Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಗವಾನ್ ಬುದ್ಧರ ತತ್ವಾದರ್ಶಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಬಸವರಾಜು

Advertisement
ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಭಗವಾನ್ ಬುದ್ಧರ ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ
, ಸಹನೆ, ಸಹಬಾಳ್ವೆ ಸಂದೇಶಗಳು ನಮಗೆಲ್ಲರಿಗೂ ಸ್ಪೂರ್ತಿ. ಜ್ಞಾನದ ಬೆಳಕನ್ನು ಜಗತ್ತಿಗೇ ನೀಡಿದಂತಹ ಮಹಾನ್ ವ್ಯಕ್ತಿ ಗೌತಮ ಬುದ್ಧರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಭಗವಾನ್ ಬುದ್ಧಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗೌತಮ ಬುದ್ಧರ ಜಯಂತಿಯನ್ನು ಸರ್ಕಾರದಿಂದ ಪ್ರಥಮವಾಗಿ ಆಚರಿಸಲಾಗುತ್ತಿದೆ.  ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯವನ್ನು ಸ್ಮರಿಸುವ ಉದ್ದೇಶದಿಂದ ಬುದ್ಧ ಜಯಂತಿ ಆಚರಿಸಲಾಗುತ್ತಿದೆ. ಜ್ಞಾನೋದಯ, ಕರುಣೆ ಮತ್ತು ಶಾಂತಿಯನ್ನು ಪರಿಗಣಿಸಲು ಇದು ಒಂದು ದಿನವಾಗಿದೆ. ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ಭೋದಿಸಿದ ಭಗವಾನ್ ಬುದ್ಧರ ತತ್ವ ಬೋಧನೆಗಳನ್ನು ಅರಿತರೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಯೂರಲಿದೆ ಎಂದರು.

ದಿವ್ಯ ಸಾನಿದ್ಯರಾಗಿದ್ದ ಬೌದ್ಧ ಬಿಕ್ಕುಣಿ ಮಾತಾ ಮೈತ್ರಿ ಅವರು ಮಾತನಾಡಿ ಬುದ್ಧನು ಹೇಳಿರುವ ಬೌದ್ಧ ಧರ್ಮದ ೩ ಸಂದೇಶವನ್ನು  ತಿಳಿಸಿದರು. ಬುದ್ಧರ ಉಪದೇಶಗಳು ಜ್ಞಾನ ಮಾರ್ಗವನ್ನು ಅರಿತರೇ ಅದು ಮನುಷ್ಯರ ಮನಸ್ಸಿನ ಶುದ್ಧಿ ಮತ್ತು ಇದರಿಂದ ದುಃಖ ನಿವಾರಣೆ ಹೊಂದಲು ಸಾಧ್ಯವಾಗುತ್ತದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ವಕೀಲ ಮಹೇಶ್ ದಾಸ್ ಅವರು ಪ್ರಾಚೀನ ಗ್ರಂಥಗಳ ಪ್ರಕಾರ, ಭಗವಾನ್ ಬುದ್ಧನು ರಾಜಕುಮಾರ ಸಿದ್ದಾರ್ಥ ಆಗಿ ಜನಿಸಿ, ಯಾವಾಗಲೂ ಐಷಾರಾಮಿ ಮತ್ತು ಭೌತಿಕ ಸಂತೋಷಗಳಿಂದ ತನ್ನ ಜೀವನವನ್ನು ಸಾಗಿಸುತ್ತಿದ್ದನು. ಒಮ್ಮೆ, ಅವನು ಒಬ್ಬ ಮುದುಕ, ಅಸ್ವಸ್ಥ ಮತ್ತು ಶವವನ್ನು ನೋಡಿದನು. ಒಬ್ಬ ಮನುಷ್ಯನ ದುಃಖದ ಹಿಂದಿನ ಕಾರಣಗಳನ್ನು ಹುಡುಕುವ ಪ್ರಚೋದನೆಯನ್ನು ಅವರು ಇದರಿಂದ ಪಡೆದುಕೊಂಡರು.

ನಂತರ ಅವರು ಉತ್ತರಗಳನ್ನು ಪಡೆಯುವ ಹುಡುಕಾಟದಲ್ಲಿ ೨೯ ನೇ ವಯಸ್ಸಿನಲ್ಲಿ ತನ್ನ ಮನೆಯನ್ನು ತೊರೆದು ಆಲದ ಮರದ ಕೆಳಗೆ ಕುಳಿತು ಜ್ಞಾನೋದಯವನ್ನು ಪಡೆಯಲು ಪ್ರಯತ್ನಿಸಿದರು. ಆಳವಾದ ಧ್ಯಾನದ ನಂತರ ಅವರು ತಮ್ಮ ೩೫ನೇ ವಯಸ್ಸಿನಲ್ಲಿ ಜ್ಞಾನೋದಯವನ್ನು ಪಡೆದುಕೊಂಡು ಮಹಾತ್ಮ ಬುದ್ಧ ಎಂದು ಕರೆಸಿಕೊಂಡರು. ಈ ಜ್ಞಾನದಿಂದ ಅವರು ಸಾಕಷ್ಟು ಬೋಧನೆಗಳನ್ನು ನೀಡಿದ್ದರು. ಅದನ್ನು ಎಲ್ಲರು ತಿಳಿದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖಂಡರಾದ ಶ್ರೀನಿವಾಸ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ