Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದಯನಿಧಿ ಸ್ಟ್ಯಾಲಿನ್ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಗಳ ಬೃಹತ್ ಪ್ರತಿಭಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ವಿಜಯನಗರ:
ಸನಾತನ ಹಿಂದೂ ಧರ್ಮದ ಕುರಿತು ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟ್ಯಾಲಿನ್ ನೀಡಿದ ಹೇಳಿಕೆಯನ್ನು ಖಂಡಿಸಿ ಹೊಸಪೇಟೆಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ವಡಕರಾಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರತಿಭಟನಾಕಾರರು ವಡಕರಾಯ ವೃತ್ತದಿಂದ ಪ್ರಮುಖ ರಸ್ತೆ ಹಾಗೂ ವೃತ್ತಗಳ ಮೂಲಕ ಭಾರಿ ಮೆರವಣಿಗೆ ನಡೆಸಿದರು. ಪ್ರತಿಭಟನೆಯಲ್ಲಿ ಸನಾತನ ಧರ್ಮಕ್ಕೆ ಅವಮಾನ ಸಹಿಸುವುದಿಲ್ಲಎಂಬ ಘೋಷಣೆಗಳು ಮೊಳಗಿದವು.

ಸ್ವಾಮೀಜಿಗಳು, ಹಿಂದೂಪರ ಸಂಘಟನೆಗಳ ಮುಖಂಡರು, ವಿವಿಧ ಸಮುದಾಯಗಳ ನಾಯಕರು, ಯುವಕರು ಹಾಗೂ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟುಮಾಡುವಂತಹ ಹೇಳಿಕೆಗಳನ್ನು ರಾಜಕೀಯ ನಾಯಕರು ನೀಡಬಾರದು ಎಂದು ಆಗ್ರಹಿಸಿದರು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಒದಗಿಸಿತ್ತು.

 

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊದಲ ದಿನವೇ 32,797 ಗಣತಿ ನಮೂನೆಗಳ ವಿತರಣೆ: ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ವಿಶಿಷ್ಟ ಗೋಡೆ ಪತ್ರಿಕೆ ಅನಾವರಣವೈದ್ಯರಿಗೆ ನಮನ ​ಚಾಮರಾಜನಗರ ವಿಶ್ವವಿದ್ಯಾಲಯದ  ಕುಲಪತಿ ಪ್ರೊ. ಎಂ. ಆರ್. ಗಂಗಾಧರ ಅವರು ಪ್ರದರ್ಶನ ಉದ್ಘಾಟಿಸಿದರು.ಬೆಂಗಳೂರು ನಿಧಿ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್‌ಅಶೋಕ್ ತೀವ್ರ ವಾಗ್ದಾಳಿ!ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಪಾರದರ್ಶಕತೆ: ಚುನಾವಣಾ ಆಯೋಗಕ್ಕೆ ಕರ್ನಾಟಕ ಸಚಿವ ಸಂಪುಟದ ಬಿಗಿ ಷರತ್ತುಗಳು!ಖ್ಯಾತ ಹಿರಿಯ ಚಿತ್ರ ಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ!ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಬೇಲೂರು ಶಾಸಕ ಆಣೆ ಪ್ರಮಾಣ!ಜಿಲ್ಲಾಸ್ಪತ್ರೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಕೋಟ್ಯಂತರ ಮೌಲ್ಯದ ಸಲಕರಣೆ ಭಸ್ಮ, ಕೂದಲೆಳೆ ಅಂತರದಲ್ಲಿ ತಪ್ಪಿದ ಪ್ರಾಣಾಪಾಯ!ವಿಚಾರಣೆ ನೆಪದಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಪಿಎಸ್‌ಐ ಪೋಕ್ಸೋ ಕಾಯ್ದೆಯಡಿ ಬಂಧನ!