗಳನ್ನು ಬಳಸುವ ವಿಚಾರವೂ ಡೆತ್ ನೋಟಿನಲ್ಲಿದೆ. ಹಾಗಾಗಿ ಇದೊಂದು ಗಂಭೀರ ಪ್ರಕರಣವಾಗಿದ್ದು ಸಿಬಿಐ ತನಿಖೆ ಅತ್ಯಗತ್ಯ ಎಂದರು.

ರಾಜ್ಯದ ಪೊಲೀಸ್ ಇಲಾಖೆಯಿಂದ ಅಂಥ ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಮಾಡಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಿಯಾಂಕ್ ಖರ್ಗೆಯವರ ಇಲಾಖೆ ಗ್ರಾಮೀಣಾಭಿವೃದ್ಧಿ ಮತ್ತು ಐಟಿ, ಬಿಟಿ ಮಾತ್ರವಲ್ಲ; ಅವರು ಸರ್ವ ಇಲಾಖೆಯ ಸಚಿವರು. ಸದನದಲ್ಲಿ ಗೃಹ ಸಚಿವರಿದ್ದರೂ, ಸಿಎಂ ಕುರಿತು ಪ್ರಶ್ನೆ ಇದ್ದರೂ ಅವರ ಪರವಾಗಿ ಇವರು ಎದ್ದೇಳುತ್ತಾರೆ; ಗಲಾಟೆ ಮಾಡುತ್ತಾರೆ ಎಂದು ವಿಜಯೇಂದ್ರ ಟೀಕಿಸಿದರು.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ