Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರದ ಹೆಚ್ಚು ಕಮಿಷನ್-ಮಂಜುನಾಥ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮೂರು ವರ್ಷಗಳಿಂದಲೂ ಬಾಕಿಯಿರುವ ೩೬ ಸಾವಿರ ಕೋಟಿ ರೂ.ಗಳನ್ನು ತಕ್ಷಣವೆ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಮಾ.೬ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆ.ಮಂಜುನಾಥ್ ತಿಳಿಸಿದರು.


ಜಿಲ್ಲಾ ಗುತ್ತಿಗೆದಾರರ ಸಂಘದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕೋಪಯೋಗಿ ಇಲಾಖೆಯಲ್ಲಿ ೮೩೦೦ ಕೋಟಿ ರೂ. ನೀರಾವರಿಯಲ್ಲಿ ಹದಿಮೂರು ಸಾವಿರ ಕೋಟಿ ರೂ. ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ೩೨೦೦ ಕೋಟಿ ರೂ. ವಸತಿ ವಕ್ಫ್‌ನಲ್ಲಿ ಮೂರು ಸಾವಿರ ಕೋಟಿ ರೂ. ಸಣ್ಣ ನೀರಾವರಿ ಇಲಾಖೆಯಲ್ಲಿ ೩೩೦೦ ಕೋಟಿ ರೂ. ಕಾರ್ಮಿಕ ಇಲಾಖೆಯಲ್ಲಿ ಎರಡು ಸಾವಿರ ಕೋಟಿ ರೂ. ಬಿಬಿಎಂಪಿ.ಯಲ್ಲಿ ೧೬೦೦ ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿರುವುದರಿಂದ ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಹಲವಾರು ಬಾರಿ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಇಲಾಖೆ ಸಚಿವರುಗಳ ಜೊತೆ ಮಾತುಕತೆ ನಡೆಸಿದ್ದರೂ ಪ್ರಯೋಜನವಾಗದ ಕಾರಣ ಪ್ರತಿಭಟನೆಗೆ ಮುಂದಾಗಿದ್ದು, ಅಂದಾಜು ಮೂವತ್ತು ಸಾವಿರ ಗುತ್ತಿಗೆದಾರರು ಪಾಲ್ಗೊಳ್ಳುವರು ಎಂದು ಹೇಳಿದರು.

ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ನಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರಿಂದ ಕಮಿಷನ್ ಪಡೆಯುವುದಿಲ್ಲವೆಂದು ಹೇಳಿದ್ದರು. ಬಾಕಿ ಬಿಲ್ ಪಾವತಿಯಾಗದ ಕಾರಣ ಕಷ್ಟದಲ್ಲಿರುವ ಗುತ್ತಿಗೆದಾರು ಮನೆ, ಚಿನ್ನದ ಒಡವೆಗಳನ್ನು ಒತ್ತೆಯಿಟ್ಟಿದ್ದಾರೆ. ರಾಜ್ಯದ ೧೯ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಗುತ್ತಿಗೆದಾರರು ಪ್ರತಿಭಟನೆಗೆ ಸಾಥ್ ಕೊಡುತ್ತಾರೆ. ಮಧ್ಯವರ್ತಿಗಳು ಖಾಸಗಿ ಕಚೇರಿಗಳನ್ನು ತೆರೆದು ಅಲ್ಲಿ ಕಾಮಗಾರಿಗೆ ಸಂಬಂಧಿಸಿದಂತೆ ವ್ಯವಹಾರಗಳನ್ನು ಕುದುರಿಸಿಕೊಂಡು ಕಾಮಗಾರಿಗಳನ್ನು ಯಾರಿಗೆ ನೀಡಬೇಕೆಂಬುದನ್ನು ನಿರ್ಧರಿಸುತ್ತಾರೆ. ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ಮುಷ್ಕರದ ಹಾದಿ ಹಿಡಿಯದೆ ನಮಗೆ ಬೇರೆ ದಾರಿಯಿಲ್ಲ ಎಂದರು.

ಚಿತ್ರದುರ್ಗ, ಬಳ್ಳಾರಿ, ಹೊಸಪೇಟೆಯಲ್ಲಿ ಮೈನಿಂಗ್ ದಂಧೆ ಎಗ್ಗಿಲ್ಲದ ನಡೆಯುತ್ತಿದೆ. ಕೆಲವು ಶಾಸಕರು, ಸಚಿವರು ಇದಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಕಾಮಗಾರಿಯ ಬಿಲ್‌ಗಳು ಬಾಕಿಯಿರುವುದಕ್ಕೆ ಸಂಬಂಧಿಸಿದಂತೆ ನೂರು ಪುಟಗಳ ದಾಖಲೆಯನ್ನು ಮುಖ್ಯಮಂತ್ರಿಗೆ ಕೊಟ್ಟಿದ್ದೇವೆ. ಮಾನವೀಯತೆಯಿಂದಲಾದರೂ ಸಿದ್ದರಾಮಯ್ಯನವರು ನಮ್ಮ ಜೊತೆ ಮಾತುಕತೆ ನಡೆಸಬಹುದಿತ್ತು.

ಪ್ರಾಮಾಣಿಕವಾಗಿ ಸರ್ಕಾರಕ್ಕೆ ರಾಯಲ್ಟಿ ಕಟ್ಟುತ್ತಿದ್ದೇವೆ. ಆದರೂ ವಾಹನಗಳನ್ನು ಹಿಡಿದು ದಂಡ ಹಾಕುತ್ತಿದ್ದಾರೆ. ಜಿ.ಎಸ್.ಟಿ.ಸಮಸ್ಯೆಯಿದೆ. ಗುತ್ತಿಗೆದಾರರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಒಂದುವರೆ ಲಕ್ಷ ಗುತ್ತಿಗೆದಾರರಿದ್ದು, ಏಪ್ರಿಲ್‌ನಿಂದ ಕುಟುಂಬ ಸಮೇತ ಅನಿರ್ಧಿಷ್ಠಾವಧಿ ಮುಷ್ಕರ ನಡೆಸುವುದಾಗಿ ಕೆ.ಮಂಜುನಾಥ್ ಸರ್ಕಾರಕ್ಕೆ ಗಡುವು ನೀಡಿದರು.

ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲೇಶಪ್ಪ, ರಾಜ್ಯ ನಿರ್ದೇಶಕ ಹೇಮಂತ್ ಕುಮಾರ್, ತಕ್ಕಡಿ ಸುರೇಶ್, ಉಪಾಧ್ಯಕ್ಷರುಗಳಾದ ಎಲ್.ಮಹೇಶ್, ವೈ.ತಿಪ್ಪೇಸ್ವಾಮಿ, ಕೆ.ಕರಿಯಪ್ಪ, ಜಿ.ದೇವೇಂದ್ರಪ್ಪ, ಬಲರಾಮರೆಡ್ಡಿ, ನಿರಂಜನಮೂರ್ತಿ, ರಂಗಸ್ವಾಮಿ, ಶ್ರೀನಿವಾಸ್, ದೇವರಾಜ್, ತಿಮ್ಮರಾಜ್ ಸೇರಿದಂತೆ ಅನೇಕ ಗುತ್ತಿಗೆದಾರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ