E-PAPER
14 Nov 2026, 03:00:12 PM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಾಧ್ಯಮ‌ಸಲಹೆಗಾರ ಹೊಣೆಗಾರಿಕೆ ಹೂವಿನ‌ಹಾದಿ ಅಲ್ಲ, ಮುಳ್ಳಿನ ಹಾಸಿಗೆ: ಕೆ.ವಿ.ಪ್ರಭಾಕರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು;
ಮಾಧ್ಯಮ‌ಸಲಹೆಗಾರ ಹೊಣೆಗಾರಿಕೆ ಹೂವಿನ‌ಹಾದಿ ಅಲ್ಲ
, ಮುಳ್ಳಿನ ಹಾಸಿಗೆ ಇದ್ದ ಹಾಗೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ "ಮಾಧ್ಯಮ-ಸಂವಾದ"ದಲ್ಲಿ ಮಾತನಾಡಿದರು.

ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ ಎನ್ನುವ ಸಮಾಧಾನ ಕೂಡ ಇದೆ. ಆದರೆ, ನನಗೆ ಒದಗಿ ಬಂದಿರುವ ಹೊಣೆಗಾರಿಕೆ ಬಗ್ಗೆ ನನಗೆ ಯಾವತ್ತೂ ಭ್ರಮ ನಿರಸನ ಆಗಿಲ್ಲ ಎಂದರು.

ಸಿಎಂ ಯಾವತ್ತೂ ಹೇಳಿಲ್ಲ-
ಇವತ್ತಿನವರೆಗೂ ಮುಖ್ಯಮಂತ್ರಿಗಳು ಒಂದು ದಿನ ಕೂಡ
, "ತಮ್ಮ ವಿರುದ್ಧ ಇಂಥಾ ಚಾನಲ್ ನಲ್ಲಿ ಸುದ್ದಿ ಬಂದಿದೆ. ನೋಡು" ಎನ್ನುವ ಒಂದು ಮಾತನ್ನೂ ಹೇಳಿಲ್ಲ. ಮಾಧ್ಯಮ ಸ್ವಾತಂತ್ರ್ಯಕ್ಕೆ ಮುಖ್ಯಮಂತ್ರಿಗಳು ಯಾವತ್ತೂ ಧಕ್ಕೆ ಆಗದಂತೆ ನೋಡಿಕೊಂಡಿದ್ದಾರೆ ಎಂದರು.

ಕಠಿಣ ಷರತ್ತುಗಳು ವಾಪಸ್ಸು:
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ವಿಧಿಸಿರುವ ಕಠಿಣವಾದ ಎರಡು ಷರತ್ತುಗಳನ್ನು ಸಡಿಲಗೊಳಿಸಲು ಸಭೆ ಮಾಡಿ ತೀರ್ಮಾನಿಸಲಾಗಿದೆ. ಈ ಬಗ್ಗೆ ವಾರದಲ್ಲಿ ಆದೇಶ ಹೊರಡಿಸಲಾಗುವುದು. ಇದರಿಂದ ಆರು ಸಾವಿರಕ್ಕೂ ಹೆಚ್ಚಿನ ಪತ್ರಕರ್ತರಿಗೆ ಸವಲತ್ತು ಸಿಗುವ ಸಾಧ್ಯತೆಗಳಿವೆ ಎಂದರು.

ಪತ್ರಕರ್ತರ ಸಂಘ ಮತ್ತು ಪತ್ರಕರ್ತ ಸಮುದಾಯ ಅವರ ಒತ್ತಡದಿಂದಲೇ ರಾಜ್ಯದಲ್ಲಿ 'ಜಾಹಿರಾತು ನೀತಿ' ತರಲಾಗಿದೆ. ವೃತ್ತಿಪರವಾಗಿ ಕಷ್ಟಪಟ್ಟು ಪತ್ರಿಕೆ ಮಾಡುವವರಿಗೆ ನೆರವಾಗಬೇಕು ಎನ್ನುವ ಕಾಳಜಿ ಜಾಹಿರಾತು ನೀತಿಯ ಹಿಂದಿದೆ. ಜಾಹಿರಾತಿ ದರ ಪರಿಷ್ಕರಣೆ ಕೂಡ ಚರ್ಚೆಯಲ್ಲಿದೆ ಎಂದರು.

ಜಾಹಿರಾತು ನೀಡಿಕೆಯಲ್ಲಿನ ತಾರತಮ್ಯ ನಿವಾರಣೆಗೆ ಕ್ರಮ-
ಪತ್ರಿಕೆಗಳಿಗೆ ಜಾಹಿರಾತು ನೀಡುವ ವಿಚಾರದಲ್ಲಿ ಕೆಲವು ಸಮುದಾಯಗಳಿಗೆ ಮಾತ್ರ ಕೆನೆ ಪದರದ ಮಿತಿ ಹಾಕಿದ್ದು
, ಒಂದು ಸಮುದಾಯಕ್ಕೆ ಮಾತ್ರ ಕೆನೆಪದರ ಇಲ್ಲದಿರುವುದರಿಂದ ಬಹುತೇಕ ಸಮುದಾಯಗಳ ಮಾಲೀಕರು, ಸಂಪಾದಕರುಗಳು ವಿಪರೀತ ನಷ್ಟ ಅನುಭವಿಸಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿ ಲೋಪಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಾಹಿರಾತು ನೀತಿಯಲ್ಲಿ ಬಹುತೇಕ ಸಮಸ್ಯೆಗಳು ಬಗೆಹರಿದಿವೆ ಎಂದರು.

ವೃತ್ತಿಪರವಾಗಿ, ನಿಯಮಿತವಾಗಿ ಪ್ರಕಟವಾಗುವ-
ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹಿರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ
, ನನ್ನದೂ ಆಗಿದೆ ಎಂದರು.

ಮೂವರಿಗೆ ಅರ್ಪಿಸಿದ ಕೆವಿಪಿ-
ತಮಗೆ ಸಿಗುವ ಸಾರ್ವಜನಿಕ ಸನ್ಮಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ
, ಕೋಲಾರದ ಪತ್ರಕರ್ತರು ಮತ್ತು ರಾಜ್ಯದ ಪತ್ರಕರ್ತ ಸಮುದಾಯಕ್ಕೆ ಅರ್ಪಿಸಿದ ಕೆ.ವಿ.ಪ್ರಭಾಕರ್ ಅವರು, ಇದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಓದಿದ ಶಾಲೆಗೆ ನೆರವಾಗಿದ್ದು ಸಮಾಧಾನ ತಂದಿದೆ-
ಪತ್ರಕರ್ತ ಸಮುದಾಯಕ್ಕೆ
, ಪತ್ರಿಕಾ ವಿತರಕ ಸಮುದಾಯಕ್ಕೆ ನೆರವಾಗುವ ಜೊತೆಗೆ ನೂರಾರು ರೀತಿಯ ನೆರವು ಸರ್ಕಾರದಿಂದ ಒದಗಿಸಲಾಗಿದೆ. ಇವುಗಳ ಆಚೆಗೆ ನಾನು ಓದಿದ ಶಾಲೆಗೆ ಸರ್ಕಾರದ ನೆರವು ಒದಗಿಸಲು ಸಾಧ್ಯವಾಗಿದ್ದು, ಈ ಸರ್ಕಾರಿ ಶಾಲೆಗೆ ಮರುಜೀವ ಬಂದು ವಿದ್ಯಾರ್ಥಿಗಳ ಸಂಖ್ಯೆ 100ರ ಗಡಿ ದಾಟಿರುವುದು ಸಮಾಧಾನ ತಂದಿದೆ ಎಂದರು.

ಪರಿಣಾಮಕಾರಿ ಕೆಲಸ:
KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಪ್ರಭಾಕರ್ ಅವರು ಸರ್ಕಾರ ಮತ್ತು ಸಂಘಟನೆ ನಡುವೆ ಸೇತುವೆ ರೀತಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಮಾಧ್ಯಮ‌ಅಕಾಡೆಮಿ‌ಅಧ್ಯಕ್ಷೆ ಆಯೆಷಾ ಖಾನಂ ಮಾತನಾಡಿ, ಪ್ರಭಾಕರ್ ಅಧಿಕಾರ ಸ್ವೀಕಾರ ಮಾಡಿ ಮೂರು ವರ್ಷ ತುಂಬಿದ ಸಂದರ್ಭದ ಕಾರ್ಯಕ್ರಮವನ್ನು ಕೆಯುಡಬ್ಲ್ಯೂಜೆ ಅಚ್ಚುಕಟ್ಟಾಗಿ ಸಂಘಟಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಪ್ರಭಾಕರ್ ಇನ್ನೂ ಉನ್ನತ ಹುದ್ದೆ ಅಲಂಕರಿಸಲಿ ಎಂದು ಶುಭ ಹಾರೈಸಿದರು.

ರಾಜ್ಯ ಪದಾಧಿಕಾರಿಗಳಾದ ಜಿ.ಸಿ.ಲೋಕೇಶ, ಸೋಮಶೇಖರ್ ಕೆರಗೋಡು, ವಾಸುದೇವ ಹೊಳ್ಳ, ಎನ್.ರವಿಕುಮಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯದ ಹೂಗಳಿಗೆ ಪ್ರೀತಿಯ ನೀರೆರೆದು, ಭವಿಷ್ಯದ ಕನಸುಗಳಿಗೆ ರೆಕ್ಕೆ ನೀಡಿ!ವಿಶ್ವ ಮಧುಮೇಹ ದಿನ – ಅರಿವಿನ ಬೆಳಕೇ ಆರೋಗ್ಯದ ರಕ್ಷಾಕವಚಎಲ್ಲಾ ನನ್ನ ಮುದ್ದು ಮಕ್ಕಳಿಗೆ ಮಕ್ಕಳ ದಿನಾಚರಣೆ ಹಾರ್ದಿಕ ಶುಭಾಶಯಗಳುಸಹಕಾರ ಕ್ಷೇತ್ರದ ಅನುಪಮ ಸೇವೆಗೆ ಎಚ್.ಎಂ. ಮಂಜುನಾಥಪ್ಪ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರ ಸ್ವಾಭಿಮಾನ ಒಗ್ಗಟ್ಟಿನ ಸಂಕೇತ: ತ. ನ ಪ್ರಭುದೇವ್ಡಾ. ವೆಂಕಟರೆಡ್ಡಿ ಪ್ರಶಸ್ತಿ ಪುರಸ್ಕೃತ ಮಹಾಬಲೇಶ್ವರ್ ರವರಿಗೆ ಕರವೇ ಅಭಿನಂದನೆಗೂಳ್ಯ ರಸ್ತೆ ಡಾಂಬರಿಕರಣಕ್ಕೆ ಚಾಲನೆಕರ್ನಾಟಕಕ್ಕೆ 15,600 ಕೋಟಿ ಅಭಿವೃದ್ಧಿ ಕೊಡುಗೆ: ಪ್ರಧಾನಿ ಮೋದಿರಾಜ್ಯದ ಪ್ರಗತಿ ಮತ್ತು ಮೆಟ್ರೋ ವಿಸ್ತರಣೆಗೆ ಪ್ರಧಾನಿ ಮೋದಿ ಸಹಕಾರ ಕೋರಿದ ಸಿಎಂ ಡಿ.ಕೆ. ಶಿವಕುಮಾರ್ಬರ ಪರಿಹಾರ, ಕಬ್ಬು ಬೆಳೆಗಾರರ ನೆರವು ಮತ್ತು ಮೆಟ್ರೋ ಯೋಜನೆಗಳಿಗೆ ಅನುದಾನಕ್ಕಾಗಿ ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ