ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಜನರೊಂದಿಗೆ ಜನತಾದಳ’ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವು ಅತ್ಯಂತ ಯಶಸ್ವಿಯಾಗಿ ಜರುಗಿತು.
ಈ ಬೃಹತ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಂಡಿದ್ದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಸಂಖ್ಯಾತ ಕಾರ್ಯಕರ್ತರ ಪಡೆಯನ್ನು ಅತ್ಯಂತ ಸಂತೋಷದಿಂದ ಭೇಟಿ ಮಾಡಿದ್ದಾಗಿ ತಿಳಿಸಿದರು. ಕ್ಷೇತ್ರಾದ್ಯಂತ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಭರ್ಜರಿ ಚಾಲನೆ ನೀಡಲಾಯಿತು.
ಈ ಯಶಸ್ವಿ ಸಮಾವೇಶದಲ್ಲಿ ಜೆಡಿಎಸ್ ಪಕ್ಷದ ಪ್ರಮುಖ ರಾಜ್ಯ ಮತ್ತು ಸ್ಥಳೀಯ ನಾಯಕರು ಭಾಗವಹಿಸಿದ್ದರು.
ಮಾಜಿ ಸಚಿವ ಸಾ.ರಾ. ಮಹೇಶ್. ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ. ಶಾಸಕ ಜಿ.ಡಿ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎ.ಎನ್. ಮಂಜೇಗೌಡ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಶಾಸಕ ಕೆ. ಮಹದೇವ್, ಮೈಸೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಶ್ವಿನ್ ಕುಮಾರ್ ಸೇರಿದಂತೆ ಮತ್ತಿತರ ಮುಖಂಡರು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸುವ ಮೂಲಕ ಜೆಡಿಎಸ್ ಪಕ್ಷದ ಸಂಘಟನಾ ಶಕ್ತಿಯನ್ನು ಪ್ರದರ್ಶಿಸಿದರು. ಮುಂಬರುವ ದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ಈ ಸದಸ್ಯತ್ವ ಅಭಿಯಾನ ಮಹತ್ವದ ಪಾತ್ರ ವಹಿಸಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.


