Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರಧಾನಿ ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಿಂದೆಂದೂ ಕಾಣದ ಗಂಭೀರ ಬಿಕ್ಕಟ್ಟು ಎದುರಾಗಿದ್ದು
, ಚುನಾವಣಾ ಆಯೋಗವು ಆಡಳಿತಾರೂಢ ಸರ್ಕಾರದ ಕೈಗೊಂಬೆಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯ ಚುನಾವಣಾ ಆಯುಕ್ತರ ಮೇಲೆ ಪ್ರಧಾನಿ ಮೋದಿ ಒತ್ತಡ ಹೇರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Advertisement

 ಸಭೆಯ ಪ್ರಮುಖ ಮುಖ್ಯಾಂಶಗಳು ಮತ್ತು ಖರ್ಗೆ ಅವರ 5 ಪ್ರಮುಖ ಬೇಡಿಕೆಗಳು: ದತ್ತಾಂಶ ಬಹಿರಂಗ:
ಮತದಾರರ ಪಟ್ಟಿಯಲ್ಲಿ ಮಾಡಲಾಗಿರುವ ಬದಲಾವಣೆಗಳಿಗೆ ಸಂಬಂಧಿಸಿದ ಎಲ್ಲ ದತ್ತಾಂಶವನ್ನು ತಕ್ಷಣವೇ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು.

ಮೇಲ್ಮನವಿ ಅವಕಾಶ: ಪಟ್ಟಿಯಿಂದ ಹೆಸರು ತೆಗೆದುಹಾಕಲಾಗಿರುವ ಸಂತ್ರಸ್ತ ಮತದಾರರಿಗೆ ಮೇಲ್ಮನವಿ ಸಲ್ಲಿಸಲು ಸೂಕ್ತ ಅವಕಾಶ ಕಲ್ಪಿಸಬೇಕು.
ಸರಳ ಸ್ವರೂಪದ ಪಟ್ಟಿ: ಎಲ್ಲ ರಾಜಕೀಯ ಪಕ್ಷಗಳಿಗೆ ನಿಗದಿತ ಸಮಯದೊಳಗೆ ಸರಳ ಸ್ವರೂಪದಲ್ಲಿ ಮತದಾರರ ಪಟ್ಟಿಗಳನ್ನು ಒದಗಿಸಬೇಕು.

ಸ್ವತಂತ್ರ ತನಿಖೆ: ಗಂಭೀರ ಅಸಂಗತತೆಗಳು ಕಂಡುಬರುವ ಕಡೆಗಳಲ್ಲಿ ಯಾವುದೇ ಮುಚ್ಚುಮರೆಯಿಲ್ಲದೆ ಸ್ವತಂತ್ರ ಹಾಗೂ ಕಾಲಮಿತಿಯ ತನಿಖೆ ನಡೆಸಬೇಕು.
ಪಾರದರ್ಶಕತೆ: ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು ಹಾಗೂ ಮಾಹಿತಿಯನ್ನು ಮುಚ್ಚಿಡಲಾಗುತ್ತಿದೆ ಎಂಬ ಅನುಮಾನಗಳನ್ನು ದೂರ ಮಾಡಬೇಕು.

ಆಯೋಗದೊಳಗಿನ ಭಿನ್ನಾಭಿಪ್ರಾಯ ಹಾಗೂ ವಿರೋಧ ಪಕ್ಷಗಳ ಜಂಟಿ ಹೋರಾಟ:
ಚುನಾವಣಾ ಆಯುಕ್ತರಾದ ಸುಖಬೀರ್‌ಸಿಂಗ್‌ಸಂಧು ಮತ್ತು ವಿವೇಕ್‌ಜೋಶಿ ಅವರು ಎಸ್‌ಐಆರ್‌ಪ್ರಕ್ರಿಯೆಗೆ ಸಂಬಂಧಿಸಿದ ಕೆಲವು ಆದೇಶಗಳ ಕುರಿತು
10 ತಿಂಗಳಲ್ಲಿ ಕನಿಷ್ಠ 14 ಬಾರಿ ಆಕ್ಷೇಪ ವ್ಯಕ್ತಪಡಿಸಿರುವುದು ಹಾಗೂ ಸಿಇಸಿ ಕ್ರಮಗಳನ್ನು ‘ಸ್ವೇಚ್ಛಾಚಾರ ಮತ್ತು ಅಸಮಂಜಸ’ ಎಂದು ಕರೆದಿರುವುದು ಆಯೋಗದೊಳಗಿನ ಬಿರುಕಿಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ವಾದಿಸಿದೆ. ಆದರೂ, ಆಯೋಗವು ಈ ಆರೋಪಗಳನ್ನು ತಳ್ಳಿಹಾಕಿದ್ದು, ನಿರ್ಧಾರಗಳನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಈ ಬೆಳವಣಿಗೆಯ ನಂತರ ಎಚ್ಚೆತ್ತಿರುವ ಕಾಂಗ್ರೆಸ್, ಈ ವಿಷಯವನ್ನು ಕೇವಲ ಮಾತಿಗೆ ಸೀಮಿತಗೊಳಿಸದೆ ಬೀದಿಗಿಳಿದು ಹೋರಾಟ ನಡೆಸುವುದರ ಜೊತೆಗೆ ಸಂಸತ್ತಿನಲ್ಲೂ ಧ್ವನಿ ಎತ್ತುವ ನಿರ್ಧಾರ ಮಾಡಿದೆ. ಅಲ್ಲದೆ, ಎಸ್‌ಐಆರ್‌ವಿಚಾರದಲ್ಲಿ ಇತರ ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಲು ಮುಂದಾಗಿದ್ದು, ಜಂಟಿ ಕಾರ್ಯತಂತ್ರ ರೂಪಿಸಲು 'ಇಂಡಿಯಾ' ಮೈತ್ರಿಕೂಟದ ನಾಯಕರು ಬುಧವಾರ ಮಹತ್ವದ ಸಭೆ ಸೇರಲಿದ್ದಾರೆ. ಜ್ಞಾನೇಶ್‌ಕುಮಾರ್‌ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಯು ಈ ಸಭೆಯ ಪ್ರಮುಖ ಅಜೆಂಡಾ ಆಗಿರಲಿದೆ.

ಈ CWC ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಮುಖ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ, ಜೈರಾಮ್ ರಮೇಶ್ ಹಾಗೂ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವರು ಭಾಗವಹಿಸಿ ಮೈತ್ರಿಕೂಟದ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದರು.
ಪ್ರಜಾಪ್ರಭುತ್ವದ ಆತ್ಮ ಮತ್ತು ಸಂವಿಧಾನದ ಮೂಲ ಆಶಯವನ್ನು ರಕ್ಷಿಸಲು ಕಾಂಗ್ರೆಸ್ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವುದಿಲ್ಲ ಎಂದು ನಾಯಕರು ಪುನರುಚ್ಚರಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅ.03ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆ-ಕುಶಾಲ್ ಚೌಕ್ಸೆಧರ್ಮಸ್ಥಳ ಸಂಸ್ಥೆಯ ಕೆರೆ ಹೂಳೆತ್ತುವ ಕಾರ್ಯಕ್ರಮ ಶ್ಲಾಘನೀಯ:ಮಹೇಶ್ರೈತ ಹೋರಾಟಗಾರರ ಮೇಲಿನ ಕೇಸ್‌ಗಳನ್ನು ವಜಾಗೊಳಿಸಲು ರೈತ ಸಂಘ ಆಗ್ರಹಎನ್‌ಡಿಎ ಅಭ್ಯರ್ಥಿ ರಂಗನಾಥ್ ರವರ ಗೆಲುವು ನಮ್ಮೆಲ್ಲರ ಜವಾಬ್ದಾರಿ-- ಧೀರಜ್ ಮುನಿರಾಜ್ವಾರದಲ್ಲೇ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ವಿತರಣೆಗೆ ವಾರ್ತಾ ಇಲಾಖೆ ಸಿದ್ಧತೆಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ನಿಜ: ಡಿಸಿಎಂ ಜಿ.ಪರಮೇಶ್ವರ್ ಒಪ್ಪಿಗೆ'ಭಾರತ್ ಜೋಡೋ-2' ಅಭಿಯಾನಕ್ಕೆ ಚಾಲನೆ: 84 ಸೋತ ಕ್ಷೇತ್ರಗಳ ಮೇಲೆ ಕಾಂಗ್ರೆಸ್ ಕಣ್ಣು!ಪ್ರಧಾನಿ ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹನೈಸ್‌ಯೋಜನೆ ಕುಮಾರಸ್ವಾಮಿ ಅಥವಾ ದೇವೇಗೌಡರ ಕೂಸಲ್ಲ: ಬೃಹತ್ ಹಗರಣವೆಂದು ಡಿಕೆಶಿ ವಿರುದ್ಧ ಹೆಚ್‌ಡಿಕೆ ಬಾಂಬ್!ಪ್ರತಿಭಟನೆ ಬಿಟ್ಟು ದೆಹಲಿಗೆ ಬನ್ನಿ: ಕಬ್ಬು ಬೆಳೆಗಾರರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಕ್ತ ಆಹ್ವಾನ!