Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಜನತೆ ಸುಖ, ಸಮೃದ್ಧಿ, ಶಾಂತಿಯಿಂದಿರಲಿ, ಬಡವರ, ರೈತರ ಮೊಗದಲ್ಲಿ ಸಂತೋಷ ಸದಾ ಇರಲಿ-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊಸ ವರ್ಷದ ಮೊದಲ ದಿನ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ
, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ.

2026ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ ಹಾಗೂ ರಾಜ್ಯದ ಜನತೆ ಸುಖ, ಸಮೃದ್ಧಿ, ಶಾಂತಿಯಿಂದಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಸದಾ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭ ಹಾರೈಸಿ, ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಉತ್ತಮ ಮಳೆ - ಬೆಳೆಯಿಂದ ಹೆಚ್ಚಿನ ಸಮಸ್ಯೆ ಪರಿಹಾರವಾಗುತ್ತದೆ. 2025 ರಲ್ಲಿ ಭಾರೀ ಮಳೆಯಾದ ಜೊತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ನಿಂದ ಹಾಗೂ ರಾಜ್ಯ ಸರ್ಕಾರ ಎಸ್ ಡಿ ಆರ್ ಎಫ್ ನಿಂದ ಪರಿಹಾರವನ್ನು ನೀಡುತ್ತದೆ.

ರೈತರಿಗೆ ಹೆಚ್ಚಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025 ರಲ್ಲಿ ಖುಷ್ಕಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದು ಸಿಎಂ ತಿಳಿಸಿದರು.

ವಿರೋಧ ಪಕ್ಷಗಳು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ. ರಾಜ್ಯದ ಎಲ್ಲ ಜನತೆಗೆ ನ್ಯಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಆಗಿದೆ.

ಹೊಸ ವರ್ಷ ಜನರ ಕೆಲಸ ನಿರ್ವಹಿಸಲು ಹೊಸ ಉತ್ಸಾಹದಿಂದ ಶ್ರಮಿಸಬೇಕು. ಅಧಿಕಾರಿಗಳು 30-40 ವರ್ಷಗಳು ಅಧಿಕಾರದಲ್ಲಿದ್ದರೆ, ನಾವು ಅಧಿಕಾರದಲ್ಲಿ ಐದು ವರ್ಷಗಳು ಇರುತ್ತೇವೆ. ರಾಜ್ಯದ ಜನರು ನಿನ್ನೆ ಮತ್ತು ಇಂದು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ನೂತನ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವ ಇಲಾಖೆಗೆ ಅಭಿನಂದನೆಗಳು.

ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು.




ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಜೊತೆಗೆ ಪೊಲೀಸ್ ಇಲಾಖೆಯ ಐಜಿಪಿ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಸಿಸಿಎಫ್ ಮತ್ತು ಮೇಲ್ಮಟ್ಟದ ಅಧಿಕಾರಿಗಳು ಮುಖ್ಯಮಂತ್ರಿ‌ಅವರನ್ನು ಇಂದು ಭೇಟಿಯಾಗಿ ಹೊಸ ವರ್ಷದ ಶುಭ ಹಾರೈಸಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಲೀಂ ಸೇರಿ‌ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು