Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ನ್ಯಾಯಾಧೀಶರಿಂದ ಸ್ಥಳ ಪರಿಶೀಲನೆ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ಖಾಸಗಿ ಬಸ್ ನಿಲ್ದಾಣ
, ಡಿವೈಎಸ್ಪಿ ಕಚೇರಿ ಬಳಿ ಸರ್ಕಾರದ ವತಿಯಿಂದ ಹೈಟೆಕ್ ಶೌಚಾಲಯಗಳನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಧೀಶರಾದ ವಿಜಯ್ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.

ಪೌರಾಯುಕ್ತರ ಎಚ್.ಜಿ.ಜಗರೆಡ್ಡಿ ಈ ಸಂದರ್ಭದಲ್ಲಿ ನ್ಯಾಯಾಧೀಶರಿಗೆ ಶೌಚಾಲಯದ ರೂಪುರೇಷೆ ಹಾಗೂ ಇನ್ನಿತರೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸ್ಥಳ ಪರಿಶೀಲನೆ ನಂತರ ಜಿಲ್ಲಾಧಿಕಾರಿಗಳ ಅನುಮತಿ ಪಡೆದ ಶೌಚಾಲಯ ಕಾಮಗಾರಿ ಆರಂಭವಾಗಲಿದೆ. ಟೆಂಡರ್ ಮೂಲಕವೇ ಕಾಮಗಾರಿ ಕೈಗೊಳ್ಳಲಾಗುವುದು. ಕಳೆದ ಸುಮಾರು ಎರಡು ವರ್ಷಗಳಿಂದ ಸಾರ್ವಜನಿಕರು ಹೈಟೇಕ್ ಶೌಚಾಲಯ ನಿರ್ಮಾಣ ಮಾಡುವಂತೆ ನಗರಸಭೆ ಆಡಳಿತದ ಮೇಲೆ ಒತ್ತಡ ಹೇರುತ್ತಿದ್ದರು. ನಗರಸಭೆಯ ಪೂರ್ವಬಾವಿ ಬಜೆಟ್ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪಿಸಿದ್ದರು ಎಂದು ತಿಳಿಸಿದರು.

ಪೌರಾಯುಕ್ತರಿಂದ ಮಾಹಿತಿ ಪಡೆದ ನ್ಯಾಯಾಧೀಶರು, ಈಗ ಪರಿಶೀಲಿಸಿರುವ ಎರಡೂ ಜಾಗಗಳು ಸಾರ್ವಜನಿಕರ ಹಿತದೃಷ್ಠಿಯಿಂದ ಅನುಕೂಲವಾಗಿದ್ದು ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಎಇಇ ಕೆ.ವಿಜಯ್, ವ್ಯವಸ್ಥಾಪಕ ಲಿಂಗರಾಜು, ಕಂದಾಯಾಧಿಕಾರಿ ಸತೀಶ್, ಹಿರಿಯ ಆರೋಗ್ಯ ನಿರೀಕ್ಷಕ ಗಣೇಶ್, ಮಹಲಿಂಗಪ್ಪ ಮುಂತಾದವರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ