Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರಷ್ಟ ಅಧಿಕಾರಿಗಳ ಮನೆ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಾಯುಕ್ತ ಪೊಲೀಸರು ಕರ್ನಾಟಕದಾದ್ಯಂತ
 ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಅಕ್ರಮ ಆಸ್ತಿ ಪತ್ತೆ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾಯುಕ್ತರು
, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ 12 ಕಡೆ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತರು ದಾಳಿ ಮಾಡುವ ಮೂಲಕ ಅಧಿಕಾರಿಗಳಿಗೆ ಶಾಕ್​ ನೀಡಿದ್ದಾರೆ.

ಬೆಂಗಳೂರಿನ 12, ತುಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿ 5, ಮಂಗಳೂರಿನ 4, ಮತ್ತು ವಿಜಯಪುರದ 4 ಕಡೆ ಲೋಕಾಯುಕ್ತರು ದಾಳಿ ಮಾಡಿ ಮಾಹಿತಿ ಸಂಗ್ರಹ ಮಾಡಿದ್ದಾರೆ.

ತುಮಕೂರು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ಮಂಗಳೂರಿನ ಸರ್ವೆ ಸೂಪರ್ವೈಸರ್ ಮಂಜುನಾಥ್, ವಿಜಯಪುರದ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧಿಕಾರಿ ರೇಣುಕಾ, ಬೆಂಗಳೂರಿನ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿವಿ, ಬೆಂಗಳೂರಿನ ಕಾನೂನು ಮಾಪನಶಾಸ್ತ್ರ ಇನ್ಸ್‌ಪೆಕ್ಟರ್ ಹೆಚ್​ಆರ್ ನಟರಾಜ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಕಛೇರಿ SDA ಅನಂತ್ ಕುಮಾರ್, ಯಾದಗಿರಿ ಶಹಾಪುರ ತಾಲೂಕು ಕಚೇರಿ ತಹಶೀಲ್ದಾರ್ ಉಮಾಕಾಂತ್ ಸೇರಿದಂತೆ ಎಲ್ಲರ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಕೇಳಿ ಬಂದಿದ್ದು ಲೋಕಾಯುಕ್ತರು ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಹಸೀಲ್ದಾರ್​​ ಉಮಾಕಾಂತ ಹಳ್ಳೆ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್​​ ಕಚೇರಿ ಮೇಲೂ ದಾಳಿ ಮಾಡಲಾಗಿದೆ.

ತುಮಕೂರಿನಲ್ಲಿ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ ಮತ್ತು ಅವರ ಸಹೋದರನ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ವಿಜಯಪುರ ‌ನಗರದ ಸೆಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ಲೋಕಾಯುಕ್ತ ಎಸ್​​ಪಿ ಟಿ. ಮಲ್ಲೇಶ್​ ಹಾಗೂ‌ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಅತ್ತ ಸೊಲ್ಲಾಪುರ ನಗರದ ಕೆಹೆಚ್​​ಬಿ ಪ್ರದೇಶದಲ್ಲಿರುವ ನಿವಾಸದ ಮೇಲೂ ಡಿವೈಎಸ್​​ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ.

ದೇವನಹಳ್ಳಿ ಹಾಗೂ ಹೊಸಕೋಟೆಯಲ್ಲಿ ಭೂ‌ಮಂಜೂರಾತಿ ವಿಭಾಗದಲ್ಲಿ ಕೆಲಸ ಮಾಡಿದ್ದ ಅನಂತ್ ಅವರು ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೋದನ ಹೊಸಹಳ್ಳಿಯಲ್ಲಿರುವ ಎಸ್​ಡಿಎ ಅನಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.

ದ.ಕನ್ನಡ ಲೋಕಾಯುಕ್ತ ಎಸ್​ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಂಗಳೂರಿನ ಬಿ.ಜೈ.ನಲ್ಲಿರುವ ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿ ಅಗತ್ಯ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ