ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 16 ರಂದು ನಗರದ ಸ್ಟೇಡಿಯಂ ರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಆವರಣದಲ್ಲಿ ವಿಶೇಷ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ 8 ಕ್ಕೂ ಹೆಚ್ಚಿನ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ.
18 ರಿಂದ 30 ವರ್ಷದೊಳಗಿನ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪೆÇ್ಲಮೊ ಮತ್ತು ಯಾವುದೇ ಪದವಿ ಪಾಸಾಗಿರುವ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ಸಂದರ್ಶನ ಜರುಗಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲಾತಿಗಳೊಂದಿಗೆ 5 ಪ್ರತಿ ಬಯೋಡಾಟಾ ತರುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆಗಳಾದ 7022459064, 8105619020, 9945587060 ಸಂಪರ್ಕಿಸಬಹುದಾಗಿದೆ.



