Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಲು ತೂರಾಟ ಖಂಡಿಸಿ ಮದ್ದೂರ್ ಬಂದ್ ಯಶಸ್ವಿ

Advertisement
ಚಂದ್ರವಳ್ಳಿ ನ್ಯೂಸ್, ಮದ್ದೂರು:
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮಂಗಳವಾರ ಬಂದ್​ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಮದ್ದೂರು ಸಂಪೂರ್ಣ ಸ್ತಬ್ಧವಾಗಿತ್ತು. ಅಂಗಡಿ, ಮುಂಗಟ್ಟುಗಳು ಬಂದ್ ಆಗಿದ್ದವು. ರಸ್ತೆಗಳು ಜನ ಸಂಚಾರ ಇಲ್ಲದೇ ಖಾಲಿ ಖಾಲಿಯಾಗಿದ್ದವು.

ಮದ್ದೂರಿನ ಕೆಎಂ ದೊಡ್ಡಿ, ಬೆಸಗರಹಳ್ಳಿ, ಕೆಸ್ತೂರು ಸೇರಿದಂತೆ ಹೋಬಳಿ ಕೇಂದ್ರಗಳಲ್ಲೂ ಬಂದ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹಿಂದೂ ಪರ ಸಂಘಟನೆಗಳು ನೀಡಿದ್ದ ಬಂದ್​ಗೆ ಬಿಜೆಪಿ ಕೂಡ ಬೆಂಬಲ ಸೂಚಿಸಿತ್ತು. ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು.

ಕಲ್ಲು ತೂರಾಟ ಪ್ರಕರಣ ಸಂಬಂಧ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮದ್ದೂರು ವಕೀಲರ ನಿರ್ಧರಿಸಿದ್ದಾರೆ. ವಕೀಲರು ಕೋರ್ಟ್ ಕಲಾಪ ಬಹಿಷ್ಕಾರ ಮಾಡಿ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ.
ಹಾಗೆಯೇ ಮಂಡ್ಯದ ಜಿಲ್ಲಾ ವಕೀಲರ ಸಂಘಕ್ಕೂ ತಾಲೂಕು ಸಂಘ ಮನವಿ ಮಾಡಿದೆ ಎಂದು ಮದ್ದೂರು ತಾಲೂಕು ವಕೀಲರ ಸಂಘದ ಅಧ್ಯಕ್ಷ ಶಿವಣ್ಣ ಹೇಳಿಕೆ ನೀಡಿದ್ದಾರೆ.


ಬಿಗಿ ಭದ್ರತೆ: ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಸ್ಥಳಕ್ಕೆ ಮಂಡ್ಯ ಎಸ್ಪಿ ಬಾಲದಂಡಿ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.


ಮದ್ದೂರಿನಲ್ಲಿ ಭಾನುವಾರ ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿದೆ. ಆ ವೇಳೆ ಗುಂಪು ಘರ್ಷಣೆಯಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಶೇಷ ಬಂದೋ ಬಸ್ತ್ ಕಲ್ಪಿಸಲಾಗಿದೆ. 7 ಎಸ್ಪಿ, ಮೂರು ಎಎಸ್ಪಿ, 600 ಪೊಲೀಸರು ಸೇರಿದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ರಾತ್ರಿ ವೇಳೆ ಕೂಡ ಕಟ್ಟೆಚ್ಚರ ವಹಿಸಲಾಗಿದೆ. ಬುಧವಾರ ಸಾಮೂಹಿಕ ಗಣೇಶ ಮೂರ್ತಿ ನಿಮಜ್ಜನ ಇದ್ದು, ವಿಶೇಷ ಬಂದೋಬಸ್ತ್ ಕಲ್ಪಿಸಲಾಗಿದೆ.

ಬೆಳಗ್ಗೆವರೆಗೂ 144 ಸೆಕ್ಷನ್ ಜಾರಿ ಇದೆ. 22 ಆರೋಪಿಗಳು ಅರೆಸ್ಟ್ ಮಾಡಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮದ್ದೂರಿನಲ್ಲಿ ಐಜಿಪಿ ಬೋರಲಿಂಗಯ್ಯ ಮಾಹಿತಿ ನೀಡಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾದ ಕೆಲವರ ಮೇಲೆ ಮತ್ತೊಂದು ಎಫ್​ಐಆರ್ ದಾಖಲಾಗಿದೆ. ಮದ್ದೂರು ಪ್ರಕರಣದ ಬಳಿಕ ಒಟ್ಟು 500 ಜನರ ಐದು ಎಫ್​ಐಆರ್ ದಾಖಲಾಗಿವೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ