Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರ ನಿಷ್ಠೆ, ಪ್ರಾಮಾಣಿಕತೆ ಶ್ಲಾಘನೀಯ-ಸಿಎಂ ಡಿ.ಕೆ.ಶಿ ಪ್ರಶಂಸೆ

Advertisement
Advertisement

​ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಜನಸೇವೆಯಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ನಿಷ್ಠೆ
, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ ಶ್ಲಾಘನೀಯ," ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

​ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ 'ನಮ್ಮಭಿಮಾನದ ಅಭಿನಂದನಾ ಸಮಾರಂಭ'ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

​ಉತ್ತಮ ಆಡಳಿತಕ್ಕೆ ಸರ್ಕಾರದ ಬೆಂಬಲ:
​ರಾಜ್ಯದಲ್ಲಿ ಉತ್ತಮ ಹಾಗೂ ಜನಪರ ಆಡಳಿತವನ್ನು ನೀಡಲು ಸರ್ಕಾರ ಸದಾ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಶ್ರಮ ದೊಡ್ಡದಾಗಿದ್ದು, ಅವರ ಹಿತರಕ್ಷಣೆ ಹಾಗೂ ಉತ್ತಮ ಆಡಳಿತಕ್ಕಾಗಿ ಸರ್ಕಾರ ಯಾವಾಗಲೂ ನೌಕರರೊಂದಿಗೆ ಕೈಜೋಡಿಸಿ ಕೆಲಸ ಮಾಡಲಿದೆ ಎಂದು ಡಿಸಿಎಂ ಭರವಸೆ ನೀಡಿದರು.

​​ಈ ಭವ್ಯ ಸಮಾರಂಭದಲ್ಲಿ ನಾಡಿನ ಪ್ರಮುಖ ಪೂಜ್ಯರು ಹಾಗೂ ರಾಜಕೀಯ ಮುಖಂಡರು ಭಾಗವಹಿಸಿದ್ದರು.

​ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ​ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಉಪಮುಖ್ಯಮಂತ್ರಿ ​ಡಾ. ಜಿ. ಪರಮೇಶ್ವರ್, ​ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸೇರಿದಂತೆ ಪ್ರಮುಖ ಮುಖಂಡರಾದ ಎಲ್. ಭೈರಪ್ಪ, ರಮೇಶ್ ಸಂಗಾ, ಅಮೃತ್ ರಾಜ್, ಬಸವರಾಜು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸಾವಿರಾರು ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.