Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಚೇತನ ಮಕ್ಕಳಿಗಾಗಿ ವೈದ್ಯಕೀಯ ಶಿಬಿರ-ಜಿಪಂ ಸಿಇಓ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶೇಷ ಚೇತನ ಮಕ್ಕಳಿಗಾಗಿ ಪ್ರತಿ ತಾಲ್ಲೂಕು ಹಂತದಲ್ಲಿ ವೈದ್ಯಕೀಯ ಶಿಬಿರ ಆಯೋಜಿಸಿ, ವೈದ್ಯರು ಮಕ್ಕಳಿಗೆ ಶಿಫಾರಸ್ಸು ಮಾಡಿದ ಸಾಧನ ಸಲಕರಣೆಗಳನ್ನ ವಿತರಿಸಲು ಕ್ರಮ ಕೈಗೊಳ್ಳುವಂತೆ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಕಾರ್ಯಲಯದಲ್ಲಿ ಸೋಮವಾರ 2024-25 ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿಯಲ್ಲಿ ವಿಶೇಷ ಅಗತ್ಯತೆ ಇರುವ ಮಕ್ಕಳಿಗೆ ಬೇಕಾಗುವ ಸಾಧನ ಸಲಕರಣೆಗಳನ್ನು ಒದಗಿಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವೈದ್ಯರು ಮಕ್ಕಳಿಗೆ ಶಿಫಾರಸ್ಸು ಮಾಡಿದ ಸಾಧನ ಸಲಕರಣೆಗಳನ್ನ ಅಡಿಪ್ ಯೋಜನೆ ಅಡಿಯಲ್ಲಿ ಒದಗಿಸಲಾಗುತ್ತಿದೆ. ಸಾಧನ ಸಲಕರಣೆಗಳನ್ನು ಒಟ್ಟು ವೆಚ್ಚದ ಶೇ.40 ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಹಾಗೂ ಶೇ.60 ನ್ನು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ ಖರೀದಿಸಲು ಕ್ರಮವಹಿಸಬೇಕು.

ದಿನಾಂಕ.06.10.2024 ರಿಂದ 07.11.2024 ರವರೆಗೆ ತಾಲ್ಲೂಕು ಮಟ್ಟದ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಅರ್.ಮಂಜುನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಶಸ್ತçಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ವೆಂಕಟೇಶ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ