Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಹೆಚ್ ಬಿ ಇಂಜಿನಿಯರ್ ಗಳ ಮೇಲೆ ದಿಢೀರ್ ದಾಳಿ ಮಾಡಿದ ಲೋಕಾಯುಕ್ತರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಹೌಸಿಂಗ್ ಬೋರ್ಡ್ ಕೆಲ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತರು ದಿಢೀರ್ ದಾಳಿ ಮಾಡಿರುವ ಘಟನೆ ನಡೆದಿದೆ.


ಕರ್ನಾಟಕ ಗೃಹ‌ ಮಂಡಳಿ (ಕೆಹೆಚ್‌ಬಿ)ಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಸೇರಿದಂತೆ ಇಬ್ಬರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಇಬ್ಬರು ಅಧಿಕಾರಿಗಳು ಅಕ್ರಮವಾಗಿ ಸೈಟ್​​ ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತರು ದಾಳಿ ಮಾಡಿ ಮಾಹಿತಿ ಸಂಗ್ರಹ ಮಾಡಿದ್ದಾರೆ.

ಕೆಹೆಚ್‌ಬಿಯ ಯಲಹಂಕ ನ್ಯೂಟೌನ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೈಯದ್ ಅಸ್ಗರ್ ಹಾಗೂ ಗೋವಿಂದಯ್ಯ ಎಂಬವರ ಕಚೇರಿ ಸೇರಿದಂತೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಆರೋಪಿತರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ದೂರು?: ಯಲಹಂಕ ನ್ಯೂಟೌನ್‌ನ ಸೈಟ್ ನಂಬರ್ 271A ಸೆಕ್ಟರ್‌ಗೆ ಸಂಬಂಧಿಸಿದಂತೆ ಇಂಜಿನಿಯರ್ ಸೈಯದ್ ಅಸ್ಗರ್ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾರೆ.‌ ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಸುಮಾರು 10 ಕೋಟಿ ರೂ. ನಷ್ಟವಾಗಿದೆ ಎಂದು ಆರೋಪಿಸಿ ಕೆ. ಎಸ್. ಚಂದ್ರಶೇಖರ ಆಜಾದ್ ಎಂಬವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.


ಅಕ್ರಮಗಳ ಸಂಬಂಧ ಸೈಯದ್ ಅಸ್ಗರ್, ಗೋವಿಂದಯ್ಯ ಹಾಗೂ ಸತೀಶ್ ಹರಿಣಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಯಲಹಂಕ ನ್ಯೂಟೌನ್‌ನ ಕೆಹೆಚ್‌ಬಿ ಕಚೇರಿ, ಆರ್.ಟಿ. ನಗರದಲ್ಲಿರುವ ಸೈಯದ್ ಅಸ್ಗರ್ ನಿವಾಸ ಹಾಗೂ ಗೋವಿಂದಯ್ಯ ನಿವಾಸದಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ