Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಭಾಷೆ ಬೆಳೆಸುವ ಕಾರ್ಯ ನಿರಂತರವಾಗಿರಲಿ-ಟಿ. ಎನ್. ಸರಸ್ವತಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡಿಗರಲ್ಲಿ
 ಕನ್ನಡ  ಭಾಷೆ, ಸಾಹಿತ್ಯ, ಕಲೆ, ಇತಿಹಾಸ, ಸಂಸ್ಕೃತಿ ಮತ್ತು ಘನತೆಯ ಬಗ್ಗೆ ಅಭಿಮಾನ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಇತಿಹಾಸ ಉಪನ್ಯಾಸಕಿ ಟಿ.ಎಸ್.ಸರಸ್ವತಿ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ‌ಬಾಶೆಟ್ಟಿಹಳ್ಳಿ ಸರ್ಕಾರಿ  ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು,  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ  ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಕರ್ನಾಟಕ ರಾಜ್ಯವಾಳಿದ ಎಲ್ಲಾ ರಾಜಮನೆಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ  ಸಾಕಷ್ಟು ಶ್ರಮಿಸಿವೆ.  ಕನ್ನಡ ಕವಿಗಳ ಸಾಹಿತ್ಯ ರಚನೆಗೆ ಬೆಂಬಲ ನೀಡಿದ್ದಾರೆ.  ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸಿರುವ ರಾಜಮನೆತಗಳು  ಕನ್ನಡಿಗರ ಮನದಲ್ಲಿ  ಶಾಶ್ವತ ಸ್ಥಾನ ಪಡೆದಿವೆ ಎಂದರು.

   ಭಾರತೀಯ  ಭಾಷೆಗಳಲ್ಲಿ ಕನ್ನಡಕ್ಕೆ  ಮಹತ್ವದ  ಸ್ಥಾನವಿದೆ.  ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಹೊಂದಿದೆ. ಕರ್ನಾಟಕದ ಆಡಳಿತ ಭಾಷೆ ಕನ್ನಡವೇ ಆಗಿದೆ.ಕನ್ನಡಿಗರ ಸಾಂಸ್ಕೃತಿಕ ಮತ್ತು ಭಾಷಾ ಪರಂಪರೆಯು ಶ್ರೀಮಂತವಾಗಿದೆ, ಇದು ಕನ್ನಡ ಭಾಷೆ  ಸಾಹಿತ್ಯ, ಕಲೆ ಮತ್ತು ಶಿಲ್ಪಕಲೆಗಳಲ್ಲಿ ಎದ್ದು ಕಾಣುತ್ತದೆ. ಕನ್ನಡ ಅಭಿಮಾನಿಗಳು ಕನ್ನಡ ಪ್ರೀತಿಯನ್ನು  ಪ್ರತಿ ವರ್ಷ ನವೆಂಬರ್ ತಿಂಗಳಿಗಷ್ಟೇ ಸೀಮಿತಗೊಳಿಸಬಾರದು  ಎಂದರು.


ವಿಜ್ಞಾನ ಉಪನ್ಯಾಸಕಿ ಡಿ.ಪುಷ್ಪಾವತಿ ಮಾತನಾಡಿ, ವಿಜ್ಞಾನದ ಓದು ಓದುಗರಲ್ಲಿ ವೈಜ್ಞಾನಿಕ ಮನೋಭಾ ಬೆಳೆಸುತ್ತದೆ. ಇಂದು ವಿಜ್ಞಾನ ಕ್ಷೇತ್ರವು ವಿಶಾಲವಾಗಿ ಬೆಳೆದಿದೆ.  ವೈಜ್ಞಾನಿಕ ವಿಧಾನವು ಮತ್ತು ತಂತ್ರಜ್ಞಾನದ ಆವಿಷ್ಕಾರಗಳು ಒಟ್ಟಿಗೆ ಸೇರಿ, ಮಾನವಕುಲದ ತಿಳುವಳಿಕೆಯನ್ನು ವಿಸ್ತರಿಸಲು ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲು ನೆರವಾಗಿದೆ. ಎಂದರು. 

ವಿಜ್ಞಾನ ಕ್ಷೇತ್ರದಲ್ಲಿ ವಿಭಿನ್ನ ಉದ್ಯೋಗಾವಕಾಶಗಳಿವೆ, ಇದರಲ್ಲಿ ಉನ್ನತ ಶಿಕ್ಷಣ, ಉದ್ಯೋಗಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ತಾಂತ್ರಿಕ ಕೋರ್ಸ್‌ಗಳು ಪ್ರವೇಶ ಪಡೆತಲು ಸಹಕಾರಿ.‌ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ  ಉನ್ನತ  ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ಮುಂದುವರಿಸಬಹುದು ಎಂದರು. 

ಕಾರ್ಯಕ್ರಮದಲ್ಲಿ ತೂಬಗೆರೆ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಮುನಿರಾಜು, ಸಹಶಿಕ್ಷಕರುಗಳಾದ ನಾರಾಯಣ್, ಮಂಜುಳ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಪದಾಧಿಕಾರಿಗಳಾದ. ವೆಂಕಟರಾಜು, ವಿ.ಎಸ್.ಹೆಗಡೆ, ಉದಯಾರಾಧ್ಯ, ಹಳ್ಳಿ ಅಂಬರೀಶ್, ದರ್ಗಾಜೋಗಿಹಳ್ಳಿ ಮಲ್ಲೇಶ್, ಮುನಿರತ್ನಮ್ಮ, ಸಫೀರ್ ಮುಂತಾದವರು ಭಾಗವಹಿಸಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ