Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತಮವಾಗಿ ಕನ್ನಡ ಮಾತನಾಡುತ್ತಿರುವ ಮಲಬಾರ್ ಸಮುದಾಯ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಮಲಬಾರ್ ಮುಸ್ಲಿಂ ಅಸೋಸಿಯೇಷನ್‌ಆಯೋಜಿಸಿದ್ದ ಅಸೋಸಿಯೇಷನ್‌ನ 90ನೇ ವರ್ಷದ ವಾರ್ಷಿಕೋತ್ಸವದಲ್ಲಿ  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗವಹಿಸಿ ಮಾತನಾಡಿದರು.

40 ವರ್ಷಗಳಿಂದ ಮಲಬಾರ್ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಮೊಹಮದ್ ಅವರು ಕೊಡುಗೈ ದಾನಿ, ಶಿಕ್ಷಣ ಕ್ಷೇತ್ರದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದಾರೆ ಎಂದು ಡಿಸಿಎಂ ತಿಳಿಸಿದರು.

ಬೆಂಗಳೂರಿನಲ್ಲಿರುವ ಮಲಬಾರ್ ಸಮುದಾಯದ ಜನ ನಮಗಿಂತ ಉತ್ತಮವಾಗಿ ಕನ್ನಡ ಮಾತನಾಡುತ್ತೀರಿ. ಅದಕ್ಕಾಗಿ ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳ ಸಜ್ಜನಿಕೆ, ಸಂಸ್ಕೃತಿ, ಪರಂಪರೆ ಹೊಂದಿದ್ದೀರಿ. ನಿಮ್ಮ ಆಚಾರ ವಿಚಾರವನ್ನು ಎಲ್ಲಿದ್ದರೂ ಬಹಳ ಗೌರವದಿಂದ ಕಾಪಾಡುವ ಶಕ್ತಿಯನ್ನು ಈ ಜನರಿಗೆ ಭಗವಂತ ನೀಡಿದ್ದಾನೆ ಎಂದು ಅವರು ತಿಳಿಸಿದರು.

ಮೊಹಮದ್ ಅವರು ಮೊದಲಿನಿಂದಲೂ ನಮ್ಮ ಪಕ್ಷಕ್ಕೆ ದೊಡ್ಡ ಆಸ್ತಿ. ಈ ಸಂಸ್ಥೆಯಲ್ಲಿ 40 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಮಾಡುತ್ತಿದ್ದಾರೆ. ಮೊಹಮದ್ ಅವರ ಸಾಧನೆ ಬದುಕು ಬಹಳ ವಿಶೇಷವಾದದ್ದು, ಎಲ್ಲಾ ಜನರ ಪ್ರೀತಿ ಗಳಿಸಿದ್ದಾರೆ. ಅವರ ಹೃದಯ ಶ್ರೀಮಂತಿಕೆಯನ್ನು ನಾನು ಕಂಡಿದ್ದೇನೆ. ಅವರು ಹ್ಯಾರೀಸ್ ಅವರಿಗಿಂತ ಮುಂಚಿತವಾಗಿ ರಾಜಕೀಯಕ್ಕೆ ಬರುವ ಅವಕಾಶವಿದ್ದರೂ ಉದ್ಯಮ ಬೆಳೆಸಿ, ಸಮಾಜಕ್ಕೆ ಕೊಡುಗೈ ದಾನಿಯಾಗಿ ಬೆಳೆದಿದ್ದಾರೆ. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.

ಶಿಕ್ಷಣ ಅವರ ಪ್ರೀತಿಪಾತ್ರ ಕ್ಷೇತ್ರ.
ಇದೇ ಸಂದರ್ಭದಲ್ಲಿ ಮಲಬಾರ್ ಮುಸ್ಲಿಂ ಅಸೋಸಿಯೇಷನ್‌ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಸೋಸಿಯೇಷನ್‌ನ 90ನೇ ವರ್ಷದ ವಾರ್ಷಿಕೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ, ಶುಭ ಹಾರೈಸಿದರು.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಎನ್.ಎ.ಹ್ಯಾರಿಸ್ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಮೆಹರೂಸ್ ಖಾನ್ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ