Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಟಿಡಿ ಕ್ಷೇತ್ರದಲ್ಲಿ ಬೃಹತ್ ‘ಜನತಾದಳ ಸಮಾವೇಶ’

Advertisement
Advertisement

ಚಂದ್ರವಳ್ಳಿ ನ್ಯೂಸ್, ಮೈಸೂರು:
ಜೆಡಿಎಸ್ ಪಕ್ಷದಿಂದ ಮೈಲುಗಾಲ ದೂರ ಸರಿದಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ (ಜಿಟಿಡಿ) ಅವರ ತವರು ಅಂಗಳದಲ್ಲೇ ದಳಪತಿಗಳು ಭರ್ಜರಿ ರಾಜಕೀಯ ತಂತ್ರಗಾರಿಕೆ ನಡೆಸಿದ್ದಾರೆ. ಜಿಟಿಡಿ ಕ್ಷೇತ್ರದಲ್ಲಿ ಬೃಹತ್ ಜನತಾದಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ತಂದೆಯನ್ನು ಸೈಡ್‌ಲೈನ್ ಮಾಡಿ ಮಗನಿಗೆ ಮಣೆ ಹಾಕಿರುವುದು ಮೈಸೂರು ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಬ್ಯಾನರ್‌ನಿಂದ ಜಿಟಿಡಿ ಫೋಟೋ ಔಟ್, ಮಗನಿಗೆ ಹೈಕಮಾಂಡ್ ಜೈ!:
ಈ ಸಮಾವೇಶದ ಪ್ರಮುಖ ಹೈಲೈಟ್ ಎಂದರೆ, ಕಾರ್ಯಕ್ರಮದ ಯಾವುದೇ ಬ್ಯಾನರ್, ಪೋಸ್ಟರ್ ಅಥವಾ ಕಟೌಟ್‌ಗಳಲ್ಲಿ ಸ್ಥಳೀಯ ಶಾಸಕ ಜಿ.ಟಿ. ದೇವೇಗೌಡ ಅವರ ಫೋಟೋಗೆ ಜಾಗ ನೀಡಿಲ್ಲ. ಬದಲಾಗಿ, ಅವರ ಪುತ್ರ ಜಿ.ಟಿ. ಹರೀಶ್ ಗೌಡ ಅವರ ಮುಂದಾಳತ್ವದಲ್ಲೇ ಇಡೀ ಕಾರ್ಯಕ್ರಮ ರೂಪಿತಗೊಂಡಿದೆ. ಪಕ್ಷದ ಹಿರಿಯ ನಾಯಕನನ್ನು ಕಡೆಗಣಿಸಿ, ಅವರ ವಾರಸುದಾರನ ನೇತೃತ್ವದಲ್ಲಿ ಸಮಾವೇಶ ನಡೆಸಿರುವುದು ದಳಪತಿಗಳ ಹೊಸ ಪ್ಲಾನ್ ಅನ್ನು ಬಹಿರಂಗಪಡಿಸಿದೆ.

ಕುತೂಹಲ ಮೂಡಿಸಿದ ವರಿಷ್ಠರ ನಡೆ:
ಇತ್ತೀಚೆಗಷ್ಟೇ ಜಿ.ಟಿ. ದೇವೇಗೌಡರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಭೇಟಿಯ ಬೆನ್ನಲ್ಲೇ ಜಿಟಿಡಿ ಜೆಡಿಎಸ್‌ನಲ್ಲಿ ಮತ್ತೆ ಸಕ್ರಿಯರಾಗಬಹುದು ಎಂಬ ಊಹಾಪೋಹಗಳು ಎದ್ದಿದ್ದವು. ಆದರೆ, ಇದೀಗ ಅವರದ್ದೇ ಕ್ಷೇತ್ರದಲ್ಲಿ ಅಪ್ಪನನ್ನು ದೂರವಿಟ್ಟು, ಮಗನ ಹೆಗಲಿಗೆ ಜವಾಬ್ದಾರಿ ನೀಡಿ ಬೃಹತ್ ಸಮಾವೇಶ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ರಾಜಕೀಯ ಲೆಕ್ಕಾಚಾರ:
ಜಿ.ಟಿ. ದೇವೇಗೌಡರು ಪಕ್ಷದಿಂದ ದೂರವಿದ್ದರೂ, ಅವರ ಕುಟುಂಬದ ಹಿಡಿತವನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಳಸಿಕೊಳ್ಳಲು ಜೆಡಿಎಸ್ ಹೈಕಮಾಂಡ್ ಮುಂದಾಗಿದೆ. ತಂದೆಯ ಬದಲು ಮಗ ಹರೀಶ್ ಗೌಡ ಅವರನ್ನು ಮುಂಚೂಣಿಗೆ ತರುವ ಮೂಲಕ ಕ್ಷೇತ್ರದಲ್ಲಿ ಹೊಸ ನಾಯಕತ್ವ ಸೃಷ್ಟಿಸಲು ದಳಪತಿಗಳು ಸ್ಕೆಚ್ ಹಾಕಿದಂತಿದೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!