Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂ.ಗ್ರಾ ಜಿಲ್ಲೆಯಲ್ಲಿ ಸಮ್ಮೇಳನ‌ನಡೆಸಲು ಸಾಹಿತ್ಯಾಸಕ್ತರಿಂದ ಹಕ್ಕೊತ್ತಾಯ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಂಡ್ಯದಲ್ಲಿ ನಡೆಯುತ್ತಿರುವ
  87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ದೊಡ್ಡಬಳ್ಳಾಪುರದವರಾದ ಸ್ವಾತಂತ್ರ್ಯ ಸೇನಾನಿ ಟಿ.ಸಿದ್ದಲಿಂಗಯ್ಯ ಮತ್ತು ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರನ್ನು ಉಲ್ಲೇಖ ಮಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ  ಮಂಡ್ಯ ಜಿಲ್ಲೆಯ ಶಿವಪುರ ಧ್ವಜ  ಸತ್ಯಾಗ್ರಹ  ಘಟನೆಯನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿ  ಸ್ವಾತಂತ್ರ್ಯ ಹೋರಾಟಗಾರ  ಟಿ.ಸಿದ್ದಲಿಂಗಯ್ಯ ಅವರ ನೇತೃತ್ವದ ಹೋರಾಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.  ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರ ವಿಚಾರಧಾರೆಗಳನ್ನು ಸಹ  ತಮ್ಮ ಭಾಷಣದಲ್ಲಿ  ಉಲ್ಲೇಖ ಮಾಡಿದರು.

ಸಮ್ಮೇಳನಕ್ಕೆ ಒತ್ತಾಯ :-
 ಮುಂದಿನ 88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ಬೆಂಗಳೂರು ಗ್ರಾಮಾಂತರ  ಜಿಲ್ಲೆಯಲ್ಲಿ  ನಡೆಸಬೇಕೆಂದು ಒತ್ತಾಯಿಸಿ  ದೊಡ್ಡಬಳ್ಳಾಪುರ ತಾಲ್ಲೂಕಿನ  ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಮತ್ತು ಕನ್ನಡಾಭಿಮಾನಿಗಳು‌ಒತ್ತಾಯಿಸಿದರು.  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ ಅಖಿಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ ಎಂಬ  ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ‌ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜುಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್,   

ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್ಭಾರತ್ ಸ್ಕೌಟ್ಸ್  ಮತ್ತು ಗೈಡ್  ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜುನಿವೃತ್ತ ಅಧ್ಯಾಪಕ. ವಿ.ಎಸ್.ಹೆಗಡೆಶಿಕ್ಷಕರುಗಳಾದ  ಎಚ್.ಎನ್.ಪ್ರಕಾಶ್, ಕೋದಂಡರಾಮ್ಸಿ.ಅಣ್ಣಯ್ಯ  ಮುಂತಾದವರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ