Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಶಿವರಾತ್ರಿ ಹಬ್ಬದ ಸಡಗರ ಸಂಭ್ರಮ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ದಿನಾಚರಣೆ, ಜಯಂತಿ, ಉತ್ಸವಗಳು ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ. ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಆಚರಣೆಗೂ ಹಿನ್ನೆಲೆಯಿದೆ, ಅನೇಕ ಕಥೆಗಳಿವೆ. ​

ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಮಹಾ ಶಿವರಾತ್ರಿಯಂದು ಬಿಲ್ವಪತ್ರೆಯನ್ನು ಶಿವಲಿಂಗದ ಮೇಲಿಟ್ಟು ಪೂಜಿಸಿದರೆ, ಯಾಗ ಮಾಡಿದ ಫಲ ದೊರೆಯುತ್ತದೆ ಎಂದೂ ಹಿರಿಯರು ಹೇಳುತ್ತಾರೆ. ಅಲ್ಲದೆ, ಶಿವರಾತ್ರಿಯ ಆಚರಣೆ​ಗೆ ವೈಜ್ಞಾನಿಕ ಕಾರಣಗಳೂ ಇವೆ.

 ಶಿವರಾತ್ರಿ ಆಚರಣೆಯ ಹಿನ್ನೆಲೆ-
ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಮಾಘ ಬಹುಳ ಚತುರ್ದಶಿಯ ರಾತ್ರಿಯೇ ಶಿವ ಪಾರ್ವತಿಯನ್ನು ವರಿಸಿದ್ದನಂತೆ. ಹೀಗಾಗಿ ಅಂದು ರಾತ್ರಿ ದೇವಾನು ದೇವತೆಗಳೆಲ್ಲರೂ ಜಾಗರಣೆ ಮಾಡಿ, ಗಿರಿಜಾ ಕಲ್ಯಾಣ ವೀಕ್ಷಿಸಿ, ಶಿವಪಾರ್ವತಿಯರಿಬ್ಬರನ್ನೂ ಪೂಜಿಸಿದರಂತೆ. ಹೀಗಾಗಿಯೇ ಜಾಗರಣೆ ಪದ್ಧತಿ ಆಚರಣೆಗೆ ಬಂದಿದೆ ಎನ್ನಲಾಗುತ್ತದೆ.

ಹೀಗೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಆಚರಣೆಗೂ ಹಿನ್ನೆಲೆಯಿದೆ, ಅನೇಕ ಕಥೆಗಳಿವೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯೆಂದು ಹೇಳಲಾಗುತ್ತದೆ. ಅಲ್ಲದೆ, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ.

ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಜತೆಗೆ, ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಇನ್ನು, ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.

ಶಿವರಾತ್ರಿಯ ಸಮಯ ಪೂಜೆಗೆ ಬಹು ಪ್ರಾಶಸ್ತ್ಯವಾದ ಸಮಯ. ಶಿವರಾತ್ರಿಯ ಆಚರಣೆಗೆ ವೈಜ್ಞಾನಿಕ ಕಾರಣಗಳೂ ಇವೆ.

 ಸೂರ್ಯ ಮತ್ತು ಚಂದ್ರನ ಚಲನೆಯಿಂದಾಗುವ ಎಲ್ಲಾ ಕಾಲ ವ್ಯತ್ಯಾಸಕ್ಕೆ ನಮ್ಮ ದೇಹ ಹೊಂದಿಕೊಳ್ಳ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈ ಹಬ್ಬದ ಆಚರಣೆ ಮುಖ್ಯವಾಗಿದೆ. ಈ ಸಮಯದಲ್ಲಿ ಚಳಿಗಾಲವು ಮುಗಿದು ಬೇಸಿಗೆ ಕಾಲವು ಪ್ರಾರಂಭಗೊಳ್ಳುವುದು. ಅಂದರೆ ಈ ದಿನದಂದು ಚಳಿಗಾಲ ಉತ್ತುಂಗದಲ್ಲಿದ್ದು ಕೃಷ್ಣ ಪಕ್ಷದ ಕೊನೆಯ ದಿನವೂ ಆಗಿರುತ್ತದೆ. ಈ ದಿನದಲ್ಲಿ ಸೂರ್ಯನ ಶಾಖ ಕಡಿಮೆಯಾಗಿರುತ್ತದೆ ಮತ್ತು ಚಂದ್ರನ ಪ್ರಕಾಶವೂ ಕ್ಷೀಣಿಸಿರುತ್ತದೆ. ನಮ್ಮ ಪೂರ್ವಜರು ಇದನ್ನೆಲ್ಲಾ ಅರಿತೇ ಹಬ್ಬ ಹರಿದಿನಗಳನ್ನು ಆಚರಿಸುತ್ತಿದ್ದರು.ಹೀಗೆ, ಮಹಾಶಿವರಾತ್ರಿಯ ಈ ಪವಿತ್ರ ದಿನದ ಮಧ್ಯರಾತ್ರಿಯಲ್ಲಿ ಶಿವ ಲಿಂಗ ರೂಪದಲ್ಲಿ ಆವಿರ್ಭವಿಸಿದನಂತೆ.

ಹಿಂದೂಗಳಿಗೆ ಪ್ರಮುಖವಾಗಿ ಶಿವಭಕ್ತರಿಗೆ ಮಹಾ ಶಿವರಾತ್ರಿ ಉಪವಾಸದ ದಿನವಾದರೂ ಹಬ್ಬದ ಸಡಗರ ಮನೆ ಮಾಡುತ್ತದೆ. ಅಂದು ಪ್ರಾತಃಕಾಲದಲ್ಲಿಯೇ ಎದ್ದು, ಸ್ನಾನ ಮಾಡಿ, ಮಡಿ ವಸ್ತ್ರ ತೊಟ್ಟು, ಉಪವಾಸವಿದ್ದು, ಶಿವದೇವಾಲಯಗಳಿಗೆ ತೆರಳಿ, ಶಿವಾರ್ಚನೆ ಮಾಡಿದರೆ ಮತ್ತು ರಾತ್ರಿಯಿಡೀ ಜಾಗರಣೆ ಮಾಡಿ ಶಿವನ ಪೂಜೆ ಮಾಡಿದರೆ ಎಲ್ಲ ಕಷ್ಟಗಳೂ ಪರಿಹಾರವಾಗಿ ಸುಖ, ಶಾಂತಿ, ಸಂಪತ್ತು ಲಭಿಸುತ್ತದೆ, ಪಾಪ ಪರಿಹಾರವಾಗುತ್ತದೆ ಎಂಬ ನಂಬಿಕೆಯೂ ಇದೆ.ಇನ್ನು, ಈ ದಿನದಂದು ನಾವು ಮಾಡುವ ಶಿವನ ಪೂಜೆ, ಉಪವಾಸಗಳು ನಮಗೆ ತುಂಬಾ ಉಪಯುಕ್ತ.



ಅಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ ಮಾಡುತ್ತೇವೆ. ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ. ಬಿಲ್ವವನ್ನು ಲಿಂಗದ ಮೇಲೆ ಹಾಕುವಾಗ ಅದರ ವಾಸನೆ ನಮ್ಮ ದೇಹದ ಒಳಗೆ ಹೋಗುವುದು. ಶಿವನ ಲಿಂಗವು ಕಲ್ಲಿನದಾಗಿದ್ದು ಅದರ ಮೇಲೆ ನೀರನ್ನು ಸುರಿಯುವುದರಿಂದ ಬಹಳಷ್ಟು ಶಕ್ತಿ ಹೊರಹೊಮ್ಮುತ್ತದೆ. ಅದೊಂದು ವಿಶಿಷ್ಟ ಕಲ್ಲಿನಿಂದ ಮಾಡಿದ ಲಿಂಗವಾಗಿರುತ್ತದೆ.
ಲೇಖನ-ಚಂದನ್ ಎಸ್ ಅವಂಟಿ, ಇಡ್ಲೂರ, ಯಾದಗಿರಿ ಜಿಲ್ಲೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ