Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನ್​ ಲೈನ್​ನಲ್ಲಿ ಜೂಜಾಡಿ 60 ಲಕ್ಷ ಕಳೆದು, ಬ್ಯಾಂಕ್ ಲಾಕರ್ ಗೆ ಕನ್ನ ಹಾಕಿದ ಮ್ಯಾನೇಜರ್ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಆನ್​ ಲೈನ್​ನಲ್ಲಿ ಜೂಜಾಟ ಪ್ರತಿ ಮನೆ, ಕುಟುಂಬವನ್ನೂ ಇಂದು ಕಾಡುತ್ತಿದೆ. ಆನ್ ಲೈನ್ ಜೂಜಾಡಿ 60 ಲಕ್ಷ ಸಾಲ ಮಾಡಿ ಸಾಲ ತೀರಿಸಲು ಇಂಡಿಯನ್ ಬ್ಯಾಂಕ್ ಲಾಕರ್ ನಲ್ಲಿದ್ದ 4 ಕೋಟಿ ಮೌಲ್ಯದ 2.753 ಕೆ.ಜಿ ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಡಿ ಅಸಿಸ್ಟೆಂಟ್ ಬ್ರ್ಯಾಂಚ್ ಮ್ಯಾನೇಜರ್​​ನನ್ನ ಗಿರಿನಗರ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.


ಕಿರಣ್ ಕುಮಾರ್ (33) ಬಂಧಿತ. ಈತನಿಂದ ಒಂದು ಕಾಲು ಕೆ.ಜಿ. ಬಂಗಾರ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿದ್ಯಾರಣ್ಯಪುರದ ಆರೋಪಿ ಮೂಲತಃ ಆಂಧ್ರಪ್ರದೇಶದವನಾಗಿದ್ದಾನೆ. 2016ರಿಂದ ರಾಜ್ಯದ ಬ್ಯಾಂಕ್​ನ ವಿವಿಧ ಶಾಖೆಗಳಲ್ಲಿ ಕೆಲಸ ಮಾಡಿದ್ದ. ಕಳೆದ ಜೂನ್​ನಿಂದ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ತೋಯಜಾಕ್ಷಿ ಎಂಬುವವರು ಆರು ತಿಂಗಳ ಹಿಂದೆ ಬ್ಯಾಂಕ್​ನಲ್ಲಿ ಚಿನ್ನ ಅಡವಿಟ್ಟು ಸಾಲ ಪಡೆದಿದ್ದರು. ಸಾಲ ತೀರಿಸಿ ಒಡವೆ ಬಿಡಿಸಿಕೊಳ್ಳಲು ಇತ್ತೀಚೆಗೆ ಬ್ಯಾಂಕ್​ಗೆ ಬಂದಿದ್ದರು. ಪೂರ್ಣ ಸಾಲ ಪಾವತಿಸಿ ಪ್ಯಾಕೆಟ್​ನಲ್ಲಿದ್ದ ಚಿನ್ನ ಪರಿಶೀಲಿಸಿದಾಗ ಕೆಲ ಆಭರಣ ಕಾಣೆಯಾಗಿತ್ತು. ಈ ಬಗ್ಗೆ ಬ್ಯಾಂಕ್ ವ್ಯವಸ್ಥಾಪಕರ ಗಮನಕ್ಕೆ ತಂದಿದ್ದರು.

ಆತಂಕಗೊಂಡ ಅಧಿಕಾರಿಗಳು ಪರಿಶೀಲಿಸಿದಾಗ ಕಳೆದ ಒಂದು ವರ್ಷದಿಂದ ಗೋಲ್ಡ್ ಲೋನ್ ಮಂಜೂರು ಮಾಡಲಾಗಿದ್ದ 207 ಪ್ಯಾಕೇಟ್​ಗಳಲ್ಲಿ ಸುಮಾರು 21 ಪ್ಯಾಕೇಟ್​ಗಳಲ್ಲಿ ಪ್ರಾಯಶಃ ಚಿನ್ನ ಕಾಣೆಯಾಗಿದ್ದರೆ, 3 ಪ್ಯಾಕೇಟ್ ಗಳಲ್ಲಿ ಚಿನ್ನ ನಾಪತ್ತೆಯಾಗಿತ್ತು. ಒಟ್ಟು 2.783 ಕೆ.ಜಿ ಚಿನ್ನ ಕಳವಾಗಿರುವುದು ಗೊತ್ತಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ತನಿಖೆ ನಡೆಸಿದಾಗ ಆರೋಪಿ ಕಿರಣ್ ಬ್ಯಾಂಕ್​ನ ವಲಯ ಕಚೇರಿಗೆ ಹಾಜರಾಗಿ ಕಳ್ಳತನವೆಸಗಿರುವುದಾಗಿ ಒಪ್ಪಿಕೊಂಡಿದ್ದ. ಚಿನ್ನವನ್ನ ಕತ್ರಿಗುಪ್ಪೆಯ ಮಣಪುರಂ ಹಾಗೂ ಎಂ. ಎಸ್. ಪಾಳ್ಯದ ಮುತ್ತೂಟ್ ಪೈನಾನ್ಸ್​ನಲ್ಲಿ ಅಡವಿಟ್ಟಿರುವುದಾಗಿ ಬಾಯ್ಬಿಟ್ಟಿದ್ದ. ಈ ಕುರಿತು ಬಂದ ದೂರು ಆಧರಿಸಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಆನ್ ಲೈನ್ ಸಾಲ ತೀರಿಸಲು ಕಳವು :
ಆನ್​ಲೈನ್ ಜೂಜು ಹಾಗೂ ಬೆಟ್ಟಿಂಗ್ ವ್ಯಾಮೋಹಕ್ಕೆ ಅಂಟಿಕೊಂಡಿದ್ದ ಕಿರಣ್
, ಹಲವು ವರ್ಷಗಳಿಂದ ಆನ್​ಲೈನ್​ನಲ್ಲಿ ಜೂಜಾಡುತ್ತಿದ್ದ. 60 ಲಕ್ಷದವರೆಗೆ ಬೆಟ್ಟಿಂಗ್​ನಲ್ಲಿ ಹಣ ಕಳೆದುಕೊಂಡಿದ್ದ. ಮಾಡಿದ ಸಾಲದಿಂದ ಹೊರಬರಲು ಆರು ತಿಂಗಳಲ್ಲಿ ಹಂತ - ಹಂತವಾಗಿ 4 ಕೋಟಿ ಮೌಲ್ಯದ ಚಿನ್ನ ಕದ್ದು ಅಡವಿಟ್ಟು ಬಂದ ಹಣದಿಂದ ಕೊಂಚ ಸಾಲ ತೀರಿಸಿದ್ದ. ಸದ್ಯ ಒಂದು ಕಾಲು ಕೆ. ಜಿ. ವಶಕ್ಕೆ ಪಡೆದುಕೊಂಡು ಆರೋಪಿಯನ್ನ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ