Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರಷ್ಟ ಅಧಿಕಾರಿಗಳ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ.

ಹಲವು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ಬಂಗಲೆಗಳು, ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಬಾಗಲಕೋಟೆ ಜಿಲ್ಲೆ ಜಿ.ಪಂ. ಯೋಜನಾ ನಿರ್ದೇಶಕರು ಹಾಗೂ

ಅಧಿಕಾರಿ ಆಗಿರುವ ಶ್ಯಾಂ ಸುಂದರ್ ಕಾಂಬಳೆ ಅವರ ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ನರಗುಂದದ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಇದೇ ಜಿಲ್ಲೆಯ ಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಅವರ ಮನೆಯ ಮೇಲೂ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
 

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮುಖ್ಯಾಕಾರ್ಯನಿರ್ವಹಣಾ ಅಧಿಕಾರಿ ಮಾರುತಿ ಯಶವಂತ ಮಾಳವಿ ಅವರ ನಿವಾಸದ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. 

ರಾಯಚೂರು ಜಿಲ್ಲೆಯ ಸಿಂಧನೂರು ಉಪ ವಿಭಾಗದ ಗ್ರಾಮೀಣ ಕುಡಿಯುವ ಸರಬರಾಜು ಇಲಾಖೆ ಎಇಇ ಡಿ.ವಿಜಯಲಕ್ಷ್ಮಿ ಮನೆ ಸೇರಿದಂತೆ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ದೂರಿನ ಮೇರೆಗೆ ದಾಳಿ ಮಾಡಲಾಗಿದೆ. ನಗರದ ಐಡಿಎಸ್ಂಟಿ ಲೇಔಟ್ ನ ನಾಲ್ಕಂತಸ್ತಿನ ಮನೆ ಮತ್ತು ಪಕ್ಕದಲ್ಲೆ ಇರುವ ಇನ್ನೊಂದು ಮನೆಯಲ್ಲಿ ದಾಖಲೆಗಳ ಶೋಧ ಕಾರ್ಯ ನಡೆಸಲಾಗುತ್ತಿದೆ. ಅದರ ಜತೆಗೆ ಸಿಂಧನೂರು ಕಚೇರಿ
, ಯಾದಗಿರಿ ತೋಟದ ಮನೆ, ಜೋಳದಡಗಿತೆ ಯಲ್ಲಿರುವ ಅವರ ತಂಗಿ ಮನೆ ಮೇಲೆಯೂ ದಾಳಿ ನಡೆಸಲಾಗಿದೆ.

ಯಾದಗಿರಿಯಲ್ಲಿ 30 ಎಕರೆ ಜಮೀನು, ಯಾದಗಿರಿಯಲ್ಲಿ ಲೆಔಟ್ ಗಳು, ಚಂದ್ರಬಂಡಾ ಬಳಿ ಜಮೀನು ಸೇರಿದಂತೆ ಸಾಕಷ್ಟು ಕಡೆ ಆಸ್ತಿ ಸಂಪಾದನೆ ಮಾಡಿರುವ ಮಾಹಿತಿಗಳು ಲಭ್ಯವಾಗಿದೆ.
ರಾಯಚೂರು
, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆ ಲೋಕಾಯುಕ್ತ ಪೊಲೀಸರು ಐದು ತಂಡಗಳಾಗಿ ದಾಳಿ ತಂಡ ಮಾಡಿದ್ದಾರೆ. ಇನ್ನೂ ಒಂದೂವರೆ ವರ್ಷ ಸೇವಾವಧಿ ಬಾಕಿ ಇತ್ತು. ಸಿಂಧನೂರಿನಲ್ಲಿಯೇ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು.

ರಾಯಚೂರು, ಬಾಗಲಕೋಟೆ, ವಿಜಯಪುರ ಹಾಗೂ ಉತ್ತರ ಕನ್ನಡ ಸೇರಿದಂತೆ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ರಾಯಚೂರು ನಗರದ ಸುಮಾರು ೪ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿವೃತ್ತ ಮಹಿಳಾ ಅಧಿಕಾರಿ ವಿಜಯಲಕ್ಷ್ಮಿ ಅವರ ಮನೆ ಮತ್ತು ಅವರಿಗೆ ಸೇರಿದ ಇತರೆ ಕಚೇರಿ ಮತ್ತು ನಿವಾಸಗಳನ್ನ ಪರಿಶೀನನೆ ನಡೆಸಿದ್ದಾರೆ. ನಿವೃತ್ತಿಯ ನಂತರವೂ ಅಕ್ರಮ ಆಸ್ತಿ ಹೊಂದಿರುವ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಸಾರ್ವಜನಿಕ ಸೇವೆಯಲ್ಲಿದ್ದುಕೊಂಡು ಜನಸಾಮಾನ್ಯರ ಹಣ ಲೂಟಿ ಮಾಡಿ ಅಕ್ರಮ ಆಸ್ತಿ ನಿರ್ಮಿಸುವವರ ವಿರುದ್ಧ ಲೋಕಾಯುಕ್ತ ಈ ಕಠಿಣ ಕ್ರಮ ಕೈಗೊಂಡಿದೆ.
ರಾಯಚೂರು ಜಿಲ್ಲೆಯಲ್ಲಿ ನಿವೃತ್ತ ಸಹಾಯಕ ಇಂಜಿನಿಯರ್ ವಿಜಯಲಕ್ಷ್ಮೀ ಅವರ ಶ್ರೀ ರೇಣುಕಾ ನಿಲಯದ ಮನೆಯಲ್ಲಿ ಪರಿಶೀಲನೆ ನಡೆದಿದೆ. ರಾಯಚೂರು ಲೋಕಾಯುಕ್ತ ಎಸ್ ಪಿ ಸತೀಶ್ ಚಿಟಗುಬ್ಬಿ ಮಾರ್ಗದರ್ಶನದಲ್ಲಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.


ದಾಳಿಗೆ ಒಳಗಾದ ಅಧಿಕಾರಿಗಳು-
ಸಿಂಧನೂರಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಬಿ.ವಿಜಯಲಕ್ಷ್ಮಿ ಮನೆ, ರಾಯಚೂರು ನಗರದಲ್ಲಿನ ಎರಡು ಮನೆ ಸೇರಿ ಐದು ಕಡೆ ದಾಳಿ.

ರಾಯಚೂರು, ಕೊಪ್ಪಳ, ಬಳ್ಳಾರಿ ಮೂರು ಜಿಲ್ಲೆಯ ಐದು ತಂಡಗಳಿಂದ ದಾಳಿ ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ ಹಿನ್ನೆಲೆ ದಾಳಿ. ರಾಯಚೂರಿನ ಐಡಿಎಸ್‌ಎಂಟಿ ಬಡಾವಣೆಯಲ್ಲಿನ ಮನೆ, ಗಂಗಾಪರಮೇಶ್ವರ ಲೇಔಟ್‌ನಲ್ಲಿನ ಮನೆ.

ಯಾದಗಿರಿ, ಜೋಳದೆಡಗಿ ಹಾಗೂ ಸಿಂಧನೂರಿನಲ್ಲಿ ಆರ್‌ಡಬ್ಲ್ಯೂಎಸ್ ಕಚೇರಿ ಮೇಲೆ ದಾಳಿ ಒಟ್ಟು 49 ಕಡೆಗಳಲ್ಲಿ ಎಇಇ ಬಿ.ವಿಜಯಲಕ್ಷ್ಮಿ ಆಸ್ತಿ ಮಾಡಿರುವುದು ಬೆಳಕಿಗೆ ಬಂದಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ