Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಎಸ್ಐಟಿ ತನಿಖಾ ವರದಿ ಬರುವತನಕ ಕಾಯೋಣ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತಂಡದ ತನಿಖಾ ವರದಿ ಬರಲಿದೆ. ಅಲ್ಲಿಯತನಕ ಕಾದು ನೋಡೋಣ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯಗಳಿಂದ‌ರಾಯ್ ಅವರಿಗೆ ಕಿರುಕುಳವಿತ್ತು ಎಂಬ ಅವರ ಆಪ್ತರ ಆರೋಪಗಳ ಕುರಿತು ವಿಧಾನಸೌಧದ ಬಳಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಅನಗತ್ಯ ಮತ್ತು ಊಹಾಪೋಹಾಗಳಿಂದ ಕೂಡಿದ ಹೇಳಿ ನೀಡಬಾರದು ಎಂಬ ಕಾರಣದಿಂದಲೇ ತಕ್ಷಣ ಎಸ್‌ಐಟಿ ರಚನೆ ಮಾಡಿದ್ದು ಎಸ್‌ಐಟಿ ತನಿಖಾ ತಂಡದ ವರದಿ ಏನು ಬರುತ್ತದೆ, ಯಾರ ಪಾತ್ರ  ಏನಿದೆ ಎಂದು ನೋಡಬೇಕಾಗುತ್ತದೆ ಎಂದು ತಿಳಿಸಿದರು.

ತನಿಖೆ ಚುರುಕು:
ಉದ್ಯಮಿ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ಐಟಿ ತನಿಖಾ ತಂಡ ಎಲ್ಲ ಮಗ್ಗಲುಗಳಿಂದ ತನಿಖೆ ಮಾಡುತ್ತಿದೆ. ರಾಯ್ ಅವರ ಕುಟುಂಬಸ್ಥರ ಹೇಳಿಕೆ ದಾಖಲಿಸಲು ಎಸ್ಐಟಿ ಅಧಿಕಾರಿಗಳು ಮುಂದಾಗಿದ್ದಾರೆ.


ಏತನ್ಮಧ್ಯೆ ರಾಯ್ ಅವರು ತಮ್ಮ ದಿನನಿತ್ಯದ ಆಗುಹೋಗುಗಳ ಬಗ್ಗೆ ಬರೆಯುತ್ತಿದ್ದ ಡೈರಿಯನ್ನ ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರಾಯ್ ಅವರ ನಿತ್ಯದ ಭೇಟಿಗಳು, ವ್ಯವಹಾರಿಕ ನಿರ್ಧಾರಗಳ ಕುರಿತು ಡೈರಿಯಲ್ಲಿ ಬರೆದಿರುವುದು ಪತ್ತೆಯಾಗಿದೆ. ಆದರೆ ಡೈರಿಯಲ್ಲಿರುವ ಅಂಶಗಳನ್ನ ಡೆತ್ ನೋಟ್ ಎನ್ನಲಾಗದು ಎಂಬ ಮಾಹಿತಿಯನ್ನ ಎಸ್ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತಮ್ಮ ಸಾವಿಗೆ ನಿರ್ದಿಷ್ಟ ಕಾರಣವೇನು ರಾಯ್ ಅವರು ಡೈರಿಯಲ್ಲಿ ಉಲ್ಲೇಖಿಸಿಲ್ಲ ಹಾಗೂ ಯಾವುದೇ ಅಂತಿಮ ಸಂದೇಶವನ್ನೂ ನಮೂದಿಸಿಲ್ಲ. ಹೀಗಾಗಿ ಅವರು ಬರೆಯುತ್ತಿದ್ದ ಸಾಮಾನ್ಯ ದಿನಚರಿಯನ್ನೇ ಡೆತ್ ನೋಟ್ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ಮಾಹಿತಿಯನ್ನ ತನಿಖಾಧಿಕಾರಿಗಳು ತಿಳಿಸಿದ್ದಾರೆ.

ರಾಯ್ ಅವರು ತಮ್ಮ ಆತ್ಮಹತ್ಯೆಗೆ ಬಳಸಿರುವ ಪಿಸ್ತೂಲ್‌ನ್ನ ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಲ್ಜಿಯಮ್ ಮೇಡ್ ಸ್ಮಾರ್ಟ್, ಮಿನಿ ಸೌಂಡ್‌ಲೆಸ್ ಪಿಸ್ತೂಲ್ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮೇಲ್ನೋಟಕ್ಕೆ ಇದು ಪರವಾನಗಿ ಪಡೆದಿರುವ ಪಿಸ್ತೂಲ್ ಎಂಬುದು ತಿಳಿದು ಬಂದಿದೆ. ಆದರೂ ಪಿಸ್ತೂಲ್ ಹಾಗೂ ಬುಲೆಟ್‌ಗಳನ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಂಶಿಕೃಷ್ಣ ನೇತೃತ್ವದ ಎಸ್​ಐಟಿ:
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸರ್ಕಾರದ ಅನುಮತಿ ಮೇರೆಗೆ ನಗರ ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಿ.ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ತಂಡ ರಚಿಸಿದ್ದಾರೆ.


ದಕ್ಷಿಣ ವಿಭಾಗದ ಡಿಸಿಪಿ ಲೊಕೇಶ್ ಜಗಲಾಸರ್ ಪ್ರಕರಣದ ತನಿಖಾಧಿಕಾರಿಯಾಗಿ ನಿಯೋಜಿಸಿದ್ದಾರೆ. ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಾಕೆ, ಹಲಸೂರು ಗೇಟ್ ಉಪವಿಭಾಗದ ಎಸಿಪಿ ಸುಧೀರ್, ಸಿಸಿಆರ್ ಬಿ ರಾಮಚಂದ್ರ ಹಾಗೂ ಅಶೋಕನಗರ ಇನ್​​ಸ್ಪೆಕ್ಟರ್ ಕೆ.ಬಿ.ರವಿ ಅವರು ತಂಡದಲ್ಲಿ ಇದ್ದಾರೆ.

ಉದ್ಯಮಿ ರಾಯ್ ಅವರ ಅಸಹಜ ಸಾವು ಪ್ರಕರಣ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದನ್ನ ಎಸ್ಐಟಿ ತಂಡಕ್ಕೆ ಹಸ್ತಾಂತರಿಸಲಾಗಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ