Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದಕರಿ ನಾಯಕರ ಪುಣ್ಯಸ್ಮರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಾಡ ದೊರೆ ರಾಜಾವೀರ ಮದಕರಿನಾಯಕನ ೨೪೩ ನೇ ಪುಣ್ಯಸ್ಮರಣೆಯನ್ನು ಗುರುವಾರ ನಾಯಕ ಸಮಾಜದಿಂದ ಆಚರಿಸಲಾಯಿತು.


ಮದಕರಿನಾಯಕನ ಪ್ರತಿಮೆಗೆ ಬೃಹಧಾಕಾರವಾದ ಹೂಮಾಲೆ ಅರ್ಪಿಸಿ ನಂತರ ರಾಜಾವೀರಮದಕರಿನಾಯಕ ಫೋಟೋಗೆ ಪುಷ್ಪನಮನ ಸಲ್ಲಿಸಿ ಬಳಿಕ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಶ್ರೀರಂಗಪಟ್ಟಣದಲ್ಲಿ ರಾಜಾವೀರ ಮದಕರಿನಾಯಕನ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದರು.

ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ರಾಜನಹಳ್ಳಿಯಲ್ಲಿ ನಮ್ಮ ಮಠವಿದೆ. ಸ್ವಾಮಿಜಿಗಳು ಹೇಳಿದಂತೆ ನಾವುಗಳು ಕೇಳುತ್ತೇವೆ. ಅಮಿತ್‌ಷಾ ಚಿತ್ರದುರ್ಗಕ್ಕೆ ಬಂದಾಗ ಥೀಮ್ ಪಾರ್ಕ್ ನಿರ್ಮಿಸುವುದಾಗಿ ಭರವಸೆ ನೀಡಿದ್ದರೂ ಇದುವರೆವಿಗೂ ಈಡೇರಿಲ್ಲ. ತಿಮ್ಮಣ್ಣನನಾಯಕ ಕೆರೆ ಸಮೀಪ ತೋಟಗಾರಿಕೆ ಇಲಾಖೆಗೆ ಸೇರಿದ ಸಾಕಷ್ಟು ಜಾಗವಿದೆ. ಅಲ್ಲಿ ಥೀಮ್ ಪಾರ್ಕ್ ನಿರ್ಮಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕೇಂದ್ರ ಸರ್ಕಾರವನ್ನು ಎಚ್ಚರಿಸಿದರು.

ರಾಜಾಮದಕರಿನಾಯಕ ಮಾತನಾಡಿ ಶ್ರೀರಂಗಪಟ್ಟಣದ ಪಶ್ವಿಮ ವಾಹಿನಿ ತೀರದಲ್ಲಿ ರಾಜಾವೀರ ಮದಕರಿನಾಯಕರ ದೇಹ ದಹನವಾಯಿತು. ಹಾಗಾಗಿ ಅಲ್ಲಿ ಸ್ಮಾರಕವಾಗಬೇಕು. ದಕ್ಷಿಣ ಭಾರತದಲ್ಲಿಯೆ ಅತ್ಯಂತ ಪ್ರಮುಖ ಐತಿಹಾಸಿಕ ಸ್ಥಳವಾಗಿರುವ ಚಿತ್ರದುರ್ಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ಷಾ ಭೇಟಿ ನೀಡಿದಾಗ ಥೀಂ ಪಾರ್ಕ್ ನಿರ್ಮಿಸುವುದಾಗಿ ಹೇಳಿ ಹೋಗಿದ್ದರು. ಇನ್ನು ಆಗಿಲ್ಲ. ಕೇಂದ್ರ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಆಗ್ರಹಿಸಿದರು.

ಬಾಲೇನಹಳ್ಳಿ ತಿಪ್ಪೇಸ್ವಾಮಿ, ನಗರಸಭೆ ಸದಸ್ಯ ವೆಂಕಟೇಶ್, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾ ಕಾಂಗ್ರೆಸ್ ಎಸ್.ಟಿ.ಸೆಲ್ ವಿಭಾಗದ ಅಧ್ಯಕ್ಷ ಮಂಜುನಾಥ್, ರತ್ನಮ್ಮ

ಹೆಚ್.ಅಂಜಿನಪ್ಪ, ಪ್ರಶಾಂತ್ ಕೂಲಿಕಾರ್, ಯುವ ನ್ಯಾಯವಾದಿ ಅಶೋಕ್‌ಬೆಳಗಟ್ಟ, ಓಬಳೇಶ್ ಮುದ್ದಾಪುರ ಹೊಸಹಟ್ಟಿ ಇನ್ನು ಅನೇಕು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ