Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಡಿ.ಸುಧಾಕರ್. ಅವರಿಗೆ ಸಿಎಂ-ಡಿಸಿಎಂ ಅವರಿಂದ ಅಂತಿಮ ವಿದಾಯ

Advertisement

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ವಾಸಕೋಶದ ಸೋಂಕು ಹಾಗೂ ಅನಾರೋಗ್ಯದಿಂದ ಭಾನುವಾರ ನಿಧನರಾದ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್  ಅವರ ಅಂತ್ಯಕ್ರಿಯೆ ಚಳ್ಳಕೆರೆ ಜೈನಧಾಮದಲ್ಲಿ ಸೋಮವಾರ ಸಂಜೆ ನೆರವೇರಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು.

ಈ ವೇಳೆ ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್,ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳೆ, ಇಂಧನ ಸಚಿವ ಕೆ‌.ಜೆ.ಜಾರ್ಜ್,

ಆಹಾರ ಮತ್ತು ನಾಗರಿಕ ಸರಬಾಜು ಸಚಿವ ಕೆ.ಹೆಚ್.ಮುನಿಯಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅರಣ್ಯ ಸಚಿವ ಈಶ್ವರ ಖಂಡ್ರೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿ ಸಚಿವರು, ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆ ವತಿಯಿಂದ ಮೃತರ ಗೌರವಾರ್ಥ 3ಸುತ್ತಿನ ಕುಶಾಲತೋಪು ಸಿಡಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಒಂದು ನಿಮಿಷದ ಮೌನಾಚರಣೆ ಆಚರಿಸಿಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಧ್ವಜವನ್ನು ಸಚಿವರ ಪತ್ನಿಗೆ ಹಸ್ತಾಂತರಿಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST