ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಹಾಗೂ ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ತಹಶೀಲ್ದಾರ್ ಸಿದ್ದೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಯಂತಿ ಆಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಶಿಷ್ಟಾಚಾರ ಪಾಲನೆಯೊಂದಿಗೆ ನಾಡಪ್ರಭು ಕೆಂಪೇಗೌಡ ಹಾಗೂ ಡಾ.ಫ.ಗು.ಹಳಕಟ್ಟಿಯವರ ಜಯಂತಿಗಳನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗುವುದು. ಮಹನೀಯರ ಭಾಚಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಗುವುದು. ಮಹನೀಯರ ಕೊಡಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು. ಸಾರ್ವಜನಿಕರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶ್ವಸ್ವಿಗೊಳಸಬೇಕು ತಹಶೀಲ್ದಾರ್ ಸಿದ್ದೇಶ್ ಕೋರಿದರು.
ಕೆಂಪೇಗೌಡ ಜಯಂತಿ ಅಂಗವಾಗಿ ಪ್ರೌಢಶಾಲೆ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು.
ವಿಜೇತರಿಗೆ ಜಯಂತಿ ಕಾರ್ಯಕ್ರಮದಂದು ಸನ್ಮಾನಿಸಲಾಗುವುದು. ಡಾ.ಫ.ಗು.ಹಳಕಟ್ಟಿಯವರ ಜನ್ಮದಿನವನ್ನು ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ ಎಂದು ಸರ್ಕಾರ ಘೋಷಿಸಿದೆ. ಜಿಲ್ಲೆಯ ಸಾಹಿತ್ಯಾಸಕ್ತರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿ ಹಳಕಟ್ಟಿಯವರಿಗೆ ಗೌರವ ಸಲ್ಲಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್ ಸಭೆಯಲ್ಲಿ ತಿಳಿಸಿದರು.
ಕೆಂಪೇಗೌಡ ಜಯಂತಿಯಂದು ಜಿಲ್ಲಾ ಒಕ್ಕಲಿಗ ಸಮುದಾಯ ವತಿಯಿಂದ ಸಮುದಾಯದ ಪ್ರತಿಭಾನಿತ್ವತ ವಿದ್ಯಾರ್ಥಿಗಳಿಗೆ ಸನ್ಮಾನ ಏರ್ಪಡಿಸಲಾಗುವುದು. ಇದಕ್ಕೆ ಜಿಲ್ಲಾಡಳಿತದಿಂದ ಅವಕಾಶ ಕಲ್ಪಿಸುವಂತೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಚೇತನ್ ಕೋರಿದರು.
ಸಭೆಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಜಗನ್ನಾಥ್, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಮಳಲಿ ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.


