ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್‌ರವರ ನೇತೃತ್ವದಲ್ಲಿ ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ವಿಜ್ಞಾನ ಸಮ್ಮೇಳನದಲ್ಲಿ ಜಿಲ್ಲೆಯ ಪ್ರತಿಭಾವಂತ ಶಿಕ್ಷಕಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯೆ ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷೆ ಡಾ.ಲೋಲಾಕ್ಷಮ್ಮನವರಿಗೆ ಪ್ರತಿಷ್ಠಿತ ಜೀವಮಾನ ಫೆಲೋಶಿಪ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಾನಪದ ಕಲೆ, ಶಿಕ್ಷಣ, ಸಮಾಜ ಸೇವೆ ಹಾಗೂ ಮೂಢನಂಬಿಕೆ ವಿರುದ್ದ ವಿಜ್ಞಾನದ ಮೂಲಕ ಜಾಗೃತಿ ಮೂಡಿಸುತ್ತಿರುವ ಇವರ ಸೇವೆಯನ್ನು ಪರಿಗಣಿಸಿ ಜೀವಮಾನ ಫೆಲೋಶಿಪ್ ಪ್ರಶಸ್ತಿಯನ್ನು ನೀಡಲಾಗಿದೆ.
ಪುಣ್ಯಕೀರ್ತಿ ನಗರ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಅಧ್ಯಕ್ಷರಾದ ಕೆ.ಹೆಚ್.ಮೂರ್ತಿ ಹಾಗೂ ಚಿತ್ರದುರ್ಗದ ಎಸ್.ಜೆ.ಎಂ.ಡೆಂಟಲ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಕೆ.ಎಮ್.ಶಾಂತರಾಮ್ ಇವರುಗಳಿಗೂ ಕೂಡ ಈ ಪ್ರಶಸ್ತಿ ಲಭಿಸಿದೆ.



