Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಮಕಾತಿ ಸುತ್ತೋಲೆ ಕೂಡಲೇ ಸರ್ಕಾರ ಹಿಂದಕ್ಕೆ ಪಡೆಯಲಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸುಪ್ರೀಂಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿಯನ್ನು ಅನುಷ್ಟಾನಗೊಳಿಸದ ರಾಜ್ಯ ಸರ್ಕಾರದ ವಿರುದ್ದ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.


ಕೊರಳಿಗೆ ಚಿಕ್ಕ ಮಡಿಕೆ ಹಾಗೂ ಸೊಂಟಕ್ಕೆ ಗರಿಗಳನ್ನು ಸುತ್ತಿಕೊಂಡು ಮುಖಕ್ಕೆ ಬಣ್ಣ ಬಳಿದುಕೊಂಡು ಪ್ರವಾಸಿ ಮಂದಿರದಿಂದ ತಮಟೆ ಬಾರಿಸುತ್ತ ಆಗಮಿಸಿದ ಪ್ರತಿಭಟನಾಕಾರರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾದಿಗ ಮುಖಂಡ ಹನುಮಂತಪ್ಪ ದುರ್ಗಾ ೩೫ ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದರು ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ಮಾದಿಗರನ್ನು ಕಡೆಗಣಿಸುತ್ತಲೆ ಬರುತ್ತಿವೆ. ಬಹುಸಂಖ್ಯೆಯಲ್ಲಿರುವ ಮಾದಿಗ ಸಮುದಾಯ ಹಿಂದಿನಿಂದಲೂ ಅನ್ಯಾಯ, ಶೋಷಣೆ ಅನುಭವಿಸಿಕೊಂಡು ಬರುತ್ತಿದೆ. ಇನ್ನು ಸಹಿಸಿಕೊಂಡಿರುವುದಿಲ್ಲ. ಎಲ್ಲಾ ಕಟ್ಟುಪಾಡುಗಳನ್ನು ಬಿಟ್ಟು ಹೊರಗೆ ಬಂದು ಚುನಾಯಿತ ಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ. ಮಾದಿಗರ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿರುವುದನ್ನು ಕಾಂಗ್ರೆಸ್ ಮರೆತಂತಿದೆ. ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿ ನಮ್ಮ ಶಕ್ತಿ ಏನೆಂಬುದನ್ನು ತೋರಿಸುತ್ತೇವೆಂದು ಎಚ್ಚರಿಸಿದರು.

ದಲಿತ ಮುಖಂಡ ಬಿ.ರಾಜಣ್ಣ ಮಾತನಾಡಿ ನಮ್ಮ ಜನಾಂಗದ ಮತ ಪಡೆದು ಅಧಿಕಾರಕ್ಕೇರಿರುವ ಕಾಂಗ್ರೆಸ್‌ಗೆ ಒಳ ಮೀಸಲಾತಿ ನೀಡಲು ಏನು ಕಷ್ಟ. ಶಿಕ್ಷಣ, ಉದ್ಯೋಗ ಹಾಸ್ಟೆಲ್ ಸೌಲಭ್ಯಗಳಿಗಾಗಿ ಕಳೆದ ೩೦ ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಮಾದಿಗರ ಅಹವಾಲು ಆಲಿಸುತ್ತಿಲ್ಲ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಕೆಲವು ಮುಖಂಡರುಗಳು ಜನಾಂಗದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಹೋರಾಟ ಮಾಡದ ಬ್ರಾಹ್ಮಣರಿಗೆ

ಪ್ರಧಾನಿ ಮೋದಿರವರು ಶೇ.೧೦ ರಷ್ಟು ಮೀಸಲಾತಿ ನೀಡಿದರು. ಹೆಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಪ್ರಿಯಾಂಕ ಖರ್ಗೆ ಇವರುಗಳೆ ಅಧಿಕಾರಕ್ಕೆ ಅಂಟಿಕೊಂಡರೆ  ಮಾದಿಗರು ಎಲ್ಲಿಗೆ ಹೋಗಬೇಕೆಂದು ಪ್ರಶ್ನಿಸಿದರು?

ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಎನ್.ಮೂರ್ತಿ ಸ್ಥಾಪಿತ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ ಮಾತನಾಡುತ್ತ ಒಳ ಮೀಸಲಾತಿ ಜಾರಿಗೊಳಿಸದೆ ೫೬,೪೩೨ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬಾರದು. ನೇಮಕಾತಿಗೆ ಹೊರಡಿಸಿರುವ ಸುತ್ತೋಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದಕ್ಕೆ ಪಡೆಯಬೇಕು. ಅಲೆಮಾರಿ ಮತ್ತು ಅರೆಅಲೆಮಾರಿಗಳಿಗೆ ಶೇ.೧ ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಕೊಡಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಲಕ್ಷ್ಮಣ, ತಿಪ್ಪೇಸ್ವಾಮಿ, ನಗರಂಗೆರೆ ದೇವರಾಜ್, ಹೆಗ್ಗೆರೆ ಶಂಕರ್, ಹರೀಶ್ ಜೈಭೀಮ್, ಕೆ.ರಾಜಪ್ಪ, ತಾಳಿಕೆರೆ ಮಂಜುನಾಥ್, ಪ್ರಕಾಶ್, ರಘು ಇಂಗಳದಾಳ್, ಎಂ.ದೇವರಾಜ್, ಮಲ್ಲಿಕಾರ್ಜುನ, ವೆಂಕಟೇಶ್, ಸೋಮಣ್ಣ, ಶಿವಣ್ಣ ಜೆ.ಜೆ.ಹಟ್ಟಿ, ಪಿ.ಸುರೇಶ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ