Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ, ಮುಸ್ಲಿಂ, ಕ್ರೈಸ್ತ ಭೂಮಿಗಳ ಮೇಲೆ ವಕ್ಫ್ ಹಿಡಿತ ತಪ್ಪಿಸಬೇಕು-ಮಾದಾರಚೆನ್ನಯ್ಯ ಸ್ವಾಮೀಜಿ 

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಾದ್ಯಂತ ವಕ್ಫ್  ಆಸ್ತಿ ಸಂಬಂಧಿಸಿದ ಗದ್ದಲಗಳು ಮಾರ್ದನಿಸಿದ್ದು ರೈತರು ಒಳಗೊಂಡಂತೆ ಹಿಂದೂ
, ಕ್ರೈಸ್ತ ಮುಸ್ಲಿಂ ಬಾಂಧವರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕಾನೂನು ಜಾರಿಗೆ ತರಬೇಕು.

ಹಿಂದೂ, ಮುಸ್ಲಿಂ, ಕ್ರೈಸ್ತ ಭೂಮಿಗಳ ಮೇಲೆ ವಕ್ಫ್ ಹಿಡಿತ ಸಾಧಿಸುವುದನ್ನು ತಡೆಯಬೇಕು ಎಂದು ಶಿವಶರಣ ಮಾದಾರಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅವರು ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ವಕ್ಫ್ ಅಸ್ತಿ , ರೈತರ , ಶ್ರೀಸಾಮಾನ್ಯರ ಭೂಮಿಯ ಅತಿಕ್ರಮಣದ ವಿವರಗಳು ಪ್ರತಿನಿತ್ಯ ಎಂಬಂತೆ ಹಲವು ಜಿಲ್ಲೆಗಳಿಂದ ಹೊರ ಬರುತ್ತಿದೆ .

ವಿಜಯಪುರ , ಹಾವೇರಿ , ಬಾಗಲಕೋಟೆ , ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ರೈತರು , ಶ್ರೀಸಾಮಾನ್ಯರು ಇದ್ದಾರೆ . ಸಂಬಂಧಿತರ ಸಚಿವರು ವಕ್ಫ್ ಆಸ್ತಿ ಅತಿಕ್ರಮಣದ ನೆಪದಲ್ಲಿ ರೈತರಿಗೆ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದು ಸಮಸ್ಯೆ ಉಲ್ಭಣಿಸಲು ಕಾರಣವಾಗಿದೆ ಎಂದು ಸ್ವಾಮೀಜಿಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸರ್ಕಾರ ವಕ್ಫ್ ಆಸ್ತಿ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ನಡೆಸಬೇಕು. ಸಂಪುಟದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದರ ಮೂಲಕ ವಕ್ಫ್ ಆಕ್ರಮಣ ನೀತಿಗೆ ತಡೆ ನೀಡಬೇಕು. ಅಗತ್ಯ ಬಂದಲ್ಲಿ 1975 ರ ಗೆಜೆಟ್ ನೋಟಿಫಿಕೇಷನ್ ಹಿಂದಕ್ಕೆ ಪಡೆಯಬೇಕು ಎಂದು ಸ್ವಾಮೀಜಿಗಳು ತಾಕೀತು ಮಾಡಿದರು.

ಸಿಎಂ ಸಿದ್ದರಾಮಯ್ಯ ಹಾಲಿ ರೈತರಿಗೆ ನೀಡಿರುವ ನೋಟಿಸು ವಾಪಸ್ಸು ಪಡೆದಿರಬಹುದು. ಇದು ತಾತ್ಕಾಲಿಕ ಕ್ರಮವಾಗುತ್ತದೆ. ಮುಂದೆ ಬರುವ ಸರ್ಕಾರಗಳು ಇದೇ ನೀತಿ ಅನುಸರಿಸುತ್ತಾರೆಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ.

ಹಾಗಾಗಿ  ಇದಕ್ಕೊಂದು ಶಾಶ್ವತ ಪರಿಹಾರ ಈಗಲೇ ಕಂಡು ಹಿಡಿಯಬೇಕು. ಶ್ರೀ ಸಾಮಾನ್ಯರ ಆತಂಕವನ್ನು ದೂರ ಮಾಡುವತ್ತ ರಾಜ್ಯ ಸರ್ಕಾರ ಕಟ್ಟುನಿಟ್ಟಾದ , ಸ್ಪಷ್ಟವಾದ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮೀಜಿ ಆಗ್ರಹ ಮಾಡಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ