Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

40 ಸಾವಿರ ಲಂಚ ಪಡೆಯುವಾಗ ಪಿಎಸ್​ಐ ಚೇತನ್ ಕುಮಾರ್ ಬಂಧಿಸಿದ ಲೋಕಾಯುಕ್ತರು

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಪೊಲೀಸರ ವಶದಲ್ಲಿದ್ದ ಕಾರನ್ನು ಬಿಡಿಸಿಕೊಳ್ಳಲು ಕಾರು ಮಾಲೀಕನಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಪೊಲೀಸ್‌ಸಬ್​ ಇನ್ಸ್​ಪೆಕ್ಟರ್​​ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ತುಮಕೂರು ಲೋಕಾಯುಕ್ತ ಪೊಲೀಸ್‌ಎಸ್ಪಿ ಲಕ್ಷ್ಮಿನಾರಾಯಣ ತಿಳಿಸಿದ್ದಾರೆ.


ಕಾರನ್ನು ಮಾಲೀಕರಿಗೆ ಹಿಂದಿರುಗಿಸಲು ಐದು ಲಕ್ಷ ಲಂಚಕ್ಕೆ ಒತ್ತಾಯ ಮಾಡಿ, 40,000 ರೂ. ಲಂಚದ ಹಣ ಸ್ವೀಕರಿಸಿ ಆರೋಪದ ಮೇಲೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್​ಐ ಚೇತನ್ ಕುಮಾರ್ ಅವರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ನಾಗದೇವನಹಳ್ಳಿಯ ನಾಗೇಶ್.ಎಸ್.ಕೆ ಅವರು ಶಿಕ್ಷಕರಾಗಿದ್ದು, ಸ್ವಂತ ಫ್ರಾಕ್ಸೆಲ್ ಅಕಾಡೆಮಿ ನಡೆಸುತ್ತಿದ್ದಾರೆ. ವಾರಂತ್ಯವಾದ್ದರಿಂದ 2026ರ ಜ.17 ರಂದು ಸ್ನೇಹಿತರೊಂದಿಗೆ ತಮ್ಮ ಕಿಯಾ ಸೋನೆಟ್ ಕಾರಿನಲ್ಲಿ ತುಮಕೂರು ನಗರದ ಕೆಸರುಮಡುಗೆ ಬಂದಿದ್ದರು.


ಅದೇ ದಿನ ಸಂಜೆ 06.30ಕ್ಕೆ ವಾಪಸ್ ತೆರಳುವಾಗ ಕೆಸರುಮಡು ದರ್ಗ ಸರ್ಕಲ್‌ನಲ್ಲಿ ಟೀ ಕುಡಿಯಲು ಕಾರು ನಿಲ್ಲಿಸಿದ್ದರು. ಆಗ ಆ ಕಾರನ್ನು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಚೇತನ್‌ಕುಮಾರ್ ಅವರು ಟೋಯಿಂಗ್ ಮಾಡಿಕೊಂಡು ತೆಗೆದುಕೊಂಡು ಹೋಗಿ, ಠಾಣೆ ಆವರಣದಲ್ಲಿ ನಿಲ್ಲಿಸಿಕೊಂಡಿದ್ದರು.


ಕಾರಿನ ಮಾಲೀಕ ನಾಗೇಶ್‌ಅವರು ಪಿಎಸ್​ಐ ಚೇತನ್‌ಕುಮಾರ್ ಅವರನ್ನು ಭೇಟಿ ಮಾಡಿ, ಕಾರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಾಗ, ನೀವು ಗಾಂಜಾ ಹೊಡೆದಿದ್ದೀರೆಂದು ಕೇಸ್ ಬುಕ್ ಮಾಡುತ್ತೇನೆ, ಕಾರನ್ನು ಕೋರ್ಟಿನಲ್ಲಿ ಬಿಡಿಸಿಕೊಳ್ಳಿ. ಇಲ್ಲವಾದಲ್ಲಿ 5 ಲಕ್ಷ ರೂ. ಹಣ ಕೊಟ್ಟು ಕಾರ್ ತೆಗೆದುಕೊಂಡು ಹೋಗಿ ಎಂದು ಲಂಚಕ್ಕೆ ಒತ್ತಾಯ ಮಾಡಿದ್ದರು ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.


ಅಂದಿನಿಂದ ಜನವರಿ 29ರವರೆಗೆ ನಾಗೇಶ್ ಅವರು ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ, ಕಡಿಮೆ ಮಾಡಿಕೊಳ್ಳಿ ಎಂದು ಹಲವು ಬಾರಿ ಮನವಿ ಮಾಡಿಕೊಂಡಿದ್ದರು. ಕೊನೆಗೆ ಸಬ್‌ಇನ್ಸ್​ಪೆಕ್ಟರ್​ ಚೇತನ್‌ಕುಮಾರ್ ಅವರು 40,000 ರೂ ನೀಡಿ ಕಾರು ತೆಗೆದುಕೊಂಡು ಹೋಗಲು ತಿಳಿಸಿದ್ದರು.
ನಾಗೇಶ್ ಅವರಿಗೆ ಲಂಚ ನೀಡಲು ಇಷ್ಟವಿಲ್ಲದೇ ಜ.30 ರಂದು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದರು.


ಪೊಲೀಸ್ ಅಧೀಕ್ಷಕರಾದ ಲಕ್ಷ್ಮೀನಾರಾಯಣ ಅವರು ಕಲಂ-7(3) ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ-1988 (ತಿದ್ದುಪಡಿ-2018) ರಂತೆ ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಳ್ಳಲು ಪೊಲೀಸ್ ಉಪಾಧೀಕ್ಷಕ ಮಂಜುನಾಥ.ಎಂ ಅವರಿಗೆ ಆದೇಶಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಟ್ರ್ಯಾಪ್ ಕಾರ್ಯಾಚರಣೆ ವೇಳೆ ಶುಕ್ರವಾರ ರಾತ್ರಿ ಸುಮಾರು 10.10 ಗಂಟೆಗೆ ಚೇತನ್‌ಕುಮಾರ್ ಸೂಚನೆಯಂತೆ ನಾಗೇಶ್ 40,000 ರೂ ಲಂಚವನ್ನು ಜಾಸ್‌ಟೋಲ್ ಬಳಿ ಇರುವ ಹೋಟೆಲ್​​ನ ಕ್ಯಾಷಿಯರ್ ಸಪ್ಲರ್ ಅಲಿಖಾನ್​ಗೆ ನೀಡಿದ್ದರು.


ಕೂಡಲೇ ತನಿಖಾಧಿಕಾರಿ ಪೊಲೀಸ್ ಉಪಾಧೀಕ್ಷಕರ ನೇತೃತ್ವದ ತಂಡ ಲಂಚದ ಹಣದ ಸಮೇತ ಕ್ಯಾಷಿಯರ್‌ನನ್ನು ವಶಕ್ಕೆ ಪಡೆದಿದ್ದರು. ನಂತರ ರಾತ್ರಿ 02-00 ಗಂಟೆಗೆ ಪಿಎಸ್​​ಐ ಚೇತನ್‌ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಬಳಿಕ ಬಂಧಿಸಿ, ಮುಂದಿನ ತನಿಖಾ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಶನಿವಾರ ಸಬ್‌ಇನ್ಸ್​ಪೆಕ್ಟರ್​ ಚೇತನ್‌ಕುಮಾರ್‌ಅವರನ್ನು 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಲೋಕಾಯುಕ್ತ ಎಸ್​ಪಿ ಮಾಹಿತಿ ನೀಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ