Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರಷ್ಟರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ಲೋಕಾಯುಕ್ತ ಎಸ್ಪಿ ಕೌಲಾಪುರೆ ನೇತೃತ್ವದ ತಂಡ ಕೈಗಾರಿಕೆ
, ವಾಣಿಜ್ಯ ಇಲಾಖೆ ಸಹಾಯ ನಿರ್ದೇಶಕ ಕಮಲರಾಜ್ ಮನೆ ಸೇರಿದಂತೆ ನಾನಾ ಕಡೆ ದಾಳಿ ನಡೆಸಿದೆ. ಆದಾಯಕ್ಕಿಂತ ಆಸ್ತಿ ಹೆಚ್ಚು ಗಳಿಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ದಾವಣಗೆರೆ ಡಿಸಿ ಕಚೇರಿ ಬಳಿ ಇರುವ ಕಚೇರಿ, ಶಕ್ತಿನಗರದ 3ನೇ ಕ್ರಾಸ್‌ನಲ್ಲಿನ ಮನೆ, ಚಿತ್ರದುರ್ಗದಲ್ಲಿನ 3 ಮನೆ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಒಂದು ಇನ್ನೋವಾ ಕಾರ್, ಬುಲೆಟ್ಮೂರು ಸೈಟ್ ಇರುವುದು ಗೊತ್ತಾಗಿದೆ. ಅಲ್ಲದೇ 1 ಲಕ್ಷ ನಗದು, ಚಿನ್ನ ಸಿಕ್ಕಿದೆ.

ಪರಿಶೀಲನೆ ಕಾರ್ಯ ನಡೆಯುತ್ತಿದೆ. ಇನ್ಸ್ಪೆಕ್ಟರ್‌ಗಳಾದ ಮಧು ಸೂದನ್ ಹಾಗೂ ಪ್ರಭು ಸೇರಿದಂತೆ 10ಕ್ಕೂ ಹೆಚ್ಚು ಸಿಬ್ಬಂದಿ ಪರಿಶೀಲನೆಯಲ್ಲಿ ತೊಡಗಿದ್ದು, ಇನ್ನಷ್ಟು ಮಾಹಿತಿ ಬರಬೇಕಿದೆ. ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ದಾವಣಗೆರೆ, ಧಾರವಾಡ, ಬೆಳಗಾವಿ ಹಾವೇರಿ, ಬೀದರ್​ ಸೇರಿದಂತೆ ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಧಾರವಾಡದಲ್ಲಿ ಕೆಐಎಡಿಬಿ ಎಇಇ ಮನೆ ಮೇಲೆ ದಾಳಿ:
ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಅವರಿಗೆ ಸಂಬಂಧಪಟ್ಟ ಆರು ಕಡೆಗಳಲ್ಲಿ ಅಧಿಕಾರಿಗಳು ದಾಳಿ‌ಮಾಡಿದ್ದಾರೆ. ಧಾರವಾಡದಲ್ಲಿ ಮೂರು, ಸವದತ್ತಿ ತಾಲೂಕಿನಲ್ಲಿ ಎರಡು ಹಾಗೂ ನರಗುಂದದಲ್ಲಿ ಒಂದು ಕಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸಂಬಂಧಿಕರ ಮನೆ‌ಮೇಲೂ ದಾಳಿ- ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರು ಸವದತ್ತಿ ತಾಲೂಕಿನ ಉಗರಗೋಳದಲ್ಲಿ ಹೊಂದಿರುವ ಫಾರ್ಮ್ ಹೌಸ್ ಮೇಲೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಇ ಮೇಲೆ ದಾಳಿ: ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಉ‌ಪ‌ವಿಭಾಗದ ಎಇ ಕಾಂತೇಶ್ ಭಜಂತ್ರಿ ಎಂಬುವರ ಕಚೇರಿ ಹಾಗೂ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂತೇಶ್ ಭಜಂತ್ರಿ ಕೆಲಸ ಮಾಡುತ್ತಿದ್ದ ಹಿರೇಕೇರೂರು ಕಚೇರಿ, ನಗರದಲ್ಲಿರುವ ಎರಡು ಮನೆಗಳ ಮೇಲೆ‌ಈ ದಾಳಿ ನಡೆದಿದೆ. ಇತ್ತ ನಗರದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ‌ಡಿಡಿ‌ಶ್ರೀನಿವಾಸ್ ಆಲದರ್ತಿ ಅವರ ನಿವಾಸದ ಮೇಲೂ ದಾಳಿ ಮಾಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮೇಲ್ವಿಚಾರಕಿ ಮನೆ ಮೇಲೆ ದಾಳಿ-
ರಾಣೆಬೆನ್ನೂರು ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿರುವ ಜ್ಯೋತಿ ಶಿಗ್ಲಿ ಅವರ ಮನೆ ಮೇಲೂ ಲೋಕಾ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೃತ್ಯುಂಜಯ ನಗರದ ನಿವಾಸಕ್ಕೆ ತೆರಳಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.


ಬೀದರ್‌ನಲ್ಲಿ ಲೋಕಾಯುಕ್ತ ದಾಳಿ-
ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರ ಕುಮಾರ್ ರೊಟ್ಟಿ ಅವರ ನಿವಾಸ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.


ಬೀದರ್, ಬೆಂಗಳೂರಿನಲ್ಲಿರುವ ನಿವಾಸ ಹಾಗೂ ನೌಬಾದ್‌ನಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ರವೀಂದ್ರ ಕುಮಾರ್ ಅವರು ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕರಾಗುವುದಕ್ಕೂ ಮುನ್ನ ಬೀದರ್ ಡಿಸಿ ಕಚೇರಿಯಲ್ಲಿ ಶಿರಸ್ತೇದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ