Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಕುತಿಮ್ಮನ ಕಗ್ಗ ವಿಶ್ವದ ಮಾನವರೆಲ್ಲರಿಗೂ ಚಿಂತನೆಗೆ ಒಳಪಡಿಸಲಿದೆ

Advertisement
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
 ಡಿವಿಜಿಯವರ ಮಂಕುತಿಮ್ಮನ ಕಗ್ಗ ಕನ್ನಡ ಸಾಹಿತ್ಯ ಲೋಕವಲ್ಲದೆ ವಿಶ್ವದ ಮಾನವರೆಲ್ಲರಿಗೂ ಪ್ರತೀ ಕ್ಷಣ ಚಿಂತನೆಗೆ ಒಳಪಡಿಸಿರುವ ಜೀವನದ ಮೌಲ್ಯಗಳಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮತ್ತು ಉಪನ್ಯಾಸಕ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಿವಿಜಿ ಹಾಗೂ ಪುತಿನ ಕೊಡುಗೆಗಳ ಕುರಿತು ಮಾತನಾಡುತ್ತಾ ಸಾಹಿತಿಗಳಾಗಿ, ಪತ್ರಕರ್ತರಾಗಿ ,ತತ್ವಜ್ಞಾನಿಯಾಗಿ, ವಿದ್ವಾಂಸರಾಗಿ, ಕವಿಯಾಗಿ ಪ್ರತಿ ಕ್ಷೇತ್ರದಲ್ಲೂ ಅತ್ಯುತ್ತಮ ಸೇವೆಯನ್ನು  ಸಲ್ಲಿಸಿ ಕನ್ನಡಿಗರ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಇವರ ಕನ್ನಡದ ಭಗವದ್ಗೀತೆ ಎಂದೇ ಪರಿಗಣಿಸಲ್ಪಟ್ಟಿರುವ ಮಂಕುತಿಮ್ಮನ ಕಗ್ಗ ಜೀವನದ ವಿಶಿಷ್ಟ ಆಯಾಮಗಳನ್ನು ಪರಿಪೂರ್ಣತೆಯ ಸಾಹಿತ್ಯವನ್ನು ರಚಿಸಿ ಮಾದರಿಯಾಗಿದ್ದಾರೆ.

ಮಂಕುತಿಮ್ಮನ ಕಗ್ಗ ಇಂದಿಗೂ ನೂರಾರು ವಿದ್ವಾಂಸರು ಸದಾ ಕಾಲ ಚರ್ಚಿಸುವ ಮೂಲಕ ಸಾಹಿತ್ಯ, ಸಂಗೀತ, ಗಮಕ, ಭಾಷಣಕ್ಕೆ ಅಪಾರವಾದ ಸಾಹಿತ್ಯವನ್ನೇ ನೀಡಿದೆ. ಡಿವಿಜಿಯವರ ಸಾಹಿತ್ಯದಲ್ಲಿ ಇತಿಹಾಸ ,ರಾಜನೀತಿ, ಪ್ರಜಾಪ್ರಭುತ್ವ, ಸಾರ್ವಜನಿಕ ಜೀವನ ,ಸಮಾಜದ ಚಿಂತನೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮಾನವನ ಅಂತರಂಗ ಮತ್ತು ಬಹಿರಂಗ ಜೀವನ ಸೌಂದರ್ಯವನ್ನು ಬೆಳೆಸಿಕೊಳ್ಳುವ ಬಗ್ಗೆ ಮಹತ್ವದ ವಿಚಾರಧಾರೆಗಳನ್ನು ನೀಡಿದ್ದಾರೆ. ಡಿವಿಜಿಯವರ ಮಂಕುತಿಮ್ಮನ ಕಗ್ಗ ಪ್ರತಿಯೊಬ್ಬ ಕನ್ನಡಿಗನ ಮನೆಯಲ್ಲಿ ಇರಬೇಕು. ಭವಿಷ್ಯದ ವಿದ್ಯಾರ್ಥಿಗಳಿಗೆ ಮಂಕುತಿಮ್ಮನ ಕಗ್ಗ ನೀಡಿ ಅವರ ವ್ಯಕ್ತಿತ್ವವನ್ನು ರೂಪಿಸಲು ಕನ್ನಡಿಗರು ಆಲೋಚಿಸಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕ ನಿವೃತ್ತ ಮುಖ್ಯ ಶಿಕ್ಷಕಿ ಸರಸ್ವತಿ ಅವರು ಪುತಿ ನರಸಿಂಹಾಚಾರ್ ಬಗ್ಗೆ ಮಾತನಾಡಿ ಸಾಹಿತ್ಯ ನಿಂತ ನೀರಾಗದೆ ಮುಂದಿನ ಪೀಳಿಗೆಗೂ ತಲುಪಬೇಕು ಎಂಬ ದಿವ್ಯ ವಾಣಿಯನ್ನು ನುಡಿದ ಪುತಿನ ನವೋದಯ ಸಾಹಿತಿಗಳಾಗಿ ಪ್ರಕೃತಿ ಮತ್ತು ದೈವತ್ವದ ಹುಡುಕಾಟವನ್ನು ತಮ್ಮ ಸಾಹಿತ್ಯದಲ್ಲಿ ನೀಡಿದ್ದಾರೆ. ಇವರ ಜನ್ಮಸ್ಥಳ ಮೇಲುಕೋಟೆ ಇಂದಿಗೂ ಅವರ ಹುಟ್ಟಿದ ಮನೆ ಸ್ಮಾರಕವಾಗಿ ಇರುವುದು ನೋಡಬಹುದು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ರವಿಚಂದ್ರಪ್ರಸಾದ್ ಮತ್ತು ಶಿವಲಿಂಗ ಮೂರ್ತಿರವರು ಕನ್ನಡ ಗೀತೆ ಹಾಗೂ ಮಂಕುತಿಮ್ಮನ ಕಗ್ಗ ಗೀತೆಗಳನ್ನು ಹಾಡಿದರು.

ಕಾರ್ಯಕ್ರಮವನ್ನು ಮುಖಂಡರಾದ ಪದ್ಮ ಪುರುಷೋತ್ತಮ್ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬಿಕೆ ಆರಾಧ್ಯ, ಸುರೇಶ್ ಗೌಡ, ನಿವೃತ್ತ ಶಿಕ್ಷಕರಾದ ಗೀತಾ, ಮಂಜುನಾಥ್ ,ಜಗದೀಶ್, ಅಜಯ್ ,ಚಂದ್ರು, ಮುಂತಾದವರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ