Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತಗಳ್ಳತನದ ಪಿತಾಮಹ ಲಾಟರಿ ಸಿಎಂ ಸಿದ್ದರಾಮಯ್ಯ!

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮತಗಳ್ಳತನದ ಪಿತಾಮಹ ಯಾರಪ್ಪ ಅಂದರೆ ಅದು ಲಾಟರಿ ಸಿಎಂ ಸಿದ್ದರಾಮಯ್ಯ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.

"2018 ರ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲುವ ಹಂತದಲ್ಲಿದ್ದರು. ಆಗ ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು" ಎಂದು ಸಿದ್ದರಾಮಯ್ಯ ಅವರ ಆಪ್ತ, ಸಿ.ಎಂ.ಇಬ್ರಾಹಿಂ ಹೇಳಿರುವುದು ಮತಗಳ್ಳತನದ ಪಿತಾಮಹ ಯಾರು ಎಂಬುದನ್ನ ಸಾಬೀತುಪಡಿಸಿದೆ.


"ಕೌಂಟಿಂಗ್ ದಿನ ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದರು. ಆಗ ನಾನು ಮ್ಯಾನೇಜ್ ಮಾಡಿದ್ದೇನೆ, 800-1000 ವೋಟುಗಳ ಚಿಕ್ಕ ಅಂತರದಲ್ಲಿ ಗೆಲ್ಲುತ್ತೀರಿ ಎಂದು ಹೇಳಿದ್ದೆ. ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು" ಎಂದೂ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ2018ರಲ್ಲಿ ನಿಮ್ಮ ದುರಾಡಳಿತ, ಭ್ರಷ್ಟಾಚಾರಕ್ಕೆ ಬೇಸತ್ತು ಕರ್ನಾಟಕದ ಜನತೆ ನಿಮ್ಮ ಸಂಪುಟದ 10 ಸಚಿವರನ್ನು ಸೋಲಿಸಿ ಮನೆಗೆ ಕಳುಹಿಸಿದ್ದರು. ನೀವು ಕೂಡಾ ಭಯದಿಂದ ಎರಡು ಕಡೆ ಚುನಾವಣೆಗೆ ಸ್ಪರ್ಧೆ ಮಾಡಿದ್ದಿರಿ.

ಸಿ.ಎಂ. ಇಬ್ರಾಹಿಂ ಅವರು ಹೇಳಿದಂತೆ 2018ರಲ್ಲಿ ನೀವು ಮತಗಳ್ಳತನ ಮಾಡಿ ಗೆಲ್ಲದೇ ಹೋಗಿದ್ದರೆ, ನಂತರ 2019 ರಲ್ಲಿ ವಿಪಕ್ಷ ನಾಯಕರೂ ಆಗುತ್ತಿರಲಿಲ್ಲ, ಈಗ ಮತ್ತೊಮ್ಮೆ ಮುಖ್ಯಮಂತ್ರಿಗಳೂ ಆಗುತ್ತಿರಲಿಲ್ಲ ಎಂದು ಅಶೋಕ್ ಟೀಕಿಸಿದ್ದಾರೆ.

ಮತಗಳ್ಳತನ ಮಾಡಿ ಗೆದ್ದ ನಿಮಗೆ ಸಿಎಂ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯಲು ಹಕ್ಕಿಲ್ಲ. ನಿಮಗೆ ಕಿಂಚಿತ್ತಾದರೂ ನೈತಿಕತೆ ಆತ್ಮಸಾಕ್ಷಿ ಇದ್ದರೆ, ರಾಜೀನಾಮೆ ಕೊಟ್ಟು ರಾಜ್ಯದ ಜನತೆಯ ಕ್ಷಮೆ ಕೇಳಿ ಎಂದು ವಿಪಕ್ಷ ನಾಯಕ ಅಶೋಕ್ ತಾಕೀತು ಮಾಡಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ