Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲಿ: ಯೋಗೀಶ್ ಸಹ್ಯಾದ್ರಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಸರ್ಕಾರ 2021 ರಿಂದ ಇಲ್ಲಿಯವರೆಗೆ ಸ್ಥಳೀಯ ಸಂಸ್ಥೆಗಳಾದ ತಾಲ್ಲೂಕು ಪಂಚಾಯಿತಿ
, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆ ನಡೆಸದೆ ಇರುವುದು ಖಂಡನೀಯ. ಇಂಥಹ ನಿರ್ಧಾರಗಳಿಂದ ಅಭಿವೃದ್ಧಿ ಕುಂಠಿತವಾಗುತ್ತದೆ. ಈ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಿ ಪರಿಣಮಿಸಲಿದೆ.

ಆದ್ದರಿಂದ ಆದಷ್ಟು ಶೀಘ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಲೇಖಕ ಹಾಗೂ ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ದೇಶದ ಯಾವುದೇ ಸರ್ಕಾರಗಳು ವಿಧಾನಸಭೆ, ವಿಧಾನಪರಿಷತ್ ಹಾಗೂ ಲೋಕಸಭಾ ಚುನಾವಣೆಗಳನ್ನು ನಡೆಸಲು ತುದಿಗಾಲಲ್ಲಿ ನಿಂತಿರುತ್ತವೆ. ಪ್ರಜೆಗಳನ್ನು ತಮ್ಮ ತಮ್ಮ ಪಕ್ಷಗಳತ್ತ ಆಕರ್ಷಿಸಲು ಹಪಹಪಿಸುತ್ತಿರುತ್ತವೆ.

ಆದರೆ ಸ್ಥಳೀಯ ಸಂಸ್ಥೆಗಳಾದ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳ ಒಟ್ಟು ೩೧ ಜಿಲ್ಲೆಗಳ ೨೩೯ ತಾಲ್ಲೂಕುಗಳ ೧೧೩೦ + ೩೬೭೧ ಕ್ಷೇತ್ರಗಳ ಸದಸ್ಯ ಸ್ಥಾನದ (ಬಿಬಿಎಂಪಿ ಹೊರತುಪಡಿಸಿ) ಚುನಾವಣೆಗಳನ್ನು ನಡೆಸಲು ಮೀನಾಮೇಷ ಎಣಿಸುತ್ತಿರುವುದು ನಿಜಕ್ಕೂ ದುರ್ದೈವ ಮತ್ತು ಖಂಡನೀಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪ್ರಮುಖ ರಾಜಕೀಯ ಪಕ್ಷಗಳು ಸ್ಥಳೀಯ ಸಂಸ್ಥೆಗಳ-ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆ ನಡೆಸಲು ವಿಫಲವಾಗಿವೆ.

ಇದರಿಂದ ೧೫ನೇ ಹಣಕಾಸು ಯೋಜನೆಯಿಂದ ಕೇಂದ್ರದಿಂದ ರಾಜ್ಯಕ್ಕೆ ಒಟ್ಟಾರೆಯಾಗಿ ಇಲ್ಲಿಯವರೆಗೆ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಬರಬೇಕಾಗಿದ್ದ ಸುಮಾರು ೨೮೦೦ ಕೋಟಿ ರೂಪಾಯಿಗಳು ಬರದೇ ಇರುವುದು ವಿಪರ್ಯಾಸ ಹಾಗೂ  ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ದೊಡ್ಡ ನಷ್ಟವಾಗಿದೆ. ಇದು ದೇಶದ ಪ್ರತಿಯೊಬ್ಬ ಪ್ರಜೆಯು ಅತ್ಯಂತ ಜವಾಬ್ದಾರಿಯಿಂದ ಚಿಂತಿಸುವ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಆಡಳಿತ ಪಕ್ಷ ಸೇರಿದಂತೆ ರಾಜ್ಯದ ಮೂರೂ ಪ್ರಮುಖ ಪಕ್ಷಗಳ ಸರ್ಕಾರಗಳ ನಿರ್ಲಕ್ಷ್ಯದ ಪರಿಣಾಮವಾಗಿ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೆ ಸರ್ಕಾರಿ ಆಡಳಿತಾಧಿಕಾರಿಗಳು ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸುವುದು ಅಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಪ್ರತಿಯೊಂದು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥ ಬುದ್ಧಿಯನ್ನು ಬಿಟ್ಟು ಆದಷ್ಟು ಶೀಘ್ರದಲ್ಲಿ ಸ್ಥಳೀಯ ಸಂಸ್ಥೆಗಳಾದ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳ ಒಟ್ಟು ೩೧ ಜಿಲ್ಲೆಗಳ ೨೩೯ ತಾಲ್ಲೂಕುಗಳ ೧೧೩೦ + ೩೬೭೧ ಕ್ಷೇತ್ರಗಳ ಸದಸ್ಯ ಸ್ಥಾನದ ಚುನಾವಣೆಯನ್ನು ನಡೆಸುವ ಮೂಲಕ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿರುವ ೨೮೦೦ ಕೋಟಿ ರೂಪಾಯಿಗಳನ್ನು ಬಳಸಿಕೊಂಡು ಜಿಲ್ಲೆ, ತಾಲ್ಲೂಕುಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇಲ್ಲದಿದ್ದ ಪಕ್ಷದಲ್ಲಿ, ಸಾಮಾನ್ಯ ಜನರು, ಪ್ರಜ್ಞಾವಂತರು, ಶಿಕ್ಷಕರು, ಸಾಹಿತಿಗಳು, ವಿದ್ಯಾರ್ಥಿಗಳು ಮತ್ತು ಅನೇಕರು ಇಂಥಹ ರಾಜಕೀಯ ನಿರ್ಲಕ್ಷ್ಯತೆಗಳಿಂದ ಬೇಸತ್ತು ಸರ್ಕಾರಗಳ ವಿರುದ್ಧ ರಾಜ್ಯದ ಪ್ರತಿಯೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕೊಡುವುದರ ಜೊತೆಗೆ, ಬೀದಿಗಿಳಿದು ಹೋರಾಟ ಮಾಡುವ ಕಾಲ ದೂರವಿಲ್ಲ ಎಂದು ಸಾಹಿತಿ, ಉಪನ್ಯಾಸಕರಾದ ಯೋಗೀಶ್ ಸಹ್ಯಾದ್ರಿ ತಮ್ಮ ಬಹಿರಂಗ ಪತ್ರದ ಮೂಲಕ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ