Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಾನಸಿಕ ಸಮಸ್ಯೆಗಳು ವ್ಯಕ್ತಿಗತವಲ್ಲ, ಅವು ಸಮಾಜದಲ್ಲಿವೆ-ಡಾ.ಶರತ್ ಅನಂತಮೂರ್ತಿ

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಶಿವಮೊಗ್ಗದ ಮಾನಸ ಟ್ರಸ್ಟ್‌ನ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ಸ್ನಾತಕೋತ್ತರ ಶೈಕ್ಷಣಿಕ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಾಗಿ ಪ್ರಶಸ್ತಿ ಪ್ರದಾನ ಮಾಡುವ ಶಿಕ್ಷಣೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಪ್ರಶಸ್ತಿ ಪ್ರದಾನ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ ಮನೋವಿಜ್ಞಾನದ ವಿಕಾಸದ ಹಲವು ಮಜಲುಗಳನ್ನೂ ಅದರ ಆಯಾಮಗಳನ್ನೂ ವಿವರಿಸಿದರು.

ವಿವಿಧ ಸಿದ್ಧಾಂತಗಳೂ, ಜ್ಞಾನಿಗಳು ಈ ವಿಜ್ಞಾನದ ಬೆಳವಣಿಗೆಗೆ ನೀಡಿದ ತಾತ್ವಿಕ ಅಂಶಗಳನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದು. ಆಧುನಿಕ ಯುಗದಲ್ಲಿ ಮನೋವಿಜ್ಞಾನ ಹಾಗೂ ತತ್ವಶಾಸ್ತ್ರಗಳ  ಪರಸ್ಪರ ಪೂರಕವಾದ ಅಧ್ಯಯನ ಅಗತ್ಯವಿದೆ ಎಂದು ತಿಳಿಸಿದರು.

ಇಂದಿನ ಮಾನಸಿಕ ಸಮಸ್ಯೆಗಳು ವ್ಯಕ್ತಿಗತವಲ್ಲ. ಅವು ಸಮಾಜದಲ್ಲಿ ಇದೆ ಎಂದು ತೀಕ್ಷ್ಣವಾಗಿ ಹೇಳಿದ ಅವರು ಆಧುನಿಕ ಸಮಾಜದ ಆಗುಹೋಗುಗಳು, ತಲ್ಲಣಗಳು ವ್ಯಕ್ತಿಯ ಭಾವನಾತ್ಮಕ ಸೂಕ್ಷ್ಮತೆಯನ್ನು ಕ್ಷೀಣಿಸುವಂತೆ ಮಾಡಿದೆ ಎಂದು ವಿಷಾದಿಸಿದರು.

 ಮನೋವಿಜ್ಞಾನದ ವಿದ್ಯಾರ್ಥಿಗಳು ಸಂಕೀರ್ಣ ಮನಸ್ಸಿನ ವಿಚಾರಗಳನ್ನು ಶ್ರದ್ಧೆಯಿಂದ ಅರಿತು ಕೆಲಸ ಮಾಡಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಶೈಕ್ಷಣಿಕ ನಿರ್ದೇಶಕಿ ಡಾ. ಪ್ರೀತಿ ವಿ ಶಾನ್‌ಭಾಗ್, ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜನ್ನು ೨೦೧೭ ರಲ್ಲಿ ಪ್ರಾರಂಭಿಸುವ ಮೂಲಕ ಸಂಕೀರ್ಣವಾದ ಮನೋವಿಜ್ಞಾನದ ವಿಷಯಕ್ಕೆ ಸಂಬಂಧಿಸಿದ ವಿವಿಧ ವಿಜ್ಞಾನಗಳ ಕುರಿತು ಅಧ್ಯಯನಗಳನ್ನು ನಡೆಸಲು ಸಾಧ್ಯವಾಗಿದೆ ಎಂದರು.

ಕಾಲೇಜಿನಲ್ಲಿ ಪಠ್ಯ ಮಾತ್ರವಲ್ಲದೆ ಹಲವಾರು ಶೈಕ್ಷಣಿಕ, ಪಠ್ಯೇತರ ಚಟುವಟಿಕೆಗಳು, ತರಬೇತಿಗಳು ಹಾಗೂ ಸಂಶೋಧನೆಗಳು ನಡೆಯುತ್ತಿವೆ ಎಂದರು.

 ಈ ಸಮಾರಂಭದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಮನ:ಶಾಸ್ತ್ರ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾನಸ ಟ್ರಸ್ಟ್‌ನಿರ್ದೇಶಕರಾದ ಡಾ.ರಜನಿ ಎ ಪೈ, ಡಾ.ರಾಜೇಂದ್ರ ಚೆನ್ನಿ, ಸಿಸ್ಟರ್ ಮಾರಿ ಇವ್ಲಿನ್, ಡಾ. ಪ್ರೀತಿ ವಿ. ಶಾನಭಾಗ್ ಹಾಗೂ ವಿಭಾಗದ ಮುಖ್ಯಸ್ಥೆ ಡಾ.ಅರ್ಚನಾ ಭಟ್, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

ಉಪನ್ಯಾಸಕ ಮಂಜುನಾಥ ನಿರೂಪಿಸಿದರು. ಕು. ಹನಿ ಕುರುವರಿ ವರದಿ ಮಂಡಿಸಿದರು. ಕು. ಶಿಲ್ಪಾ ಪ್ರಶಸ್ತಿ ಪತ್ರ ವಿತರಣೆ ನಿರ್ವಹಿಸಿದರು. ಡಾ.ಅರ್ಚನಾಭಟ್ ವಂದಿಸಿದರು. ಪ್ರಾಂಶುಪಾಲೆ ಡಾ. ಸಂಧ್ಯಾಕಾವೇರಿ ಕೆ.  ಅಧ್ಯಕ್ಷತೆ ವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ