Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಗ್ರರ ದಾಳಿ ಖಂಡಿಸಿ ಮುಸ್ಲಿಮರ ಬೃಹತ್ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ 26 ಮಂದಿ ಅಮಾಯಕರನ್ನು ಬಲಿತೆಗೆದುಕೊಂಡಿರುವುದನ್ನು ವಿರೋಧಿಸಿ ಮುಸ್ಲಿಂರು ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿ
, ಪ್ರಧಾನಿ, ಗೃಹ ಸಚಿವ, ರಕ್ಷಣಾ ಸಚಿವ, ರಾಜ್ಯದ ಮುಖ್ಯಮಂತ್ರಿ ರಾಜ್ಯಪಾಲರು ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ ನಂತರ ಗಾಂಧಿ ವೃತ್ತದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಭಯೋತ್ಪಾದಕರನ್ನು ಪತ್ತೆ ಮಾಡಿ ಹೊಡೆದುರುಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ನ್ಯಾಯವಾದಿ ಸಾಧಿಕ್‌ವುಲ್ಲಾ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಭಾರತದ ಸ್ವರ್ಗ ಎಂದೆ ಪ್ರಸಿದ್ದಿ ಪಡೆದಿರುವ ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿ ೨೬ ಮಂದಿಯನ್ನು ಭೀಕರವಾಗಿ ಕೊಂದಿರುವುದು ಅತ್ಯಂತ ಹೇಯ ಕೃತ್ಯ. ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್‌ಷಾ, ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್ ಇವರುಗಳು ಭಯೋತ್ಪಾದಕರನ್ನು ಸದೆಬಡಿದು ಇನ್ನು ಮುಂದೆ ಇಂತಹ ಅಮಾನವೀಯ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕೆಂದು ವಿನಂತಿಸಿದರು.

ಜಿಲ್ಲಾ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಇಕ್ಬಾಲ್ ಹುಸೇನ್ ಮಾತನಾಡಿ ಪಾಕಿಸ್ತಾನಿ ಬೆಂಬಲಿತ ಉಗ್ರಗಾಮಿಗಳು ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ ನಡೆಸಿ ೨೬ ಜನ ಅಮಾಯಕರನ್ನು ಬಲಿ ಪಡೆದಿರುವುದರಿಂದ ಇಡಿ ದೇಶವೇ ಶೋಕದಲ್ಲಿದೆ. ಪಹಲ್ಗಾಮ್‌ನಲ್ಲಿ ದುಷ್ಕೃತ್ಯ ಮೆರೆದಿರುವ ಉಗ್ರರು ಎಲ್ಲಿಯೇ ಅಡಗಿರಲಿ ಅಲ್ಲಿಗೆ ನುಗ್ಗಿ ಬಗ್ಗು ಬಡಿಯಬೇಕು. ದೇಶದ ಸಹಬಾಳ್ವೆ ಮತ್ತು ಐಕ್ಯತೆಯನ್ನು ಕದಡುವ ಭಯೋತ್ಪಾದಕರುಗಳಿಗೆ ನಮ್ಮ ದೇಶದ ಪ್ರಧಾನಿ ಮೋದಿರವರು ತಕ್ಕ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಾಮಿಯಾ ಮಸೀದಿಯ ಮುತುವಲ್ಲಿ ಸಾಧಿಕ್ ಭಾಷಾ, ಕಾರ್ಯದರ್ಶಿ ಮಹಿಬೂಲ್ಲಾ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ನಗರಸಭಾ ಸದಸ್ಯ ಸರ್ದಾರ್ ಅಹ್ಮದ್ ಪಾಷಾ, ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಸೈಯದ್ ಖುದ್ದುಸ್, ಅಶ್ವಾಕ್, ಅಪಾನ್, ಮೋಹಿದ್ದೀನ್ ಚೋಟು, ದಾದಾಪೀರ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ,

ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಹಾಜಿ ಆರ್.ದಾದಾಪೀರ್, ಪಟೇಲ್ ದಾದಾಪೀರ್, ಮುಖ್ತಿಯಾರ್, ಸೈಯದ್ ಮೋಹಿದ್ದೀನ್, ಸೈಯದ್ ಖುದ್ದೂಸ್, ಸುಬಾನ್, ನೂರುಲ್ಲಾ, ಹುಸೇನ್‌ಪೀರ್, ಸೈಯದ್ ಅಫಾಖ್ ಅಹಮದ್, ಸೈಯದ್ ಇಸ್ಮಾಯಿಲ್ ಸೇರಿದಂತೆ ವಿವಿಧ ಮಸೀದಿಗಳ ಮುತುವಲ್ಲಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ