ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಭೀಮಸಮುದ್ರ ರಸ್ತೆಯ ಧವಳಗಿರಿ ಬಡಾವಣೆಯ ಎರಡನೇ ಹಂತದಲ್ಲಿರುವ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಇದೇ ಜೂನ್ 5 ಮತ್ತು 6ರಂದು ಹಮ್ಮಿಕೊಳ್ಳಲಾಗಿದೆ.
ಜೂನ್ 5ರಂದು ಶುಕ್ರವಾರ ಬೆಳಿಗ್ಗೆ 8 ರಿಂದ ಸ್ವಸ್ತಿ ಪುಣ್ಯಾಹವಾಚನ, ಆಚಾರ್ಯದಿ ಋತ್ವಿಗ್ವರಣ, ಪಂಚಗವ್ಯ ಹವನ, ಕ್ಷಿಪ್ರ ಪ್ರಸಾ ಮಹಾಗಣಪತಿಗೆ ಮಹಾನ್ಯಾಸ ಪೂರ್ವಕ ಲಘು ರುದ್ರಾಭಿಷೇಕ, ಮಹಾಭಿಷೇಕ ಪೂಜಾದಿಗಳು ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 6.30 ರಿಂದ ಕೆ.ಗಂಗಾಧರ್ ಅವರ ಹಂಸಗಾನ ಕಲಾ ಬಳಗದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ತದನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
ಜೂನ್ 6ರಂದು ಶನಿವಾರ ಬೆಳಿಗ್ಗೆ 8 ರಿಂದ ಶ್ರೀ ಕ್ಷಿಪ್ತ ಪ್ರಸಾದ ಮಹಾಗಣಪತಿಗೆ ಪಂಚಾಮೃತ ಸಹಿತ ರುದ್ರಾಭಿಷೇಕ ಹಾಗೂ ನವಗ್ರಹ ಪುರಸ್ಸರ ಅಷ್ಟದ್ರವ್ಯ ಮಹಾಗಣಪತಿ ಹೋಮ, ಪೂರ್ಣಾಹುತಿ, ಅಲಂಕಾರ ಮಧ್ಯಾಹ್ನ 12.30 ರಿಂದ ಅಷ್ಟಾವಧಾನ ಮಹಾಮಂಗಳಾರತಿ ನಂತರ ಮಧ್ಯಾಹ್ನ 1 ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ಧವಳಗಿರಿ ಬಡಾವಣೆಯ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ 9880466192, 9449145416 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



