Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಬಿಜೆಪಿಯೊಳಗಿನ ಗುಂಪುಗಾರಿಕೆ ವಿರುದ್ಧ ಹೈಕಮಾಂಡ್ ಕ್ರಮ ಜರುಗಿಸಲಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಬಿಜೆಪಿ ಪಕ್ಷದ ಎಲ್ಲ ಮುಖಂಡರು ಒಗ್ಗಟ್ಟಿನಿಂದ ವಕ್ಫ್ ಮಂಡಳಿ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಿದ್ದ ನಾಯಕರ ಗುಂಪುಗಾರಿಯಿಂದಾಗಿ ಬಿಜೆಪಿಗೆ ಒದಗಿಬಂದಿರುವ ಸ್ಥಿತಿ ಒಂದು ದುರಂತ ಹಾಗೂ ನೋವಿನ ಸಂಗತಿ ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಬಿಜೆಪಿ ಅವಕಾಶ ನೀಡಿದೆ. ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧನಿದ್ದೇನೆ. ಆದರೆ ಪಕ್ಷದಲ್ಲಿನ ಗುಂಪುಗಾರಿಕೆ ನೋಡಿದರೆ ಬೇಸರ ಆಗುತ್ತಿದೆ ಎಂದು ನೋವು ತೋಡಿಕೊಂಡರು.

ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕರ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ. ಹೈಕಮಾಂಡ್ ಗೆ ಈ ಕುರಿತು ಎರಡು ಬಾರಿ ಪತ್ರ ಬರೆದರೂ ಅವರು ಯಾವುದೇ ಕ್ರಮ ಜರುಗಿಸಿಲ್ಲ, ಕಾದು ನೋಡುವ ತಂತ್ರ ಅನುಸರಿಸಿದ್ದಾರೆ. ಹೈಕಮಾಂಡ್ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಅವರು ಕೇಂದ್ರ ನಾಯಕರು ಮಧ್ಯಪ್ರವೇಶಿಸಿ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮಹಾರಾಷ್ಟ್ರ ಸೇರಿದಂತೆ ಮತ್ತಿತರ ಕಡೆ ನಡೆದ ಚುನಾವಣೆಗಳು ದೊಡ್ಡ ಸವಾಲಾಗಿರುವುದರಿಂದ
, ಚುನಾವಣೆಗಳಿಲ್ಲದ ರಾಜ್ಯಗಳಲ್ಲಿ ಪಕ್ಷದ ಸಮಸ್ಯೆಗಳನ್ನು ಬದಿಗಿಡುವುದು ಸಹಜ. ಹಾಗಾಗಿ ಸ್ವಲ್ಪ ವಿಳಂಬವಾಗಬಹುದು, ಆದರೆ ಇನ್ನೂ ಮುಂದಾದರೂ ಪಕ್ಷದೊಳಗಿನ ಗುಂಪುಗಾರಿಕೆ ಬಗ್ಗೆ ಹೈಕಮಾಂಡ್‌ನ ಮೌನ ಮುರಿಯಬೇಕು ಎಂದು ಗೌಡರು ಒತ್ತಾಯಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದ್ದು ಹೈಕಮಾಂಡ್. ಅಧ್ಯಕ್ಷರನ್ನು ವಿರೋಧಿಸುವವರು ದೆಹಲಿಗೆ ಹೋಗಿ ಮಾತನಾಡಬೇಕು. ಅದು ಬಿಟ್ಟು ಬೀದರ್ ನಲ್ಲಿ ನಿಂತು ತಮಟೆ ಬಾರಿಸುತ್ತಿದ್ದಾರೆ. ಅವರು-ಇವರು ಎಲ್ಲರು ಹೈಕಮಾಂಡ್ ಗೆ ಹತ್ತಿರ ಇರೋರೇ. ಈಗ ಬೀದಿಯಲ್ಲಿ ಮಾತನಾಡುತ್ತಿದ್ದಾರೆ ಅಂದರೆ ಅವರು ಯೋಗ್ಯರಲ್ಲ ಎಂದು ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ವಿರುದ್ಧ ಡಿವಿ ಸದಾನಂದ ಗೌಡ ಕಿಡಿಕಾರಿದರು.
ದಕ್ಷಿಣ ಭಾರತಕ್ಕೆ ಬಿಜೆಪಿಯ ಹೆಬ್ಬಾಗಿಲು ಎಂದು ಪರಿಗಣಿಸಲ್ಪಟ್ಟಿರುವ ಕರ್ನಾಟಕವು ಹಲವಾರು ಬಾಗಿಲುಗಳನ್ನು ಹೊಂದಿದೆ. ಇದು ದೊಡ್ಡ ದುರಂತ ಎಂದರು.


ಯತ್ನಾಳ್ ಮತ್ತು ಜಾರಕಿಹೊಳಿ ಅವರು ವಿಜಯೇಂದ್ರ ಅವರನ್ನು ಬಹಿರಂಗವಾಗಿ ಟೀಕಿಸಿದ್ದಾರೆ, ಅವರು ಆಡಳಿತಾರೂಢ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ. ವಿಜಯೇಂದ್ರ ಮತ್ತು ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಪಕ್ಷವನ್ನು ತಮ್ಮ ಕಪಿಮುಷ್ಠಿಯಲ್ಲಿ ಇರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ದಿವಂಗತ ಅನಂತ್ ಕುಮಾರ್ ಮತ್ತು ಯಡಿಯೂರಪ್ಪ ನೇತೃತ್ವದ ಬಣಗಳ ನಡುವೆ ಪಕ್ಷದಲ್ಲಿ ಹಿಂದೆ ಹೆಚ್ಚು ಗುಂಪುಗಾರಿಕೆ ಇತ್ತು ಎಂಬುದನ್ನು ಸ್ಮರಿಸಿದ ಗೌಡರು, ಅವರಿಬ್ಬರ ನಡುವಿನ ಬಿರುಕು ಬೀದಿಗೆ ಬಂದಿರಲಿಲ್ಲ. ಕರ್ನಾಟಕ ಬಿಜೆಪಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಕ್ಷದೊಳಗಿನ ಆಂತರಿಕ ಗೊಂದಲಗಳು ಬೀದಿಗೆ ಬಂದಿರುವುದು ನೋವಿನ ಸಂಗತಿ. ಹೈಕಮಾಂಡ್ ಮಧ್ಯಪ್ರವೇಶಿಸಬೇಕು ಎಂದು ಅವರು ಹೇಳಿದರು.

ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಿಗೆ ಚಿನ್ನದ ಬಟ್ಟಲಿನಲ್ಲಿ ವಿಷಯಗಳನ್ನು ನೀಡುತ್ತಿದ್ದರೂ, ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು ಎಲ್ಲವನ್ನು ನುಂಗಿ ಹಾಕಿದೆ. ಇದು ಪಕ್ಷದ ಕಾರ್ಯಕರ್ತರಿಗೆ ನೋವುಂಟು ಮಾಡಿದೆ ಎಂದು ಗೌಡ ಹೇಳಿದರು.

ದೆಹಲಿ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳ ಬಗ್ಗೆ ಗಂಭೀರವಾಗಿ ಪರಿಗಣಿಸವಂತೆ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ ಮಾಜಿ ಸಿಎಂ, ಶಿಸ್ತಿನ ವಿಷಯದಲ್ಲಿ ರಾಜಿ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದರು.



 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು