Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಲಿಷ್ಠವಾದ ಆರೋಗ್ಯ ವ್ಯವಸ್ಥೆ ಕಟ್ಟುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಿಸೋಣ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ ಮತ್ತು ನರರೋಗಗಳ ರಾಷ್ಟ್ರೀಯ ಸಂಸ್ಥೆ ನಿಮ್ಹಾನ್ಸ್ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಇಲ್ಲಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಸುವರ್ಣ ಮಹೋತ್ಸವಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರು ಪಾಲ್ಗೊಂಡು, ಸಂಸ್ಥೆಯ ಸೇವೆ - ಸಾಧನೆಗಳನ್ನು ಸ್ಮರಿಸಿ ಮಾತನಾಡಿದರು.
ನಿಮ್ಹಾನ್ಸ್ ಕಳೆದ ಐದು ದಶಕಗಳ ಅವಧಿಯಲ್ಲಿ ದೇಶದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡುತ್ತಾ ಬಂದಿದ್ದು
, ದೇಶದ ಪ್ರಮುಖ ಸಂಸ್ಥೆಯಾಗಿ ತನ್ನ ಛಾಪು ಮೂಡಿಸಿದೆ.

ಮೈಸೂರು ಸರ್ಕಾರದ ಮಾನಸಿಕ ಆಸ್ಪತ್ರೆ ಮತ್ತು ಭಾರತೀಯ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಒಗ್ಗೂಡಿಸುವ ಮೂಲಕ ಪ್ರಾರಂಭವಾದ ನಿಮ್ಹಾನ್ಸ್, ಮಾನಸಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಾದ ಭಾರತದ ಪ್ರಪ್ರಥಮ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿದೆ.

ರಾಷ್ಟ್ರೀಯ ಮಹತ್ವವನ್ನು ಹೊಂದಿರುವ ಈ ಸಂಸ್ಥೆಯು ತನ್ನ ಐದು ದಶಕದ ಪಯಣದಲ್ಲಿ ಆರೈಕೆ, ಸಂಶೋಧನೆ ಮತ್ತು ಶಿಕ್ಷಣ ವಲಯದಲ್ಲಿ ವಿಶ್ವದ ಗಮನ ಸೆಳೆದಿದೆ. ಮಾನಸಿಕ ಆರೋಗ್ಯ ಕುರಿತಾದ ನೀತಿ ನಿರೂಪಣೆಯಲ್ಲಿ ನಿಮ್ಹಾನ್ಸ್ ಕೊಡುಗೆಯನ್ನು ಜಾಗತಿಕವಾಗಿ ಗುರುತಿಸಲಾಗಿರುವುದು ಹೆಮ್ಮೆಯ ಸಂಗತಿ ಎಂದು ಸಿಎಂ ಹರ್ಷ ವ್ಯಕ್ತಪಡಿಸಿದರು.
ಮಾನಸಿಕ ಆರೋಗ್ಯದ ಆರೈಕೆ ಜೊತೆಗೆ ರೋಗದ ಕುರಿತಾಗಿ ಸಾಮಾನ್ಯವಾಗಿ ಅಂಟಿಕೊಳ್ಳುವ ಸಮಾಜದ ನಕರಾತ್ಮಕ ದೃಷ್ಟಿಕೋನವನ್ನು ಬಹುತೇಕ ನಿವಾರಿಸುವಲ್ಲಿ ನಿಮ್ಹಾನ್ಸ್ ಯಶಸ್ವಿಯಾಗಿದೆ. ಪಾರ್ಶ್ವವಾಯು
, ತೀವ್ರತರ ಮೆದುಳು ಕಾಯಿಲೆಗಳು ಮತ್ತು ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ.

ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವ ರಾಷ್ಟ್ರೀಯ ಮಹತ್ವದ ಈ ಸಂಸ್ಥೆ ಕರ್ನಾಟಕದಲ್ಲಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯ. ರಾಜ್ಯದಾದ್ಯಂತ ಮಾನಸಿಕ ಆರೋಗ್ಯ ಸೇವೆಯನ್ನು ಕಲ್ಪಿಸಲು ಸರ್ಕಾರ ನಿಮ್ಹಾನ್ಸ್ ನೊಂದಿಗೆ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ. ನಿಮ್ಹಾನ್ಸ್‌ನೊಂದಿಗಿನ ಜಂಟಿ ಸಹಭಾಗಿತ್ವದ ಮೂಲಕ ರಾಜ್ಯದ ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ಸೇವೆಯನ್ನು ಖಾತ್ರಿಪಡಿಸಲು ನಮಗೆ ಸಾಧ್ಯವಾಗಿದೆ.

ನಮ್ಮ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ.

ಟೆಲಿ ಮಾನಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಮಾನಸಿಕ ಆರೋಗ್ಯದ ಬೆಂಬಲ ಅಗತ್ಯವಿರುವ ಸುಮಾರು 17 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ. ನಿಮ್ಹಾನ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್‌ಗಳಲ್ಲಿ ಈ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯ ಆರೋಗ್ಯ ಸೇವೆಯನ್ನು ಕಲ್ಪಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಸರ್ಕಾರ ನೀತಿ ಆಯೋಗ
, ನಿಮ್ಹಾನ್ಸ್ ಸಹಯೋಗದಲ್ಲಿ ಆರಂಭಿಸಿರುವ ಕರ್ನಾಟಕ ಬ್ರೈನ್ ಹೆಲ್ತ್ ಇನೀಷಿಯೇಟಿವ್, ನರರೋಗ ಆರೈಕೆಯಲ್ಲಿ ತಜ್ಞರ ಸೇವೆಯನ್ನು ಜಿಲ್ಲಾಮಟ್ಟದಲ್ಲಿಯೂ ಲಭ್ಯವಾಗಿಸಿದೆ. ತೀವ್ರತರ ಪಾರ್ಶ್ವವಾಯು ಮತ್ತು ನರರೋಗ ಆಘಾತ ಆರೈಕೆಯಲ್ಲಿ ತರಬೇತಿ ಮತ್ತು ನಾವೀನ್ಯತಾ ಮಾದರಿಗಳನ್ನು ಈ ಯೋಜನೆ ಸಾಧ್ಯವಾಗಿಸಿದೆ.

 ನಗರ ಮತ್ತು ಗ್ರಾಮೀಣ ಜನಸಂಖ್ಯೆಗೆ ಸೇವಾ ಲಭ್ಯತೆಯಲ್ಲಿ ಏಕರೂಪತೆ ತರಲು ರಾಜ್ಯ ಸರ್ಕಾರವು ಮಾನಸಿಕ ಆರೋಗ್ಯವನ್ನು ಪ್ರಾಥಮಿಕ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಸಂಯೋಜಿಸಿದೆ. ನಿಮ್ಹಾನ್ಸ್ ಸಂಸ್ಥೆಯ ಕಾರ್ಯನಿರ್ವಹಣೆಗಾಗಿ ಪ್ರತಿವರ್ಷ 137 ಕೋಟಿ ರೂ.ಗಳನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ನಿರೂಪಿಸಿದೆ.

ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಈ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮೈಲಿಗಲ್ಲು ಸಾಧನೆಗಳನ್ನು ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಲದಮರ ಫೌಂಡೇಶನ್ ಸಹಯೋಗದೊಂದಿಗೆ ಬೆಂಗಳೂರಿನ ಸರ್ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ 25 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸೆ ಹಾಗೂ ರಿಕವರಿ ಕೇಂದ್ರವು ಮಾನಸಿಕ ಕಾಯಿಲೆಯಿಂದ ಬಳಲುವ ನಿರ್ಗತಿಕರಿಗೆ ಪುನವರ್ಸತಿಯನ್ನು ಕಲ್ಪಿಸಿದೆ.

ಜಿಲ್ಲಾ ಉಪಕೇಂದ್ರ ಆಸ್ಪತ್ರೆಗಳಲ್ಲಿ ಮನೋಚೈತನ್ಯ ಮಾನಸಿಕ ಆರೋಗ್ಯ ಚಿಕಿತ್ಸಾ ಕಾರ್ಯಕ್ರಮಗಳ ಮೂಲಕ 146 ತಾಲ್ಲೂಕುಗಳ ಐದು ಲಕ್ಷ ಜನರಿಗೆ ಉಪಯೋಗವಾಗಿದೆ. ಅಲ್ಲದೇ, ಆರ್.ಸಿ.ಎಚ್, ಆರ್‌ಬಿಎಸ್‌ಕೆ ಮತ್ತು ಆರ್‌ಕೆಎಸ್‌ಕೆ ಸಹಭಾಗಿತ್ವದೊಂದಿಗೆ ತಾಯಿ, ಮಗು ಮತ್ತು ಕಿಶೋರ ಮಾನಸಿಕ ಆರೋಗ್ಯ ಸೇವೆಗಳ ಪೂರೈಸಲು ಕ್ರಮವಹಿಸಲಾಗುತ್ತಿದೆ ಎಂದರು.

ಮಾನಸಿಕ ಆರೋಗ್ಯದೆಡೆಗೆ ಕರ್ನಾಟಕದ ನಡೆಯು ಆರೋಗ್ಯ ಸೇವೆಯ ಲಭ್ಯತೆ, ನಾವಿನ್ಯತೆ ಮತ್ತು ಸಹಾನುಭೂತಿಯನ್ನೊಳಗೊಂಡ ಸಮಗ್ರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಮಾನಸಿಕ ಆರೋಗ್ಯದ ಸವಾಲುಗಳನ್ನು ಸಮಗ್ರವಾಗಿ ಎದುರಿಸುವ ನಮ್ಮ ಪ್ರಯತ್ನದಲ್ಲಿ ನಮ್ಮನ್ನು ಮುಂಚೂಣಿಯಲ್ಲಿರಿಸಿದೆ. ಈ ಪ್ರಯತ್ನ ಒಳಗೊಳ್ಳುವ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ.

ಈ ಮೈಲಿಗಲ್ಲು ಸಾಧನೆಗೆ ಕಾರಣರಾಗಿರುವ ನಿಮ್ಹಾನ್ಸ್‌ನ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ನನ್ನ ಅಭಿನಂದನೆಗಳು.

ನಿಮ್ಮ ಸಮರ್ಪಣೆಯ ಸೇವೆ ಮಾನಸಿಕ ಆರೋಗ್ಯ ವಿಶ್ವದೆಲ್ಲೆಡೆ ಲಭಿಸಲು ಹಾಗೂ ಪ್ರತಿಯೊಬ್ಬರಿಗೂ ಆರೋಗ್ಯಕರ ಜೀವನದ ಅವಕಾಶ ಕಲ್ಪಿಸುವ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆ ನೀಡಿದೆ.

ನಿಮ್ಹಾನ್ಸ್‌ನ ಮೂಲಸೌಕರ್ಯ ಅಭಿವೃದ್ಧಿ, ಸಂಶೋಧನೆ ಹಾಗೂ ತರಬೇತಿ ಕಾರ್ಯಕ್ರಮಗಳಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ನಾವು ಒಟ್ಟಾಗಿ ಶ್ರಮಿಸಿ, ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವ ಆರೋಗ್ಯ ವ್ಯವಸ್ಥೆಯನ್ನು ಕಟ್ಟುವ ಮೂಲಕ ಸುಭದ್ರ ರಾಷ್ಟ್ರವನ್ನು ನಿರ್ಮಿಸೋಣ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ