Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ಬೃಹತ್ ಭ್ರಷ್ಟಾಚಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ಮಾರ್ಟ್ ಮೀಟರ್ ಅಳವಡಿಸಲು ಕರೆದಿದ್ದ ಟೆಂಡರ್​ನಲ್ಲಿ 15,568 ಕೋಟಿ ರೂ. ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.


ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಇಆರ್​ಸಿ ನಿಯಮಗಳಿಗೆ ಬದ್ಧವಾಗಿರಬೇಕಿದ್ದ ಬೆಸ್ಕಾಂ, ಎಸ್ಕಾಂಗಳು ಮನಬಂದಂತೆ ನಡೆದುಕೊಂಡಿದ್ದಾರೆ. ಕೆಇಆರ್​ಸಿ ನಿಯಮಗಳಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದು ಎಲ್ಲೂ ಹೇಳಿಲ್ಲ. ತಾತ್ಕಾಲಿಕ ಸಂಪರ್ಕಕ್ಕೆ ಮಾತ್ರ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಬಹುದೇ ಹೊರತು ಖಾಯಂ ಗ್ರಾಹಕರು, ಹೊಸ ಗ್ರಾಹಕರಿಗೆ ಸ್ಮಾರ್ಟ್ ಮೀಟರ್​ ಕಡ್ಡಾಯ ಮಾಡುವಂತಿಲ್ಲ ಎಂದು ಅವರು ಮಾಹಿತಿ ನೀಡಿದರು.

ಸೆಂಟ್ರಲ್ ಇಲೆಕ್ಟ್ರಿಸಿಟಿ ಅಥಾರಿಟಿ ನಿಯಮಾವಳಿ ಪ್ರಕಾರವೂ ಸ್ಮಾರ್ಟ್ ಮೀಟರ್ ಕಡ್ಡಾಯವಲ್ಲ. ಕೆಟಿಪಿಪಿ ಕಾಯ್ದೆಯಡಿ ಬಿಡ್ ಕೆಪ್ಯಾಸಿಟಿಯನ್ನು ಟೆಂಡರ್​ನಲ್ಲಿ ತಿಳಿಸಿಲ್ಲ. ಅದು 6,800 ಕೋಟಿ ಇರಬೇಕಿತ್ತು. ಬಿಡ್ಡಿಂಗ್ ಸಾಮರ್ಥ್ಯ ಇಲ್ಲದಿರುವುದೇ ಮೊದಲ ಹಗರಣ ಎಂದು ಅವರು ಆಕ್ಷೇಪಿಸಿದರು.

ಟೆಂಡರ್​ನಲ್ಲಿ ಬರೀ 107 ಕೋಟಿ ಎಂದು ನಮೂದಿಸಿದ್ದಾರೆ. ಕೆಟಿಪಿಪಿ ಕಾಯ್ದೆ ಪ್ರಕಾರ ವ್ಯವಹಾರವು 1,920 ಕೋಟಿ ಇರಬೇಕಾಗಿತ್ತು. ಬ್ಲ್ಯಾಕ್‍ಲಿಸ್ಟ್ ಆದ ಕಂಪನಿಗೆ ಟೆಂಡರ್ ಕೊಡುವುದಕ್ಕೆ ಅವಕಾಶ ಇಲ್ಲ ಎಂದು ತಿಳಿಸಿದ್ದರೂ ಉತ್ತರ ಪ್ರದೇಶದಲ್ಲಿ ಬ್ಲ್ಯಾಕ್ ಲಿಸ್ಟ್ ಆದ ಬಿಸಿಐಟಿಎಸ್ ಅನ್ನು ಪರಿಗಣಿಸಿದ್ದಾರೆ ಎಂದು ಅವರು ಆರೋಪಿಸಿದರು.
ಈ ಯೋಜನೆಯ ಅಂದಾಜು ವೆಚ್ಚ 571 ಕೋಟಿ ರೂ. ಎಂದು ತಿಳಿಸಿ ನಂತರ ತಿದ್ದುಪಡಿ ಮಾಡಿದ್ದಾರೆ. ಟೆಂಡರ್​ನಲ್ಲಿ ಒಟ್ಟು ಮೊತ್ತ ತಿಳಿಸದೇ ಟೆಂಡರ್ ಕರೆಯಲಾಗಿದೆ ಎಂದು ಮಾಜಿ ಡಿಸಿಎಂ ದೂರಿದರು.


ಕೇಂದ್ರ ಸರ್ಕಾರದ ನಿಯಮಾವಳಿಯನ್ನೂ ಜಾರಿ ಮಾಡಿಲ್ಲ. ಪ್ರಿಬಿಡ್‍ನಲ್ಲಿ ರಾಜಶ್ರೀ ಯಾಕೆ ಬಂದಿಲ್ಲ ಎಂದು ಪ್ರಶ್ನಿಸಿದ ಅವರು, ಮೈಸೂರಿನಲ್ಲಿ ಗರಿಷ್ಠ ಸ್ಮಾರ್ಟ್ ಮೀಟರ್ ತಯಾರಾಗುತ್ತದೆ. ಅರ್ಹರನ್ನು ಹೊರಗಿಟ್ಟು ಬರೀ ಫೋನ್ ತಯಾರಕರನ್ನು ಆಯ್ಕೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಒಂದು ಲಕ್ಷ ಸ್ಮಾರ್ಟ್ ಮೀಟರ್ ಅಳವಡಿಸಿದ ಅನುಭವ ಇರಬೇಕು. ಅದನ್ನು ಬಿಟ್ಟು ಉತ್ಪಾದನೆಯೇ ಮಾಡದ 10 ಲಕ್ಷ ಸಾಮಾನ್ಯ ಮೀಟರ್ ಅಳವಡಿಕೆಯನ್ನೇ ಮಾನದಂಡ ಮಾಡಿದ್ದಾರೆ. ಮೊದಲು ಟ್ರಾನ್ಸ್‌ಫಾರ್ಮರ್‌, ಫೀಡರ್​ಗಳಿಗೆ ಇದನ್ನು ಅಳವಡಿಸಿ ಸಾಗಾಟದಲ್ಲಿ ಆಗುವ ನಷ್ಟವನ್ನು ತಿಳಿಯಬೇಕಿತ್ತು. ಬಳಿಕ ರಾಜ್ಯದ ಗ್ರಾಹಕರಿಗೆ ಇದನ್ನು ಅಳವಡಿಸಬೇಕಿತ್ತು. ಕೇಂದ್ರದ ಆರ್​ಡಿಎಸ್‍ಎಸ್ ಅಡಿ ಸಿಗುವ 3 ಸಾವಿರ ಕೋಟಿ ಹಣವನ್ನು ಬಳಸಿಲ್ಲ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ಆರೋಪಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ