Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವೋದಯ ವಿದ್ಯಾಲಯದಲ್ಲಿ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಭಾಷೆಯು ಸಾಂಸ್ಕೃತಿಕ ಪರಂಪರೆಯನ್ನು, ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು   ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ  ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ   ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ   ಸಮಾರೋಪ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು,   ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ  ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025  ಸಮಾರೋಪ ಕಾರ್ಯಕ್ರಮದಲ್ಲಿ   ಕನ್ನಡ ಬಳಕೆ ಮತ್ತು ಬೆಳವಣಿಗೆ  ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. 

ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಭವ್ಯ ಪರಂಪರೆ ಇದೆ. ಭವ್ಯ ಪರಂಪರೆಯುಳ್ಳ   ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬ ಕನ್ನಡಿಗರು  ಪ್ರೀತಿ ಬೆಳೆಸಿಕೊಳ್ಳಬೇಕಾಗಿರುವುದು  ಅತ್ಯಗತ್ಯ. ಕನ್ನಡ ಭಾಷೆಯೂ  ಕನ್ನಡಿಗರ ಸಂಸ್ಕೃತಿ ಮತ್ತು ಸ್ವಾಭಿಮಾನದ ಪ್ರತೀಕವಾಗಿದೆ ಎಂದರು.

ಕನ್ನಡ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ 2025  ಕಾರ್ಯಕ್ರಮ ಕುರಿತು ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜುಪ್ರತಿವರ್ಷ ನವೆಂಬರ್ ತಿಂಗಳಲ್ಲಿ   ದೊಡ್ಡಬಳ್ಳಾಪುರ ವಿವಿಧ ಶಾಲಾ ಕಾಲೇಜುಗಳಲ್ಲಿ ಮೂವತ್ತು ವರ್ಷಗಳಿಂದ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ ಕಾರ್ಯಕ್ರಮಗಳು ನಡೆಯುತ್ತಾ ಬರುತ್ತಿದೆ. ಈ ವರ್ಷ ಕುವೆಂಪು ರಚಿಸಿರುವ  ನಾಡಗೀತೆಗೆ  ನೂರು ವರ್ಷ  ಆಗಿರುವುದರಿಂದ ಶತಮಾನದ ಸಂಭ್ರಮವನ್ನು ದೊಡ್ಡಬಳ್ಳಾಪುರದಲ್ಲಿ  ಆಚರಿಸಲಾಯಿತು.  ಇದರ ಜೊತೆಗೆ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ‌ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಹ ನಡೆಸಲಾಯಿತು. ಈ ಸ್ಪರ್ಧಾ  ಪರೀಕ್ಷೆಯಲ್ಲಿ 523 ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.



ಜವಾಹರ ನವೋದಯ ವಿದ್ಯಾಲಯ ಪ್ರಾಂಶುಪಾಲ ಟಿ.ಪಳನಿ ವೇಲು ಮಾತನಾಡಿ, ದೊಡ್ಡಬಳ್ಳಾಪುರ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಕನ್ನಡ ಸಪ್ತಾಹ ಕಾರ್ಯಕ್ರಮ ನಡೆಯುತ್ತಾ  ಬರುತ್ತಿದೆ.  ದೊಡ್ಡಬಳ್ಳಾಪುರ  ನವೋದಯ ವಿದ್ಯಾಲಯದ‌ ಆವರಣದಲ್ಲಿ  ಕನ್ನಡ ಜ್ಞಾನಪೀಠ ಪುರಸ್ಕೃತರ ಪುತ್ಥಳಿಗಳನ್ನು ಅನಾವರಣ ಮಾಡುವ ಮೂಲಕ    ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗೆಗಿನ ಪ್ರೀತಿ ಮತ್ತು ಗೌರವ  ಹೊಂದಿದೆ. ‌ ಕಳೆದ  ವರ್ಷ  50 ಮಂದಿ ಕನ್ನಡ ನಾಡಿನ ಸಾಧಕರ ಮಾಹಿತಿಯನ್ನು ವಿದ್ಯಾರ್ಥಿಗಳು ಸಿದ್ದಪಡಿಸಿ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರ  ಮೆಚ್ಚುಗೆ  ಪಡೆದಿದ್ದರೂ ಎಂದರು.

ಸಮಾರಂಭದಲ್ಲಿ  ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ ಜಯಕೃಷ್ಣನ್ ಮಂಗಟ್ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ  ವೆಂಕಟರಾಜು, ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಆರ್.ವೀರಣ್ಣಗೌಡ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ  ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜುಹೋಬಳಿ ಘಟಕಗಳ ಪದಾಧಿಕಾರಿಗಳಾದ ಜಿ.ಸುರೇಶ್, ಅಂಜನಮೂರ್ತಿ, ಗಿರೀಶ್ ಬರಗೂರು, ಪ್ರತಿನಿಧಿಗಳಾದ  ಅಣ್ಣಯ್ಯ, ವೆಂಕಟೇಶ್, ಶಿವಪ್ರಸಾದ್, ರಂಗಸ್ವಾಮಯ್ಯ, ಸಫೀರ್ಜವಾಹರ ನವೋದಯ  ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಕನ್ನಡ ಸಪ್ತಾಹ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ದೊಡ್ಡಬಳ್ಳಾಪುರ ಜವಾಹರ ವಿದ್ಯಾಲಯ ವಿದ್ಯಾರ್ಥಿಗಳೊಂದಿಗೆ  ಮಧ್ಯಪ್ರದೇಶ ಅಲೀರಾಜ್ ಜವಾಹರ ನವೋದಯದ  ವಿದ್ಯಾರ್ಥಿಗಳು  ನಡೆಸಿಕೊಟ್ಟ  ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ‌

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ