Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ಶ್ರೇಷ್ಠವಾಗಲು ಅಂಬೇಡ್ಕರ ರವರ ಅಪಾರ ಜ್ಞಾನ, ಅಧ್ಯಯನ ಕಾರಣ-ಮಹೇಶ್

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಭಾರತದ ಸಂವಿಧಾನ ಶ್ರೇಷ್ಠ ವಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರ
  ಅಪಾರ  ಜ್ಞಾನ ಮತ್ತು  ಅಧ್ಯಯನ ಕಾರಣವಾಗಿದೆ‌ಎಂದು ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎನ್.ಮಹೇಶ್ ತಿಳಿಸಿದರು. 

  ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್  ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ  ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್  ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರು  ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು  ಸಂವಿಧಾನಾತ್ಮಕವಾಗಿ ದೊರಕಿಸಿ ಕೊಟ್ಟವರು.  ಮಹಿಳೆಯರ ಹಕ್ಕುಗಳಿಗಾಗಿ ತಮ್ಮ ಕಾನೂನು ಮಂತ್ರಿಯ ಪದವಿಗೆ ರಾಜೀನಾಮೆಯನ್ನು ನೀಡಿದವರು ಎಂದರು.

ಡಾ. ಬಿ.ಆರ್.ಅಂಬೇಡ್ಕರ್‌ಅವರು  ಮಹಿಳಾ ಪರವಾದ   ಹಿಂದೂ ಕೋಡ್‌ಬಿಲ್, ಮಹಿಳಾ ಕಾರ್ಮಿಕರ ಕಲ್ಯಾಣ, ಸಮಾನ ವೇತನ, ತಾಯ್ತನದ ಸೌಲಭ್ಯ, ಮಹಿಳಾ ಶಿಕ್ಷಣ ಮುಂತಾದ ಹಕ್ಕುಗಳನ್ನು ದೊರೆಯುವಂತೆ ಮಾಡಲು  ಶ್ರಮಿಸಿದರು. ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ  ಸಬಲಗೊಳ್ಳಬೇಕು ಎಂಬ ವಿಚಾರಗಳನ್ನು ಅಂಬೇಡ್ಕರ್ ಅವರು ಪ್ರಬಲವಾಗಿ ಪ್ರತಿಪಾದಿಸಿದರು.   ಮಹಿಳೆಯರ ಹಲವು ವಿಚಾರಗಳನ್ನು  ಅಂಬೇಡ್ಕರ್  ಅವರ  ಬರಹ ಮತ್ತು  ಭಾಷಣಗಳಲ್ಲಿ ನಾವು ಕಾಣಬಹುದಾಗಿದೆ ಎಂದರು.

 ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುತ್ತವೆ.   ಸಾಮಾಜಿಕ ನ್ಯಾಯವನ್ನು  ಜಾರಿ ಮಾಡುವ ಸಲುವಾಗಿ   ಸಂವಿಧಾನದಲ್ಲಿ   ಸಾಮಾಜಿಕ ನ್ಯಾಯದ ‌ಅಂಶಗಳನ್ನು‌     ಅಳವಡಿಸಿದರು. ಸಮಸಮಾಜ ನಿರ್ಮಾಣವೇ ಅಂಬೇಡ್ಕರ್ ಅವರ  ಮುಖ್ಯ ಗುರಿಯಾಗಿತ್ತು.  ವಿಶ್ವದಲ್ಲಿ ನಮ್ಮ ಭಾರತ ದೇಶಕ್ಕೆ ವಿಶೇಷ ಗೌರವ, ಘನತೆ, ಕೀರ್ತಿ ಲಭಿಸುತ್ತಿರುವುದೇ ನಮ್ಮ ಸಂವಿಧಾನ ಮತ್ತು  ಪ್ರಜಾಪ್ರಭುತ್ವ ವ್ಯವಸ್ಥೆಯಿಂದಾಗಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಮಾತನಾಡಿಡಾ.ಅಂಬೇಡ್ಕರ್ ಅವರ ಚಿಂತನೆಗಳು, ಬರಹ ಭಾಷಣಗಳು, ಜೀವನ ಚರಿತ್ರೆ  ಎಲ್ಲರಿಗೂ ಸುಲಭವಾಗಿ ತಲುಪುವ ಉದ್ದೇಶದಿಂದ  ಡಾ.ಬಿ.ಆರ್. ಅಂಬೇಡ್ಕರ್ ಓದು  ಕಾರ್ಯಕ್ರಮ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷ ಘಟಕ ಯೋಜನೆಯಡಿ ಡಾ.ಬಿ.ಆರ್. ಅಂಬೇಡ್ಕರ್ ಓದು  ಕಾರ್ಯಕ್ರಮಗಳನ್ನು   ಜಿಲ್ಲೆಯ  ಕಾಲೇಜುಗಳಲ್ಲಿ ನಡೆಸುತ್ತಿದೆ.  ವಿಶೇಷ ಉಪನ್ಯಾಸಗಳ ಜೊತೆಗೆ   ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಅಶು ಭಾಷಣ ಹಾಗೂ ಕವನ ವಾಚನ  ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಗುತ್ತಿದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಅಂಗವಾಗಿ ನಡೆದ  ರಸಪ್ರಶ್ನೆ, ಪ್ರಬಂಧ, ಭಾಷಣ ಮತ್ತು ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ   ಬಹುಮಾನ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್  ಸಹಾಯಕ ಆಯುಕ್ತ ವೆಂಕಟರಾಜು, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಾಮಣಿಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀನಿವಾಸ್, ರವಿ ಮುಂತಾದವರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ